ಬೇ ಓವಲ್(ಫೆ.11): ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಫೀಲ್ಡಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಿದರೆ, ಕಿವೀಸ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ.

ಭಾರತ ತಂಡದಲ್ಲಿ ಏಕೈಕ ಬದಲಾವಣೆ ಮಾಡಲಾಗಿದ್ದು, ಕೇದಾರ್ ಜಾದವ್ ಬದಲಿಗೆ ಮನೀಶ್ ಪಾಂಡೆಗೆ ಅವಕಾಶ ನೀಡಲಾಗಿದೆ. ಇನ್ನು ನ್ಯೂಜಿಲೆಂಡ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದ್ದು, ಕೇನ್ ವಿಲಿಯಮ್ಸನ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಚಾಂಪ್ನನ್ ಬದಲಿಗೆ ಮಿಚೆಲ್ ಸ್ಯಾಂಟ್ನರ್ ತಂಡ ಕೂಡಿಕೊಂಡಿದ್ದಾರೆ.

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್ ತಂಡ ಮೊದಲೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿ ಕೈವಶ ಮಾಡಿಕೊಂಡಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಕಿವೀಸ್ ತಂಡ ಸರಣಿ ಕ್ಲೀನ್ ಸ್ವೀಪ್ ಮಾಡಲು ಎದುರು ನೋಡುತ್ತಿದೆ. ಇನ್ನು ವಿರಾಟ್ ಪಡೆ ವೈಟ್‌ವಾಷ್‌ನಿಂದ ಪಾರಾಗಲು ಕಾದಾಡಲಿದೆ. 

ತಂಡದಲ್ಲಿ ಮೂವರು ಕನ್ನಡಿಗರು: ಇದೀಗ ಟೀಂ ಇಂಡಿಯಾದಲ್ಲಿ ಮೂರು ಕನ್ನಡಿಗರು ಸ್ಥಾನ ಪಡೆದಿದ್ದಾರೆ. ಮನೀಶ್ ಪಾಂಡೆ, ಕೆ.ಎಲ್. ರಾಹುಲ್ ಹಾಗೆ ಮಯಾಂಕ್ ಅಗರ್‌ವಾಲ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ತಂಡಗಳು ಹೀಗಿವೆ:
ಭಾರತ:

ನ್ಯೂಜಿಲೆಂಡ್: