ಮಾರಾಟ ಶುರುವಾದ ತಕ್ಷಣವೇ ವೆಬ್‌ಸೈಟ್‌ನಲ್ಲಿ ಬುಕ್ ಮಾಡಲು ಪ್ರಯತ್ನಿಸಿದರೂ ಬಹುತೇಕ ಮಂದಿಗೆ ಒಂದೆರಡು ಗಂಟೆಗಳ ಕಾಲ ಕಾಯುವಂತೆ ಸೂಚಿಸುತ್ತಿತ್ತು. ಈ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದು, ಕೆಲವೇ ಟಿಕೆಟ್‌ಗಳನ್ನು ಮಾರಾಟಕ್ಕಿಟ್ಟು ಬಿಸಿಸಿಐ, ಐಸಿಸಿ ವಂಚಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಅಹಮದಾಬಾದ್(ಸೆ.04): ಭಾರತ ಹಾಗೂ ಪಾಕಿಸ್ತಾನ ನಡುವೆ ಅಕ್ಟೋಬರ್ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ನ ಬಹುನಿರೀಕ್ಷಿತ ಪಂದ್ಯದ ಟಿಕೆಟ್‌ಗಳು ಭಾನುವಾರವೇ ಸೋಲ್ಡೌಟ್ ಆಗಿವೆ. ಆನ್‌ಲೈನ್‌ನಲ್ಲಿ ಮಾರಾಟ ಆರಂಭಗೊಂಡ ಕೆಲವೇ ನಿಮಿಷಗಳಲ್ಲಿ ಟಿಕೆಟ್‌ಗಳು ಸಂಪೂರ್ಣವಾಗಿ ಖಾಲಿಯಾದವು.
ಮಾರಾಟ ಶುರುವಾದ ತಕ್ಷಣವೇ ವೆಬ್‌ಸೈಟ್‌ನಲ್ಲಿ ಬುಕ್ ಮಾಡಲು ಪ್ರಯತ್ನಿಸಿದರೂ ಬಹುತೇಕ ಮಂದಿಗೆ ಒಂದೆರಡು ಗಂಟೆಗಳ ಕಾಲ ಕಾಯುವಂತೆ ಸೂಚಿಸುತ್ತಿತ್ತು. ಈ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದು, ಕೆಲವೇ ಟಿಕೆಟ್‌ಗಳನ್ನು ಮಾರಾಟಕ್ಕಿಟ್ಟು ಬಿಸಿಸಿಐ, ಐಸಿಸಿ ವಂಚಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
World Cup 2023: ವಿಶ್ವಕಪ್ ಟೂರ್ನಿಗೆ ಇಂದೇ ಭಾರತ ತಂಡ ಪ್ರಕಟ..? ರೋಹಿತ್ ಪಡೆಯಲ್ಲಿ ಯಾರಿಗೆಲ್ಲಾ ಸ್ಥಾನ?
ಭಾರತ ರೌಂಡ್ ರಾಬಿನ್ ಹಂತದಲ್ಲಿ ಆಡಲಿರುವ ಎಲ್ಲಾ 9 ಪಂದ್ಯಗಳ ಟಿಕೆಟ್‌ಗಳ ಮಾರಾಟವೂ ಪೂರ್ತಿಯಾಗಿದ್ದು, ಸೋಲ್ಡ್ ಔಟ್ ಆಗಿವೆ. ಭಾರತದಷ್ಟೇ ಅಲ್ಲ, ಆಸ್ಟ್ರೇಲಿಯಾ, ಇಂಗ್ಲೆಂಡ್ ಸೇರಿ ಇನ್ನೂ ಕೆಲ ಪ್ರಮುಖ ತಂಡಗಳಾಡುವ ಪಂದ್ಯಗಳ ಟಿಕೆಟ್‌ಗಳೂ ಸಂಪೂರ್ಣವಾಗಿ ಮಾರಾಟವಾಗಿವೆ. ವಿಶ್ವಕಪ್ ಪಂದ್ಯಗಳು ಸಮೀಪಿಸುತ್ತಿದ್ದಂತೆ ಕ್ರೀಡಾಂಗಣಗಳ ಕೌಂಟರ್‌ಗಳಲ್ಲೂ ಟಿಕೆಟ್ ಮಾರಾಟಕ್ಕಿಡಲಾಗುತ್ತದೆ. ಆಗಲೂ ಭಾರೀ ಬೇಡಿಕೆ ಏರ್ಪಡುವ ಸಾಧ್ಯತೆ ಇದೆ.
