* ಇಂಗ್ಲೆಂಡ್ ಕ್ರಿಕೆಟ್ ತಂಡದ 7 ಮಂದಿಗೆ ಕೋವಿಡ್ 19 ಸೋಂಕು ದೃಢ* ಇಂಗ್ಲೆಂಡ್‌ನ ಮೂವರು ಕ್ರಿಕೆಟಿಗರು ಸೇರಿ 7 ಮಂದಿಗೆ ಸೋಂಕು ದೃಢ* ಪಾಕ್‌ ವಿರುದ್ದದ ಸೀಮಿತ ಓವರ್‌ಗಳ ಸರಣಿಗೂ ಮುನ್ನ ಇಂಗ್ಲೆಂಡ್‌ಗೆ ಶಾಕ್‌

ಲಂಡನ್‌(ಜು.06): ಪಾಕಿಸ್ತಾನ ವಿರುದ್ದದ ಸರಣಿಗೆ ಸಜ್ಜಾಗುತ್ತಿರುವ ಇಂಗ್ಲೆಂಡ್ ಕ್ರಿಕೆಟ್ ಪಾಳಯದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದ್ದು, ಮೂವರು ಆಟಗಾರರು ಹಾಗೂ ನಾಲ್ವರು ಸಹಾಯಕ ಸಿಬ್ಬಂದಿಗಳಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಬ್ರಿಸ್ಟಲ್‌ನಲ್ಲಿ ಸೋಮವಾರ(ಜು.05) ನಡೆಸಿದ ಪಿಸಿಆರ್ ಟೆಸ್ಟ್‌ನಲ್ಲಿ ಏಕದಿನ ಕ್ರಿಕೆಟ್ ತಂಡದ ಮೂವರು ಆಟಗಾರರು ಹಾಗೂ ನಾಲ್ವರು ಸಹಾಯಕ ಸಿಬ್ಬಂದಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಯಾರೆಲ್ಲ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದರೋ ಅವರೆಲ್ಲರೂ ಬ್ರಿಟನ್ ಸರ್ಕಾರದ ಪ್ರೋಟೋಕಾಲ್‌ನಂತೆ ಜುಲೈ 04ರಿಂದ ಐಸೋಲೇಷನ್‌ಗೆ ಒಳಗಾಗಿದ್ದಾರೆ.

Scroll to load tweet…

ಪಾಕ್ ವಿರುದ್ದದ ಸರಣಿಗೆ ಇಂಗ್ಲೆಂಡ್ ಕ್ರಿಕೆಟ್ ತಂಡ ಪ್ರಕಟ

ಇಂಗ್ಲೆಂಡ್ ಕ್ರಿಕೆಟ್ ತಂಡವು ತವರಿನಲ್ಲಿ ಪಾಕಿಸ್ತಾನ ವಿರುದ್ದ 6 ಪಂದ್ಯಗಳ ಸೀಮಿತ ಓವರ್‌ಗಳ ಸರಣಿಯನ್ನು ಆಡಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯು ಜುಲೈ 08ರಿಂದ ಆರಂಭವಾಗಲಿದೆ. ಇನ್ನು 3 ಪಂದ್ಯಗಳ ಟಿ20 ಸರಣಿ ಜುಲೈ 16ರಿಂದ ಆರಂಭವಾಗಲಿದೆ. ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ಬೆನ್ ಸ್ಟೋಕ್ಸ್ ನಾಯಕತ್ವದಲ್ಲಿ ಹೊಸ ತಂಡವನ್ನು ಪ್ರಕಟಿಸುವ ಸಾಧ್ಯೆತೆಯಿದೆ ಎನ್ನಲಾಗಿದೆ.