ಕಾಂಗ್ರೆಸ್ ಚುನಾವಣಾ ಸೋಲಿಗೆ ಸ್ಫೋಟಕ ಕಾರಣ ಬಿಚ್ಚಿಟ್ಟ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್!
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 3 ರಾಜ್ಯಗಳಲ್ಲಿ ಜಯಭೇರಿ ಬಾರಿಸಿದೆ. ಕಾಂಗ್ರೆಸ್ ಹೀನಾಯ ಸೋಲಿಗೆ ಕಾರಣಗಳೇನು ಅನ್ನೋ ಚರ್ಚೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಕಾಂಗ್ರೆಸ್ ಸೋಲಿಗೆ ಒಂದು ಮುಖ್ಯ ಕಾರಣ ಹೇಳಿದ್ದಾರೆ.
ಬೆಂಗಳೂರು(ಡಿ.03) ಪಂಚ ರಾಜ್ಯ ಚುನಾವಣಾ ಫಲಿತಾಂಶ ಪೈಕಿ 4 ರಾಜ್ಯಗಳ ಫಲಿತಾಂಶ ಹೊರಬಿದ್ದಿದೆ. ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಚತ್ತೀಸಘಡದಲ್ಲಿ ಬಿಜೆಪಿ ಅಭೂತಪೂರ್ವ ಮುನ್ನಡೆ ಸಾಧಿಸಿದೆ. ಈ ಮೂರೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ರಚಿಸುವುದು ಬಹುತೇಕ ಖಚಿತಗೊಂಡಿದೆ. ಇನ್ನು ತೆಲಂಗಾಣದಲ್ಲಿ ಕಾಂಗ್ರೆಸ್ ಅತೀ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಅಧಿಕಾರ ಹಿಡಿಯುತ್ತಿದೆ. ಚತ್ತೀಸಘಡ ರಾಜ್ಯ ಕೂಡ ಕೈತಪ್ಪಿರುವುದು ಕಾಂಗ್ರೆಸ್ ನಾಯಕರ ಕಂಗೆಡಿಸಿದೆ. ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಕಾಂಗ್ರೆಸ್ ಸೋಲಿಗೆ ಹಲವು ಕಾರಣಗಳನ್ನು ನೀಡುತ್ತಿದ್ದಾರೆ. ಇತ್ತ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್, ಕಾಂಗ್ರೆಸ್ ಹೀನಾಯ ಸೋಲಿಗೆ ಕಾರಣ ಹೇಳಿದ್ದಾರೆ. ಸನಾತನ ಧರ್ಮವನ್ನು ನಿಂದನೆ ಮಾಡಿದ ಪರಿಣಾಮ ಕಾಂಗ್ರೆಸ್ ನೆಲಕಚ್ಚಿದೆ ಎಂದು ವೆಂಕಟೇಶ್ ಪ್ರಸಾದ್ ಹೇಳಿದ್ದಾರೆ.
ಪಂಚರಾಜ್ಯ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ವೆಂಕಟೇಶ್ ಪ್ರಸಾದ್ ಎಕ್ಸ್(ಟ್ವಿಟರ್) ಮೂಲಕ ಸ್ಫೋಟಕ ಟ್ವೀಟ್ ಮಾಡಿದ್ದಾರೆ. ಸನಾತನ ಧರ್ವವನ್ನು ನಿಂದಿಸಿ, ನಾಶ ಮಾಡಲು ಹೊರಟ ಪರಿಣಾಮವೇ ಈ ಸೋಲಿಗೆ ಕಾರಣ. ಅಭೂತಪೂರ್ವ ಗೆಲುವು ದಾಖಲಿಸಿದ ಬಿಜೆಪಿಗೆ ಅಭಿನಂದನೆಗಳು. ಈ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ನಾಯಕತ್ವಕ್ಕೆ ಹಿಡಿದ ಕನ್ನಡಿಯಾಗಿದೆ. ತಳಮಟ್ಟದಲ್ಲಿ ಅದ್ಭುತ ಕೆಲಸ ಮಾಡಿದ ಪಕ್ಷದ ಕಾರ್ಯಕರ್ತರ ಶ್ರಮದ ಫಲ ಎಂದು ವೆಂಕಟೇಶ್ ಪ್ರಸಾದ್ ಟ್ವೀಟ್ ಮಾಡಿದ್ದಾರೆ.