ವಿಶ್ವಕಪ್‌ಗೆ ಭಾರತ ತಂಡ ಅಂತಿಮ, ರಾಹುಲ್‌ಗೆ ಸ್ಥಾನ?
ನವದೆಹಲಿ: ಅಕ್ಟೋಬರ್ 5ರಿಂದ ಆರಂಭಗೊಳ್ಳಲಿರುವ ಬಹುನಿರೀಕ್ಷಿತ ಐಸಿಸಿ ವಿಶ್ವಕಪ್‌ಗೆ ಭಾರತ ತಂಡ ಅಂತಿಮಗೊಂಡಿದ್ದು, ಕೆ.ಎಲ್.ರಾಹುಲ್‌ಗೆ ಸ್ಥಾನ ಸಿಗಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದಾಗಿ ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. ತಂಡ ಪ್ರಕಟಗೊಳಿಸಲು ಸೆಪ್ಟೆಂಬರ್ 5 ಕೊನೆಯ ದಿನವಾಗಿದ್ದು, ಬಿಸಿಸಿಐ ಮಂಗಳವಾರ ತಂಡ ಘೋಷಿಸಲಿದೆ. 15 ಸದಸ್ಯರ ತಂಡದಲ್ಲಿ ಇಶಾನ್ ಕಿಶನ್, ಸೂರ್ಯಕುಮಾರ್‌ಗೆ ಸ್ಥಾನ ಸಿಗಲಿದ್ದು, ಸಂಜು ಸ್ಯಾಮ್ಸನ್ ಹಾಗೂ ಪ್ರಸಿದ್ಧ್ ಕೃಷ್ಣಗೆ ಜಾಗವಿಲ್ಲ ಎಂದು ಹೇಳಲಾಗುತ್ತಿದೆ.
ಈಗಾಗಲೇ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್, ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಅಂತಿಮಗೊಳಿಸಲು ಟೀಂ ಮ್ಯಾನೇಜ್‌ಮೆಂಟ್ ಜತೆ ಚರ್ಚಿಸಲು ಲಂಕಾಗೆ ಹಾರಿದ್ದಾರೆ. ಟೀಂ ಇಂಡಿಯಾ ಸದ್ಯ ಏಷ್ಯಾಕಪ್ ಟೂರ್ನಿಯನ್ನಾಡಲು ಲಂಕಾ ಪ್ರವಾಸದಲ್ಲಿದೆ. ಕೇರಳ ಮೂಲದ ಸಂಜು ಸ್ಯಾಮ್ಸನ್, ಕನ್ನಡಿಗ ವೇಗಿ ಪ್ರಸಿದ್ಧ್ ಕೃಷ್ಣ ಹಾಗೂ ಲೆಗ್‌ಸ್ಪಿನ್ನರ್ ಯುಜುವೇಂದ್ರ ಚಹಲ್‌ಗೆ ಭಾರತ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗುವುದು ಅನುಮಾನ ಎನಿಸಿದೆ.
ಭಾರತ-ಪಾಕ್ ವಿಶ್ವಕಪ್ ಟಿಕೆಟ್ ಮಾರಾಟ ಇಂದು: ಬೆಂಗ್ಳೂರು ಪಂದ್ಯದ ಟಿಕೆಟ್ ಸೋಲ್ಡೌಟ್!
ಸಂಭವನೀಯ ತಂಡ: ರೋಹಿತ್ ಶರ್ಮಾ(ನಾಯಕ), ಹಾರ್ದಿಕ್ ಪಾಂಡ್ಯ(ಉಪನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅಕ್ಷರ್ ಪಟೇಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.
