ಹ್ಯಾಮಿಲ್ಟನ್(ಫೆ.05): ಭಾರತ-ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ದುಕೊಂಡಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯಕ್ಕೆ ಹ್ಯಾಮಿಲ್ಟನ್‌ನ ಸೆಡನ್ ಪಾರ್ಕ್ ಮೈದಾನ ಆತಿಥ್ಯ ವಹಿಸಿದೆ.

ಭಾರತ ತಂಡದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದ್ದು, ಪೃಥ್ವಿ ಶಾ ಹಾಗೂ ಮಯಾಂಕ್ ಅಗರ್‌ವಾಲ್ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ. ಟೆಸ್ಟ್ ಆರಂಭಿಕರಾಗಿರುವ ಈ ಇಬ್ಬರು ಇದೀಗ ಒಂದೇ ಪಂದ್ಯದಲ್ಲಿ ಚೊಚ್ಚಲ ಏಕದಿನ ಪಂದ್ಯವಾಡಲಿದ್ದು, ಭಾರತ ಇನಿಂಗ್ಸ್ ಆರಂಭಿಸಲಿದ್ದಾರೆ.

ಇನ್ನು ನ್ಯೂಜಿಲೆಂಡ್ ಪರ ಇಶ್ ಸೋಧಿ ಹಾಗೂ ಮಿಚೆಲ್ ಸ್ಯಾಂಟ್ನರ್ ತಂಡಕೂಡಿಕೊಂಡಿದ್ದಾರೆ. ಕೇನ್ ವಿಲಿಯಮ್ಸನ್ ಅನುಪಸ್ಥಿತಿಯಲ್ಲಿ ಟಾಮ್ ಲಾಥಮ್ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನು ಏಕದಿನ ಕ್ರಿಕೆಟ್‌ಗೆ ಟಾಮ್ ಬ್ಲಂಡೆಲ್ ಕಿವೀಸ್ ತಂಡದ ಪರ ಪದಾರ್ಪಣೆ ಮಾಡಿದ್ದಾರೆ 

ತಂಡಗಳು ಹೀಗಿವೆ:

ಭಾರತ:

ನ್ಯೂಜಿಲೆಂಡ್: