ವಿಜಯಪುರ: ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ ಜೀವಾವಧಿ ಶಿಕ್ಷೆ

ಕನ್ನಡ ವಿಶ್ವವಿದ್ಯಾಲಯದ ನೊಂದ ಬಾಲಕಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದನ್ನು ಗಂಭೀರವಾಗಿ ಪರಿಗಣಿಸಿದ ಹೊರ್ತಿ ಠಾಣೆ ಪೊಲೀಸರು, ತನಿಖೆ ನಡೆಸಿ, ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.ಬೆಳಗಾವಿ ಸಂಶೋಧನಾ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಿದ್ದ ಪವಿತ್ರಾ ಲೋಕೇಶ್‌ ಅವರು, ಕನ್ನಡ ಸಾಹಿತ್ಯ ವಿಷಯದಲ್ಲಿ ಪಿಎಚ್‌ಡಿ ಪದವಿ ಮಾಡಲು ಬಯಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರವೇಶ ಪರೀಕ್ಷೆ ಬರೆದರು.

Accused Sentenced to Life Imprisonment For Rape on Minor Girl in Vijayapura grg

ವಿಜಯಪುರ(ಮೇ.31): ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 16 ಸಾವಿರ ದಂಡ ವಿಧಿಸಿ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೋ) ನ್ಯಾಯಾಲಯ ತೀರ್ಪು ನೀಡಿದೆ. ಇಂಡಿ ತಾಲೂಕಿನ ತಡವಲಗಾ ಗ್ರಾಮದ ಅರ್ಜುನ ಹನಮಂತ ಕ್ಷತ್ರಿ (23) ಶಿಕ್ಷೆಗೀಡಾದ ವ್ಯಕ್ತಿ.

16 ವರ್ಷದ ಬಾಲಕಿ ಇಂಡಿ ಪಟ್ಟಣದಲ್ಲಿದ್ದ ಶಾಲಾ ಪಂದ್ಯಾಟ ಮುಗಿಸಿಕೊಂಡು ತನ್ನ ವಸತಿ ಕಡೆಗೆ ನಡೆದುಕೊಂಡು ಹೊರಟಿದ್ದಳು. ಆಗ ಆರೋಪಿ ಆಕೆಯನ್ನು ಅಡ್ಡಗಟ್ಟಿಲಿಂಬೆ ಪಡಕ್ಕೆ ಕರೆದೊಯ್ದು ದೌರ್ಜನ್ಯ ಎಸಗಿದ್ದ. ಬಳಿಕ ಈ ವಿಷಯವನ್ನು ಮನೆಯಲ್ಲಿ ಹೇಳಿದರೆ, ನಿಮ್ಮ ಕುಟುಂಬ ಸದಸ್ಯರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಹೀಗಾಗಿ, ಬಾಲಕಿ ತನ್ನ ತಂದೆ-ತಾಯಿಗಳಿಗೆ ಈ ವಿಷಯ ತಿಳಿಸಿರಲಿಲ್ಲ. ಬಾಲಕಿಯ ಈ ಮುಗ್ಧತೆಯನ್ನೇ ಬಂಡವಾಳ ಮಾಡಿಕೊಂಡ ಆರೋಪಿ, ಆಕೆ ಮನೆಯಲ್ಲಿ ಒಬ್ಬಳೇ ಇದ್ದುದನ್ನು ಖಾತ್ರಿ ಪಡಿಸಿಕೊಂಡು ಮತ್ತೆ ಮತ್ತೆ ದೌರ್ಜನ್ಯ ಎಸಗುತ್ತಿದ್ದ. ಬಾಲಕಿ ಗರ್ಭಿಣಿ ಆದಾಗಲೇ ತಂದೆ-ತಾಯಿಗೆ ನೈಜ ವಿಷಯ ಗೊತ್ತಾಗಿದೆ. ತಕ್ಷಣ ಪೋಷಕರು ಈ ಬಗ್ಗೆ ಹೊರ್ತಿ ಠಾಣೆಗೆ ದೂರು ಸಲ್ಲಿಸಿದರು.

ಪರಪುರುಷನ ಜೊತೆಗಿದ್ದ ಕಾರಣಕ್ಕೆ ಪತ್ನಿ ಹತ್ಯೆಗೈದ ಪತಿ ಜೀವಾವಧಿ ಶಿಕ್ಷೆಯಿಂದ ಪಾರು..!

 

ನಂತರ ನೊಂದ ಬಾಲಕಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದನ್ನು ಗಂಭೀರವಾಗಿ ಪರಿಗಣಿಸಿದ ಹೊರ್ತಿ ಠಾಣೆ ಪೊಲೀಸರು, ತನಿಖೆ ನಡೆಸಿ, ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದ ಕುರಿತು ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೋ) ನ್ಯಾಯಾಲಯದ ನ್ಯಾಯಾಧೀಶ ರಾಮ ನಾಯಕ ಅವರು, ಪ್ರಕರಣದಲ್ಲಿಯ ಸಾಕ್ಷ್ಯಾಧಾರಗಳು ರುಜುವಾತಾಗಿವೆ ಎಂದು ತೀರ್ಮಾನಿಸಿ, ಆರೋಪಿಗೆ 20 ವರ್ಷ ಜೀವಾವಧಿ ಶಿಕ್ಷೆ ಹಾಗೂ .26 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ವಿ.ಜಿ.ಹಗರಗುಂಡ ಸರಕಾರದ ಪರವಾಗಿ ವಾದ ಮಂಡಿಸಿದ್ದರು.

Latest Videos
Follow Us:
Download App:
  • android
  • ios