ಮಹಾರಾಷ್ಟ್ರದಲ್ಲಿ ಕೊರೋನಾ ಹೊಸ ತಳಿ: ಕರ್ನಾಟಕದಲ್ಲಿ ಕಟ್ಟೆಚ್ಚರ

ಒಮಿಕ್ರೋನ್‌ ರೂಪಾಂತರಿ ಬಿಕ್ಯು.1 ಪತ್ತೆ: ಮುನ್ನೆಚ್ಚರಿಕೆ ಪಾಲಿಸಲು ಕರ್ನಾಟಕ ಸಲಹೆ

Alert on Karnataka due to Coronavirus New Variant in Maharashtra grg

ಬೆಂಗಳೂರು(ಅ.26): ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್‌ನ ಒಮಿಕ್ರೋನ್‌ ತಳಿಯ ಹೊಸ ರೂಪಾಂತರಿ ಬಿಕ್ಯು.1 ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮಾಸ್ಕ್‌ ಧಾರಣೆ, ಗುಂಪು ಸೇರುವಿಕೆಯಿಂದ ದೂರ ಇರುವುದು ಹಾಗೂ ಮೂರನೇ ಡೋಸ್‌ ಲಸಿಕೆ ಪಡೆಯುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಿಗೆ ಸಲಹೆ ನೀಡಿದೆ. ಹೊಸ ತಳಿ ಪತ್ತೆ ಆಗಿರುವ ಹಿನ್ನೆಲೆಯಲ್ಲಿ ಜ್ವರ, ಕೆಮ್ಮು, ನೆಗಡಿ, ಗಂಟಲು ಕೆರೆತ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಕಡ್ಡಾಯವಾಗಿ ಹತ್ತಿರದ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ಕೋವಿಡ್‌ ಪರೀಕ್ಷೆ ನಡೆಸಿ ಫಲಿತಾಂಶ ದೊರೆಯುವವರೆಗೂ ಸ್ವಯಂ ಪ್ರತ್ಯೇಕವಾಸ ಇರಬೇಕು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ತಕ್ಷಣವೇ ಹತ್ತಿರದ ಆಸ್ಪತ್ರೆಯಲ್ಲಿ ವೈದ್ಯಕೀಯ ಆರೈಕೆ ಪಡೆಯಬೇಕು ಎಂದು ಸಲಹೆ ನೀಡಲಾಗಿದೆ.

ಹವಾನಿಯಂತ್ರಣ ವ್ಯವಸ್ಥೆ ಇರುವ ಒಳಾಂಗಣ, ಅಗತ್ಯ ಗಾಳಿ- ಬೆಳಕಿಲ್ಲದಿರುವ ಸ್ಥಳಗಳು, ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳು ಹಾಗೂ ಆರೋಗ್ಯ ಸಂಸ್ಥೆಗಳಲ್ಲಿ ಮಾಸ್ಕ್‌ ಧರಿಸಬೇಕು. ಹಬ್ಬಗಳನ್ನು ಸಾಧ್ಯವಾದಷ್ಟು ಹೊರಾಂಗಣಗಳಲ್ಲಿ ಆಚರಿಸಬೇಕು, ಜನ ದಟ್ಟಣೆಯ ಪ್ರದೇಶಗಳಿಂದ ದೂರವಿರಬೇಕು ಎಂದು ಮನವಿ ಮಾಡಿದೆ.

CORONA CRISIS: ಕರ್ನಾಟಕದಲ್ಲಿ 82 ಮಂದಿಗೆ ಕೊರೋನಾ: ಒಂದೂ ಸಾವಿಲ್ಲ

ಮುನ್ನೆಚ್ಚರಿಕೆ ಲಸಿಕೆ ಡೋಸ್‌ ಪಡೆಯಲು ಬಾಕಿ ಇರುವವರು ತಕ್ಷಣವೇ ಪಡೆದುಕೊಳ್ಳಬೇಕು. 60 ವರ್ಷ ಮೇಲ್ಪಟ್ಟವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಶೀಘ್ರವೇ ಲಸಿಕೆಯನ್ನು ಪಡೆಯಬೇಕು. ಜೀವ ನಿರೋಧಕತೆ ಕಡಿಮೆ ಇರುವವರು, ಡಯಾಲಿಸಿಸ್‌ ಮಾಡಿಸಿಕೊಳ್ಳುವವರು ಮತ್ತು ಕ್ಯಾನ್ಸರ್‌ ನಿರೋಧಕ ಔಷಧಿಗಳನ್ನು ಸೇವಿಸುತ್ತಿರುವವರು ತಮಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರೊಂದಿಗೆ ಸಮಾಲೋಚನೆಯ ನಂತರ, ಆದ್ಯತೆಯ ಮೇಲೆ ಕೋವಿಡ್‌ 19 ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದು ತಿಳಿಸಲಾಗಿದೆ.

ಕರ್ನಾಟಕದಲ್ಲಿ ಕೋವಿಡ್‌ ಸೋಂಕು ಅಂತ್ಯದತ್ತ?

ಕೋವಿಡ್‌ ಮುನ್ನೆಚ್ಚರಿಕೆ ಕ್ರಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು. ಮಡಚಿದ ಮೊಣಕೈ ಒಳಗೆ ಕೆಮ್ಮುವುದು ಹಾಗೂ ಸೀನುವುದು, ಕರವಸ್ತ್ರ / ಟಿಶ್ಯೂ ಪೇಪರ್‌ನ ಬಳಕೆ, ಸಾರ್ವಜನಿಕ ಸ್ಥಳಗಳಲ್ಲಿ ಮೂಗನ್ನು ಶುಚಿಗೊಳಿಸದಿರುವುದು ಹಾಗೂ ಉಗುಳದಿರುವುದು, ಕೈಗಳನ್ನು ಸೋಪ್‌ನಿಂದ ತೊಳೆಯುವುದು ಹಾಗೂ ಸೋಂಕಿನ ಲಕ್ಷಣಗಳನ್ನು ಹೊಂದಿದವರ ಸಂಪರ್ಕದಿಂದ ದೂರವಿರುವ ಕ್ರಮಗಳನ್ನು ಪಾಲಿಸಬೇಕು ಎಂದು ಇಲಾಖೆ ಮನವಿ ಮಾಡಿದೆ.

3ನೇ ಡೋಸ್‌ ಪಡೆಯಿರಿ

ನೆರೆಯ ಮಹಾರಾಷ್ಟ್ರದಲ್ಲಿ ಒಮಿಕ್ರೋನ್‌ ರೂಪಾಂತರಿಯ ಬಿಕ್ಯು.1 ತಳಿ ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ತಪ್ಪದೆ 3ನೇ ಡೋಸ್‌ ಲಸಿಕೆ ಪಡೆದುಕೊಳ್ಳಬೇಕು ಹಾಗೂ ಕೊರೋನಾ ಸೂಕ್ತ ನಡವಳಿಕೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಅಂತ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. 
 

Latest Videos
Follow Us:
Download App:
  • android
  • ios