Asianet Suvarna News Asianet Suvarna News

3ನೇ ಒನ್‌ಡೇಗೂ ಮುನ್ನ ಕಿವೀಸ್ ತಂಡ ಕೂಡಿಕೊಂಡ ಇಬ್ಬರು ಬೌಲರ್ಸ್

ಭಾರತ ವಿರುದ್ಧ ಏಕದಿನ ಸರಣಿ ಕೈವಶ ಮಾಡಿಕೊಂಡಿರುವ ನ್ಯೂಜಿಲೆಂಡ್ ತಂಡ ಮೂರನೇ ಪಂದ್ಯದಲ್ಲಿ ಕೆಲ ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಇದೀಗ ಇಬ್ಬರು ಬೌಲರ್‌ಗಳು ತಂಡ ಕೂಡಿಕೊಂಡಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ..

2 Bowlers  join NZ squad ahead of third ODI against India
Author
Wellington, First Published Feb 10, 2020, 7:18 PM IST

ವೆಲ್ಲಿಂಗ್ಟನ್(ಫೆ.10): ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯಕ್ಕೂ ಮುನ್ನ ಇಬ್ಬರು ಆಟಗಾರರು ನ್ಯೂಜಿಲೆಂಡ್ ತಂಡ ಕೂಡಿಕೊಂಡಿದ್ದಾರೆ. ಫೆಬ್ರವರಿ 11ರಂದು ಬೇ ಓವಲ್ ಮೈದಾನದಲ್ಲಿ ನಡೆಯಲಿರುವ ಪಂದ್ಯಕ್ಕೆ ಅನುಭವಿ ಸ್ಪಿನ್ನರ್ ಇಶ್ ಸೋಧಿ ಹಾಗೂ ಬ್ಲೇರ್ ಟಿಕ್ನರ್ ಕಿವೀಸ್ ತಂಡ ಕೂಡಿಕೊಂಡಿದ್ದಾರೆ.

ಟೀಂ ಇಂಡಿಯಾದ ಅರ್ಧ ಡಜನ್ ಆಟಗಾರರು ಗಾಯಕ್ಕೆ ತುತ್ತಾಗಿರೊದೇಕೆ?

ಈಗಾಗಲೇ ಏಕದಿನ ಸರಣಿಯನ್ನು 2-0 ಅಂತರದಲ್ಲಿ ಕೈವಶ ಮಾಡಿಕೊಂಡಿರುವ ನ್ಯೂಜಿಲೆಂಡ್ ತಂಡದ ಆಟಗಾರು ಸದ್ಯ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದಾರೆ.  ಪ್ರಸ್ತುತ ಭಾರತ 'ಎ' ವಿರುದ್ಧದ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಪಾಲ್ಗೊಂಡಿರುವ ಸೋಧಿ ಹಾಗೂ ಟಿಕ್ನರ್ 3ನೇ ಪಂದ್ಯಕ್ಕೂ ಕಿವೀಸ್ ತಂಡಕ್ಕೆ ಮರಳಿದ್ದಾರೆ.  ನ್ಯೂಜಿಲೆಂಡ್‌ನ ಮಿಚೆಲ್ ಸ್ಯಾಂಟ್ನರ್ ಹಾಗೂ ಟಿಮ್ ಸೌಥಿ ಗ್ಯಾಸ್ಟ್ರೊ ಸಮಸ್ಯೆ ಎದುರಿಸುತ್ತಿದ್ದಾರೆ. ಇನ್ನು ಕೇನ್ ವಿಲಿಯಮ್ಸನ್ ಸಹಾ ಟಿ20 ಸರಣಿ ಬಳಿಕ ಮೊದಲೆರಡು ಏಕದಿನ ಪಂದ್ಯಗಳಿಂದ ಹೊರಬಿದ್ದಿದ್ದರು.

ಏಕದಿನ ಸರಣಿ ಸೋಲಿನ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಎಂದ ಕೊಹ್ಲಿ..!

ಭಾರತ ತಂಡವು ನ್ಯೂಜಿಲೆಂಡ್ ಪ್ರವಾಸದ ಮೊದಲ ಸರಣಿಯಾದ ಟಿ20 ಸರಣಿಯನ್ನು 5-0 ಅಂತರದಲ್ಲಿ ವೈಟ್‌ವಾಷ್ ಮಾಡಿ ಗೆದ್ದು ಬೀಗಿತ್ತು. ಇನ್ನು 3 ಪಂದ್ಯಗಳ ಏಕದಿನ ಸರಣಿಯಲ್ಲಿ ಕಿವೀಸ್ ಪಡೆ ಭಾರತಕ್ಕೆ ತಿರುಗೇಟು ನೀಡುವಲ್ಲಿ ಯಶಸ್ವಿಯಾಗಿದೆ. ಮೊದಲೆರಡು ಪಂದ್ಯಗಳನ್ನು ಗೆದ್ದು ಸರಣಿ ಕೈವಶ ಮಾಡಿಕೊಂಡಿರುವ ನ್ಯೂಜಿಲೆಂಡ್ ಏಕದಿನ ಸರಣಿಯಲ್ಲಿ ಭಾರತ ವಿರುದ್ಧ ಕ್ಲೀನ್ ಸ್ವೀಪ್ ಮಾಡಲು ತುದಿಗಾಲಿನಲ್ಲಿ ನಿಂತಿದೆ.
 

Follow Us:
Download App:
  • android
  • ios