೧೪ ವರ್ಷ ೩೨ ದಿನದ ವೈಭವ್ ಸೂರ್ಯವಂಶಿ ಐಪಿಎಲ್‌ನಲ್ಲಿ ಅರ್ಧಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರರಾಗಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧ ೧೭ ಎಸೆತಗಳಲ್ಲಿ ಈ ಸಾಧನೆ ಮಾಡಿದ ರಾಜಸ್ಥಾನ ರಾಯಲ್ಸ್ ಆಟಗಾರ, ರಿಯಾನ್ ಪರಾಗ್ (೧೭ ವರ್ಷ ೧೭೫ ದಿನ) ದಾಖಲೆಯನ್ನು ಮುರಿದರು.
ಜೈಪುರ (ಏ.28): ಎಂಟನೇ ಕ್ಲಾಸ್ ಹುಡುಗನಿಂದ ಐಪಿಎಲ್‌ನಲ್ಲಿ ಭರ್ಜರಿ ಅರ್ಧಶತಕ ದಾಖಲಾಗಿದೆ.ಐಪಿಎಲ್‌ನಲ್ಲಿ ಅರ್ಧಶತಕ ಬಾರಿಸಿದ ಅತ್ಯಂತ ಕಿರಿಯ ಬ್ಯಾಟ್ಸ್‌ಮನ್ ಎನ್ನುವ ಶ್ರೇಯಕ್ಕೆ ರಾಜಸ್ಥಾನ ರಾಯಲ್ಸ್ ತಂಡ ಆಟಗಾರ, ಬಿಹಾರದ ವೈಭವ್ ಸೂರ್ಯವಂಶಿ ಪಾತ್ರರಾಗಿದ್ದಾರೆ. 14 ವರ್ಷ 32 ದಿನದ ವಯಸ್ಸಿನ ವೈಭವ್ ಸೂರ್ಯವಂಶಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಈ ದಾಖಲೆ ಮಾಡಿದ್ದಾರೆ.
ಇದಕ್ಕೂ ಮುನ್ನ ಐಪಿಎಲ್‌ಲ್ಲಿ ಅರ್ಧಶತಕ ಬಾರಿಸಿದ ಕಿರಿಯ ಆಟಗಾರ ಎನ್ನುವ ಶ್ರೇಯ, ರಾಜಸ್ಥಾನ ತಂಡದ ಕ್ಯಾಪ್ಟನ್ ರಿಯಾನ್ ಪರಾಗ್ ಹೆಸರಲ್ಲಿತ್ತು. ರಿಯಾನ್ ಪರಾಗ್ 17 ವರ್ಷ 175ನೇ ದಿನದಲ್ಲಿ ಐಪಿಎಲ್‌ನಲ್ಲಿ ಅರ್ಧಶತಕ ಬಾರಿಸಿದ್ದರು.
ವೈಭವ್ ಸೂರ್ಯವಂಶಿ ಕೇವಲ 17 ಎಸೆತಗಳಲ್ಲಿ 50 ರನ್ ಸಿಡಿಸಿದರು. ಇದು ಹಾಲಿ ವರ್ಷದ ಐಪಿಎಲ್‌ನಲ್ಲಿ ಅತ್ಯಂತ ವೇಗದ ಅರ್ಧಶತಕ ಎನಿಸಿದೆ. ಇನ್ನು ರಾಜಸ್ಥಾನ ರಾಯಲ್ಸ್ ತಂಡ ಈವರೆಗಿನ ಅತ್ಯಂತ 2ನೇ ಅತಿವೇಗದ ಅರ್ಧಶತಕ ಎನಿಸಿದೆ. ಅಲ್ಲದೆ, ಗುಜರಾತ್ ಟೈಟಾನ್ಸ್ ವಿರುದ್ಧ ಬ್ಯಾಟ್ಸ್‌ಮನ್ ಬಾರಿಸಿದ ವೇಗದ ಅರ್ಧಶತಕ ಎನ್ನುವ ದಾಖಲೆಯೂ ಇದಾಗಿದೆ
