ಕ್ರೈಸ್ಟ್‌ಚರ್ಚ್(ಡಿ.02)‍: ನ್ಯೂಜಿಲೆಂಡ್‌ ಪ್ರವಾಸದಲ್ಲಿರುವ ಪಾಕಿಸ್ತಾನ ಕ್ರಿಕೆಟ್‌ ತಂಡದ ಆಟಗಾರರ ಕೋವಿಡ್‌ ನಿಯಮ ಉಲ್ಲಂಘಿಸಿರುವ ಪರಿಣಾಮ ಮತ್ತೆ ಮೂವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 

ಕೆಲ ದಿನಗಳ ಹಿಂದಷ್ಟೇ ಪಾಕ್‌ ತಂಡದ 7 ಆಟಗಾರರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಒಟ್ಟಾರೆ ಪಾಕಿಸ್ತಾನ ತಂಡದ 10 ಮಂದಿ ಕೊರೋನಾ ಸೋಂಕಿತರಾಗಿದ್ದಾರೆ. ಹೀಗಾಗಿ ಪಾಕಿಸ್ತಾನ ತಂಡ ಆತಂಕದಲ್ಲಿದೆ. ನ್ಯೂಜಿಲೆಂಡ್‌ ವಿರುದ್ಧ 3 ಪಂದ್ಯಗಳ ಟಿ20 ಸರಣಿ, 2 ಪಂದ್ಯಗಳ ಟೆಸ್ಟ್‌ ಸರಣಿಯನ್ನಾಡಲು ಪಾಕ್‌, ನ್ಯೂಜಿಲೆಂಡ್‌ಗೆ ಬಂದಿಳಿದಿತ್ತು. ನ್ಯೂಜಿಲೆಂಡ್‌ ಸರ್ಕಾರದ ಕೋವಿಡ್‌ ನಿಯಮಗಳ ಪ್ರಕಾರ ಪ್ರವಾಸಿ ತಂಡ, ಕ್ರೈಸ್ಟ್‌ ಚರ್ಚ್‌ನಲ್ಲಿ 15 ದಿನಗಳ ಕಡ್ಡಾಯ ಕ್ವಾರಂಟೈನ್‌ನಲ್ಲಿರಲು ಸೂಚಿಸಲಾಗಿದೆ.

ನೀ ಹುಟ್ಟುವ ಮೊದಲೇ ಸೆಂಚುರಿ ಸಿಡಿಸಿದ್ದೇನೆ; ಲಂಕಾ ಲೀಗ್‌ನಲ್ಲಿ ಆಫ್ರಿದಿ-ನವೀನ್ ಕಿತ್ತಾಟ!

ಡಿಸೆಂಬರ್ 18ರಿಂದ ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ 3 ಪಂದ್ಯಗಳ ಟಿ20 ಸರಣಿಯಾಡಲಿದೆ. ಇದಾದ ಬಳಿಕ ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ತಂಡ 2 ಪಂದ್ಯಗಳ ಟೆಸ್ಟ್ ಚಾಂಪಿಯನ್‌ಶಿಪ್‌ ಪಂದ್ಯಗಳನ್ನಾಡಲಿದೆ. ಇತ್ತೀಚೆಗಷ್ಟೇ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯನ್ನು 2-0 ಅಂತರದಲ್ಲಿ ಕಿವೀಸ್ ತಂಡ ಕೈವಶ ಮಾಡಿಕೊಂಡಿತ್ತು.