ರೋಹಿತ್-ಕೊಹ್ಲಿ ಟೆಸ್ಟ್ ನಿವೃತ್ತಿಯ ಬೆನ್ನಲ್ಲೇ ಗಂಭೀರ್ ತಂಡದ ಮೇಲೆ ಹಿಡಿತ ಸಾಧಿಸಲು ಯತ್ನಿಸುತ್ತಿದ್ದಾರೆ. ಯುವ ಆಟಗಾರರಿಗೆ ಅವಕಾಶ ನೀಡಲು ಹಿರಿಯರಿಗೆ ನಿವೃತ್ತಿ ಸೂಚಿಸಿದ್ದಾರೆನ್ನಲಾಗಿದೆ. ಗಿಲ್ ನಾಯಕರಾಗುವ ಸಾಧ್ಯತೆ ಹೆಚ್ಚಿದ್ದು, ಗಂಭೀರ್ ತಮ್ಮ ಅಧಿಕಾರ ವ್ಯಾಪ್ತಿ ವಿಸ್ತರಿಸಲು ಬಿಸಿಸಿಐಗೆ ಮನವಿ ಮಾಡಿದ್ದಾರೆ. ತಂಡದ ಆಯ್ಕೆ ಮತ್ತು ನಿರ್ಧಾರಗಳಲ್ಲಿ ಸಂಪೂರ್ಣ ಸ್ವಾತಂತ್ರ್ಯ ಬಯಸಿದ್ದಾರೆ.

ಬೆಂಗಳೂರು: ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ದಿಢೀರ್ ಎನ್ನುವಂತೆ ಟೆಸ್ಟ್ ಕ್ರಿಕೆಟ್ ಮಾದರಿಗೆ ದಿಢೀರ್ ವಿದಾಯ ಘೋಷಿಸಿದ್ದರು. ಇದರ ಬೆನ್ನಲ್ಲೇ ಟೀಂ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ಮೇಲೆ ಸಂಪೂರ್ಣ ಹಿಡಿತ ಸಾಧಿಸಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಗೌತಮ್ ಗಂಭೀರ್ ಟೀಂ ಇಂಡಿಯಾ ಹೆಡ್ ಕೋಚ್ ಆದ ಬೆನ್ನಲ್ಲೇ ಮಾತನಾಡಿದ್ದ ಅವರು, ತಂಡದಲ್ಲಿ ಸೂಪರ್ ಸ್ಟಾರ್ ಸಂಸ್ಕೃತಿ ಕೊನೆಯಾಗಬೇಕು ಎನ್ನುವ ವಾರ್ನಿಂಗ್ ನೀಡಿದ್ದರು. ಭವಿಷ್ಯದ ಭಾರತ ತಂಡ ಕಟ್ಟುವ ನಿಟ್ಟಿನಲ್ಲಿ, ಯುವ ಕ್ರಿಕೆಟಿಗರಿಗೆ ಮಣೆಹಾಕುವ ಉದ್ದೇಶದಿಂದಲೇ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ಗಂಭೀರ್ ಪರೋಕ್ಷವಾಗಿ

ಇಂಗ್ಲೆಂಡ್ ಎದುರಿನ 5 ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡುವ ಕ್ಷಣ ಸನ್ನಿಹಿತವಾಗುತ್ತಿರುವ ಬೆನ್ನಲ್ಲೇ ದಿಢೀರ್ ಎನ್ನುವಂತೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಮಾದರಿಗೆ ವಿದಾಯ ಘೋಷಿಸಿದ್ದರು. ಇದೀಗ ಜೂನ್ 20ರಿಂದ ಆರಂಭವಾಗಲಿರುವ ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಯಲ್ಲಿ ಭಾರತ ತಂಡದ ನಾಯಕರಾಗಲು ಶುಭ್‌ಮನ್ ಗಿಲ್ ಹಾಗೂ ಜಸ್ಪ್ರೀತ್ ಬುಮ್ರಾ ರೇಸ್‌ನಲ್ಲಿರುವ ಪ್ರಮುಖರೆನಿಸಿದ್ದಾರೆ.

ಇದೀಗ ದೈನಿಕ್ ಬಾಸ್ಕರ್ ವರದಿಯ ಪ್ರಕಾರ, ಗೌತಮ್ ಗಂಭೀರ್ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ. ಇದಷ್ಟೇ ಅಲ್ಲದೇ ತಂಡದ ಆಯ್ಕೆ, ಮಹತ್ವದ ನಿರ್ಧಾರ ಕೈಗೊಳ್ಳುವುದು, ತಂಡದ ಕುರಿತಾದ ಇನ್ನಿತರ ವಿಚಾರಗಳ ಬಗ್ಗೆ ಹಾಗೂ ತಾವು ತೆಗೆದುಕೊಳ್ಳುವ ತೀರ್ಮಾನದ ಬಗ್ಗೆ ಯಾರೂ ಪ್ರಶ್ನಿಸಬಾರದು ಎಂದು ಬಿಸಿಸಿಐ ಮುಂದೆ ಗಂಭೀರ್ ಡಿಮ್ಯಾಂಡ್ ಇಟ್ಟಿದ್ದಾರೆ ಎಂದು ವರದಿಯಾಗಿದೆ. ಹೀಗೇನಾದರೂ ಆದಲ್ಲಿ ಇದೇ ಮೊದಲ ಬಾರಿಗೆ ಭಾರತ ತಂಡದಲ್ಲಿ ನಾಯಕನಿಗಿಂತ ಕೋಚ್‌ಗೆ ಹೆಚ್ಚಿನ ಅಧಿಕಾರ ಸಿಕ್ಕಂತೆ ಆಗಲಿದೆ.

ತವರಿನಲ್ಲಿ ನ್ಯೂಜಿಲೆಂಡ್ ಎದುರು ಅನುಭವಿಸಿದ್ದ ಟೆಸ್ಟ್ ಸರಣಿ ವೈಟ್‌ವಾಷ್ ಹಾಗೂ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿನ ಸೋಲು ಮತ್ತೆ ಮರುಕಳಿಸದಂತೆ ಮಾಡಲು ತಮಗೆ ಸಂಪೂರ್ಣ ಅಧಿಕಾರ ನೀಡಬೇಕು ಎಂದು ಬಿಸಿಸಿಐ ಬಳಿ ಗೌತಮ್ ಗಂಭೀರ್ ಮನವಿ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. 

ಗೌತಮ್ ಗಂಭೀರ್ ವಯಸ್ಸಿನಲ್ಲಿ ತುಂಬಾ ಕಿರಿಯನಾಗಿರುವ ಶುಭ್‌ಮನ್ ಗಿಲ್‌ಗೆ ನಾಯಕತ್ವ ಪಟ್ಟ ಕಟ್ಟಲು ಒಲವು ತೋರಿದ್ದಾರೆ ಎಂದು ವರದಿಯಾಗಿದೆ. ಯಾಕೆಂದರೆ ಗಿಲ್ ಅವರನ್ನು ಕ್ಯಾಪ್ಟನ್ ಮಾಡಿದರೆ, ಗಂಭೀರ್ ಅವರ ನಿರ್ಧಾರವನ್ನು ಪ್ರಶ್ನಿಸುವುದಿಲ್ಲ. ಆದರೆ ಬುಮ್ರಾ ಅವರನ್ನು ನಾಯಕರನ್ನಾಗಿ ಮಾಡಿದರೆ, ಅವರನ್ನು ಕಂಟ್ರೋಲ್ ಮಾಡುವುದು ಗಂಭೀರ್‌ಗೆ ಸವಾಲಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಟೆಸ್ಟ್‌ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾಗೆ ಜಸ್ಪ್ರೀತ್ ಬುಮ್ರಾ ಉಪನಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದರು.ಹೀಗಾಗಿ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬಳಿಕ ಸಹಜವಾಗಿಯೇ ಬುಮ್ರಾ ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ಟನ್ ಆಗಲಿದ್ದಾರೆ ಎನ್ನಲಾಗುತ್ತಿತ್ತು. ಇನ್ನು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಬುಮ್ರಾ ಪರ್ತ್ ಹಾಗೂ ಸಿಡ್ನಿ ಟೆಸ್ಟ್‌ನಲ್ಲಿ ಭಾರತ ಕ್ರಿಕೆಟ್ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದರು.

ಸದ್ಯದಲ್ಲಿಯೇ ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ಹೊಸ ತಂಡವನ್ನು ಕಟ್ಟುವ ಜವಾಬ್ದಾರಿ ಬಿಸಿಸಿಐ ಆಯ್ಕೆ ಸಮಿತಿ ಮುಂದಿದೆ. ಬಲಿಷ್ಠ ಇಂಗ್ಲೆಂಡ್ ಎದುರು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ರವಿಚಂದ್ರನ್ ಅಶ್ವಿನ್ ಅನುಪಸ್ಥಿತಿ ತಂಡವನ್ನು ಕಾಡುವ ಸಾಧ್ಯತೆಯಿದೆ.