ಸನಾತನ ವಿರೋಧಿಸಿ ಭಾರತದಲ್ಲಿ ರಾಜಕಾರಣ ಮಾಡಲು ಸಾಧ್ಯವಿಲ್ಲ, ಸೋಲಿನ ನಂತರ ಕಾಂಗ್ರೆಸ್ ನಾಯಕನ ಮಾತು!
ವೆಂಕಟೇಶ್ ಪ್ರಸಾದ್ ಟ್ವೀಟ್‌ಗೆ ಭಾರಿ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ಸನಾತನ ಧರ್ಮವನ್ನು ನಿಂದಿಸಿದ ಹಾಗೂ ಪನೌತಿ(ಅಪಶಕುನ) ಪದ ಬಳಕೆ ಮಾಡಿದ ಕಾಂಗ್ರೆಸ್ ಇದೀಗ ಸೋಲಿನ ಕಹಿ ಅನುಭವಿಸಿದೆ ಎಂದು ಹಲವರು ಕಮೆಂಟ್ ಮಾಡಿದ್ದಾರೆ. ಕರ್ನಾಟಕದ ಜನ ಕಾಂಗ್ರೆಸ್ ಉಚಿತ ಗ್ಯಾರೆಂಟಿಗೆ ಮರುಳಾಗಿ ಕಾಂಗ್ರೆಸ್‌ಗೆ ಮತ ನೀಡಿದೆ. ಇದೀಗ ಕನ್ನಡಿಗರು ಅನುಭವಿಸುತ್ತಿದ್ದಾರೆ ಎಂದು ಕೆಲವರು ಕರ್ನಾಟದ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ರಾಹುಲ್ ಗಾಂಧಿ ಜಾತಿಗಣತಿ ವಿಚಾರ ಮುಂದಿಟ್ಟು ದೇಶದಲ್ಲಿ ಹೊಸ ಅಲೆ ಸೃಷ್ಟಿಸಲು ಮುಂದಾಗಿದ್ದರು. ಆದರೆ ಕಾಂಗ್ರೆಸ್ ನಾಯಕರನ್ನು ಯಾರು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಅನ್ನೋದು ಈ ಚುನಾವಣೆ ಫಲಿತಾಂಶ ಸಾಬೀತು ಮಾಡಿದೆ ಎಂದು ಕಮೆಂಟ್ ಮಾಡಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ೋದಿ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ. ಏಕರೂಪ ನಾಗರೀಕ ನೀತಿ ಸಂಹಿತೆ ಹಾಗೂ ಜನಸಂಖ್ಯಾ ನಿಯಂತ್ರಣಾ ಬಿಲ್ ಜಾರಿಗೆ ತರಲಿದ್ದಾರೆ ಎಂದು ಬಿಜೆಪಿ ಬೆಂಬಲಿಗರು ಕಮೆಂಟ್ ಮಾಡಿದ್ದಾರೆ.
ಲೋಕಸಭೆ ಚುನಾವಣೆ ನಂತರ ಸಿದ್ದರಾಮಯ್ಯ ಸರ್ಕಾರ ಪತನ: ರೇಣುಕಾಚಾರ್ಯ ಭವಿಷ್ಯ
ಭಾರತದ ಸನಾತನ ಧರ್ಮದ ವಿರುದ್ದವಾಗಿ ಕಾಂಗ್ರೆಸ್ ನಿಂತಿರುವುದೇ ಸೋಲಿಗೆ ಕಾರಣ ಎಂದು ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ಹೇಳಿಕೆಗೂ ವೆಂಕಟೇಶ್ ಪ್ರಸಾದ್ ನೀಡಿರುವ ಅಭಿಪ್ರಾಯಕ್ಕೂ ಸಾಮ್ಯತೆ ಇದೆ. ಸನಾತನ ಧರ್ಮದ ನಾಶಕ್ಕೆ ತಮಿಳುನಾಡು ಸಿಎಂ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ನೀಡಿದಾಗ, ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. ಆದರೆ ಕಾಂಗ್ರೆಸ್ ಇತರ ಸಮುದಾಯಕ್ಕೆ ನೋವಾಗದಂತೆ ಹೇಳಿಕೆ ನೀಡಿ ಸುಮ್ಮನಾಗಿತ್ತು. ಇವೆಲ್ಲವೂ ಕಾಂಗ್ರೆಸ್ ಸೋಲಿಗೆ ಕಾರಣಗಳಾಗಿದೆ ಅನ್ನೋ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ.