Asianet Suvarna News Asianet Suvarna News

ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಜೆರ್ಸಿ ಅನಾವರಣ; ನೂತನ ಜೆರ್ಸಿಯಲ್ಲಿ 2 ಮಹತ್ವದ ಬದಲಾವಣೆ ಮಾಡಿದ Adidas

2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 05ರಂದು ಆರಂಭವಾಗಲಿದ್ದು, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗುವ ಮೂಲಕ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ. ಇನ್ನು ಟೂರ್ನಿಗೆ ಆತಿಥ್ಯ ವಹಿಸಿರುವ ಭಾರತ ತಂಡವು ಅಕ್ಟೋಬರ್ 08ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ 5 ಬಾರಿಯ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.

Adidas makes 2 big changes to Team India ODI jersey for World Cup 2023 kvn
Author
First Published Sep 20, 2023, 4:45 PM IST

ಬೆಂಗಳೂರು(ಸೆ.20): ದಶಕದ ಬಳಿಕ ಐಸಿಸಿ ಟ್ರೋಫಿಗೆ ಮುತ್ತಿಕ್ಕಲು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಕನಸು ಕಾಣುತ್ತಿದೆ. 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯವನ್ನು ವಹಿಸಿದ್ದು, ಮುಂಬರುವ ಅಕ್ಟೋಬರ್ 05ರಿಂದ ನವೆಂಬರ್ 19ರವರೆಗೆ ವಿಶ್ವಕಪ್ ಟೂರ್ನಿಯು ಭಾರತದ  10 ವಿವಿಧ ಸ್ಟೇಡಿಯಂನಲ್ಲಿ ಜರುಗಲಿದೆ. ಇದೀಗ ಟೀಂ ಇಂಡಿಯಾಗೆ ಜೆರ್ಸಿ ಪ್ರಾಯೋಜಕತ್ವ ನೀಡುವ ಆ್ಯಡಿ​ಡಾ​ಸ್‌, ಬುಧವಾರವಾದ ಇಂದು(ಸೆ.20), ಟೀಂ ಇಂಡಿಯಾ ಜೆರ್ಸಿ ಅನಾವರಣ ಮಾಡಿದೆ. ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಆರಂಭಕ್ಕೆ ಸರಿಯಾಗಿ 15 ದಿನಗಳು ಬಾಕಿ ಇರುವಾಗಲೇ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಜೆರ್ಸಿ ಅನಾವರಣವಾಗಿದ್ದು, ನೂತನ ಜೆರ್ಸಿಯಲ್ಲಿ ಎರಡು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.

ಹೌದು, ಆ್ಯಡಿ​ಡಾ​ಸ್‌ ಈ ಕುರಿತಂತೆ ಒಂದು ವಿಡಿಯೋ ಹಂಚಿಕೊಂಡಿದ್ದು, ಈ ವಿಡಿಯೋದಲ್ಲಿ ವಿಶ್ವಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡದ ನೂತನ ಜೆರ್ಸಿ ಅನಾವರಣವಾಗಿದೆ. ರ‍್ಯಾಪರ್ ರಫ್ತಾರ್ ಅವರು ಹಾಡಿರುವ '3 ಕ ಡ್ರೀಮ್'(ಮೂರನೇ ಟ್ರೋಫಿ ಕನಸು)ನ ವಿಡಿಯೋವೀಗ ಸಾಕಷ್ಟು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ಈಗಾಗಲೇ ಎರಡು ಬಾರಿ ಚಾಂಪಿಯನ್ ಆಗಿದ್ದು, ಮೂರನೇ ಬಾರಿಗೆ ಕಪ್ ಗೆಲ್ಲುವ ಕನವರಿಕೆಯಲ್ಲಿದೆ. 1983ರಲ್ಲಿ ಕಪಿಲ್ ದೇವ್ ನೇತೃತ್ವದ ಟೀಂ ಇಂಡಿಯಾ ಮೊದಲ ಬಾರಿಗೆ ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದಾದ ಬಳಿಕ 2011ರಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಭಾರತ ಕ್ರಿಕೆಟ್ ತಂಡವು ಕೊನೆಯ ಬಾರಿಗೆ ಐಸಿಸಿ ಏಕದಿನ ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕಿತ್ತು. 

