ಕಾಬೂಲ್(ಜೂ.21): ಕೊರೋನಾ ವೈರಸ್ ಕಾರಣ ಕ್ರಿಕೆಟ್ ಟೂರ್ನಿಗಳು ಸ್ಥಗಿತಗೊಂಡಿದೆ. ಮೊದಲ ಆರ್ಥಿಕ ಸಂಕಷ್ಟದಲ್ಲಿದ್ದ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಆಟಗಾರರ ವೇತನ ಕಡಿತ ಮಾಡಿದೆ. ಕೊರೋನಾ ಹೊಡೆತದ ಬೆನ್ನಲ್ಲೇ ಅಫ್ಘಾನಿಸ್ತಾನ ಯುವ ಕ್ರಿಕೆಟಿಗ ಅಫ್ಸರ್ ಝಝೈ ಕಾರು ಅಪಘಾತವಾಗಿದೆ. ಕಾರು ಸಂಪೂರ್ಣ ಪುಡಿ ಪುಡಿಯಾಗಿದೆ. ಅದೃಷ್ಟವಶಾತ್ ಅಫ್ಸರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಆಗಸ್ಟ್‌ಗೆ ಮುಗಿಯಲಿದೆ ನಿಷೇಧ; ಕ್ರಿಕೆಟ್‌ಗೆ ಮರಳಲು ಶ್ರೀಶಾಂತ್ ಅಭ್ಯಾಸ ಶುರು!

ವೈಯುಕ್ತಿ ಕಾರಣಕ್ಕೆ ತೆರಳುತ್ತಿದ್ದ ವೇಳೆ ಅಫ್ಸರ್ ಕಾರು ಅಪಘಾತಕ್ಕೆ ತುತ್ತಾಗಿದೆ. ಎದುರಿನಿಂದ ಬಂದ ಬಸ್‌ಗೆ ಡಿಕ್ಕಿಯಾದ ಪರಿಣಾಮ ಕಾರು ಪುಡಿ ಪುಡಿಯಾಗಿದೆ. ಎರಡೂ ವಾಹನಗಳು ವೇಗವಾಗಿ ಚಲಿಸುತ್ತಿದ್ದ ಕಾರಣ ಭೀಕರ ಅಪಘಾತ ಸಂಭವಿಸಿದೆ. ಅಫ್ಸರ್ ತಲೆಗೆ ಸಣ್ಣ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. 

ಅಫ್ಸರ್ ಅಪಘಾತ ಕುರಿತು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಮಾಜಿ ಮ್ಯಾನೇಜರ್ ಟ್ವಿಟ್ ಮೂಲಕ ಮಾಹಿತಿ ನೀಡಿದ್ದಾರೆ. ಇಷ್ಟೇ ಅಲ್ಲ ಶೀಘ್ರದಲ್ಲೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

 

ಕೊರೋನಾ ವೈರಸ್ ಹೊಡೆತದಿಂದ ನಲುಗಿದ್ದ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಗೆ ಇದೀಗ ಪ್ರಮುಖ ವಿಕೆಟ್ ಕೀಪರ್ ಕಾರು ಅಪಘಾತಕ್ಕೆ ತುತ್ತಾಗಿರುವುದು ಆತಂಕ ಹೆಚ್ಚಿಸಿದೆ