Asianet Suvarna News Asianet Suvarna News

ಕರ್ನಾಟಕದಲ್ಲಿ ಕೋವಿಡ್‌ ನಿಗಾ: ಇಂದು ಸಿಎಂ ಮಹತ್ವದ ಸಭೆ

ವಿಶ್ವದ ವಿವಿಧ ದೇಶಗಳಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಯಾವ ರೀತಿಯಲ್ಲಿದೆ ಎಂಬ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಬಗ್ಗೆ ಕಟ್ಟೆಚ್ಚರ ವಹಿಸಲು ರಾಜ್ಯಕ್ಕೆ ಸೂಚನೆ ನೀಡಿದೆ. 

Important meeting of CM Basavaraj Bommai For Coronavirus grg
Author
First Published Dec 22, 2022, 3:38 AM IST

ಬೆಳಗಾವಿ(ಡಿ.22):  ಕೋವಿಡ್‌ ಸೋಂಕು ಕುರಿತ ವಿಷಯವನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಈ ಸಂಬಂಧ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಇಂದು(ಗುರುವಾರ) ಸುವರ್ಣಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವದ ವಿವಿಧ ದೇಶಗಳಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಯಾವ ರೀತಿಯಲ್ಲಿದೆ ಎಂಬ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಬಗ್ಗೆ ಕಟ್ಟೆಚ್ಚರ ವಹಿಸಲು ರಾಜ್ಯಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋವಿಡ್‌ ಸೋಂಕನ್ನು ಯಾವ ರೀತಿ ನಿಯಂತ್ರಣ ಮಾಡಬೇಕು, ಯಾವ ರೀತಿಯ ಟೆಸ್ಟ್‌ಗಳನ್ನು ಹೆಚ್ಚಳ ಮಾಡಬೇಕು ಎನ್ನುವ ಕುರಿತು ಚರ್ಚಿಸಲು ಗುರುವಾರ ಸುವರ್ಣ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆಯಲಾಗಿದೆ. ಸಭೆಯಲ್ಲಿ ರಾಜ್ಯದಲ್ಲಿ ಕೋವಿಡ್‌ ಸೋಂಕು ಹರಡುವಿಕೆ ತಡೆಗಟ್ಟುವ ಕ್ರಮಗಳ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಕೊರೋನಾ ಮುಗಿದಿಲ್ಲ, ಮಾಸ್ಕ್‌ ಧರಿಸಿ, ಬೂಸ್ಟರ್‌ ಡೋಸ್‌ ಹಾಕಿಸಿ: ಕೇಂದ್ರ

ಹೊಸ ಮಾರ್ಗಸೂಚಿ ಬಿಡುಗಡೆ: ಸುಧಾಕರ್‌

ರಾಜ್ಯದಲ್ಲಿ ಸದ್ಯಕ್ಕೆ ಆತಂಕವಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು. ಕೇಂದ್ರ ಆರೋಗ್ಯ ಇಲಾಖೆಯೊಂದಿಗೂ ಚರ್ಚೆ ನಡೆಸಲಾಗುವುದು. ಅಲ್ಲಿಂದ ಮಾರ್ಗದರ್ಶನ, ಸಲಹೆ ಪಡೆದು ಮಾರ್ಗಸೂಚಿ ಹೊರಡಿಸಲಾಗುವುದು. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಿಗಾ ಇಡಲು ಆರಂಭಿಸಿದ್ದೇವೆ ಅಂತ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. 
 

Follow Us:
Download App:
  • android
  • ios