2023ರ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತದ ಜೆರ್ಸಿಯಲ್ಲಿ ಎರಡು ಬದಲಾವಣೆ:

ಮುಂಬರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗಾಗಿಯೇ ಭಾರತ ತಂಡದ ಜೆರ್ಸಿಯಲ್ಲಿ ಆ್ಯಡಿ​ಡಾ​ಸ್‌ ಸಂಸ್ಥೆಯು ಎರಡು ಮಹತ್ವದ ಬದಲಾವಣೆಗಳನ್ನು ಮಾಡಿದೆ. ಅದರಲ್ಲಿ ಮುಖ್ಯವಾಗಿ ಭುಜದ ಮೇಲೆ ಈ ಮೊದಲು 3 ಬಿಳಿ ಗೆರೆಗಳಿದ್ದವು, ಇದೀಗ ವಿಶ್ವಕಪ್ ಟೂರ್ನಿಯ ಜೆರ್ಸಿಯಲ್ಲಿ ಆ ಮೂರು ಬಿಳಿ ಗೆರೆಗಳ ಬದಲಿಗೆ ತ್ರಿವರ್ಣ ಬಣ್ಣವಾಗಿರುವ ಕೇಸರಿ, ಬಿಳಿ ಹಾಗೂ ಹಸಿರಿನ ಗೆರೆಗಳನ್ನು ಅಳವಡಿಸಲಾಗಿದೆ. ಇದು ಭಾರತದ ಧ್ವಜವನ್ನು ಪ್ರತಿಬಿಂಬಿಸುತ್ತದೆ.

Dil Jashn Bole: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಅಧಿಕೃತ ಗೀತೆ ರಿಲೀಸ್‌, ರಣವೀರ್ ಶೈನಿಂಗ್

ಇನ್ನು ಎರಡನೆಯದ್ದು, ಆಟಗಾರರ ಎದೆಯ ಭಾಗದಲ್ಲಿ ಬಿಸಿಸಿಐ ಲೋಗೋದ ಮೇಲ್ಬಾಗದಲ್ಲಿ ಎರಡು ಸ್ಟಾರ್‌ಗಳನ್ನು ಅಳವಡಿಸಲಾಗಿದೆ. ಇದು ಭಾರತ ಗೆದ್ದ ಎರಡು ಏಕದಿನ ವಿಶ್ವಕಪ್ ಅನ್ನು ಪ್ರತಿಬಿಂಬಿಸುತ್ತದೆ. ಈ ಮೊದಲು ಬಿಸಿಸಿಐ ಲೋಗೋದ ಮೇಲೆ ಮೂರು ಸ್ಟಾರ್‌ಗಳಿದ್ದವು. ನಂಬಿಕೆಗಳು ಬೇರೂರಿವೆ, ಯಾವುದೂ ಅಸಾಧ್ಯವಲ್ಲ ಎನ್ನುವ ಸಂದೇಶವನ್ನು ಆ್ಯಡಿ​ಡಾ​ಸ್‌ ವಿಡಿಯೋದಲ್ಲಿ ಸಾರಿ ಹೇಳಿದೆ. 

2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 05ರಂದು ಆರಂಭವಾಗಲಿದ್ದು, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗುವ ಮೂಲಕ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ. ಇನ್ನು ಟೂರ್ನಿಗೆ ಆತಿಥ್ಯ ವಹಿಸಿರುವ ಭಾರತ ತಂಡವು ಅಕ್ಟೋಬರ್ 08ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ 5 ಬಾರಿಯ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.

ವಿಶ್ವಕಪ್‌ ಟೂರ್ನಿಗೂ ಮುನ್ನ ಟೀಂ ಇಂಡಿಯಾಗೆ ಹೊಸ ಅಸ್ತ್ರ ಸೇರ್ಪಡೆ..! BCCI ಮಾಸ್ಟರ್ ಪ್ಲಾನ್‌ಗೆ ಆಸೀಸ್ ಪಾಳಯದಲ್ಲಿ ನಡುಕ

ವಿಶ್ವಕಪ್ ಟೂರ್ನಿಗೆ ಭಾರತ ತಂಡ ಹೀಗಿದೆ ನೋಡಿ:

ರೋಹಿತ್‌ ಶರ್ಮಾ(ನಾಯಕ), ಹಾರ್ದಿಕ್‌ ಪಾಂಡ್ಯ(ಉಪನಾಯಕ), ಶುಭ್‌ಮನ್ ಗಿಲ್‌, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆ ಎಲ್ ರಾಹುಲ್‌(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್‌ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್‌, ಕುಲ್ದೀಪ್‌ ಯಾದವ್, ಮೊಹಮ್ಮದ್ ಶಮಿ, ಅಕ್ಷರ್‌ ಪಟೇಲ್, ಇಶಾನ್ ಕಿಶನ್‌, ಸೂರ್ಯಕುಮಾರ್ ಯಾದವ್.

Follow Us:
Download App:
  • android
  • ios