ಒಂದು ದಿನ ಮುಂಚಿತವಾಗಿಯೇ ಏಕದಿನ ವಿಶ್ವಕಪ್ ಉದ್ಘಾಟನಾ ಸಮಾರಂಭ..!
ಅಕ್ಟೋಬರ್ 05ರಂದು ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದ್ದು, ಇದರ ಒಂದು ದಿನ ಮೊದಲೇ ಉದ್ಘಾಟನಾ ಸಮಾರಂಭ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮತ್ತು ಬಿಸಿಸಿಐನ ಉನ್ನತ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಅಹಮದಾಬಾದ್(ಆ.28): ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಅದ್ಧೂರಿ ಉದ್ಘಾಟನಾ ಸಮಾರಂಭ ಅಕ್ಟೋಬರ್ 4ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಯೋಜನೆಗೊಳ್ಳಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಅಕ್ಟೋಬರ್ 05ರಂದು ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದ್ದು, ಇದರ ಒಂದು ದಿನ ಮೊದಲೇ ಉದ್ಘಾಟನಾ ಸಮಾರಂಭ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮತ್ತು ಬಿಸಿಸಿಐನ ಉನ್ನತ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಿಸಿಸಿಐ ಮತ್ತು ಐಸಿಸಿ ಎಲ್ಲಾ ಕ್ರಿಕೆಟ್ ಮಂಡಳಿಗಳ ಉನ್ನತ ಆಡಳಿತಗಾರರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಿವೆ.
ಏಕದಿನ ವಿಶ್ವಕಪ್ನಲ್ಲಿ 4ನೇ ಕ್ರಮಾಂಕದಲ್ಲಿ ಆಡ್ತಾರಾ ವಿರಾಟ್ ಕೊಹ್ಲಿ ..? ರವಿಶಾಸ್ತ್ರಿ ಹೇಳಿದ್ದೇನು?
ವಿಶ್ವಕಪ್‌ನ ಅಭ್ಯಾಸ ಪಂದ್ಯಗಳು ಅಕ್ಟೋಬರ್ 3ರಂದು ಕೊನೆಗೊಳ್ಳಲಿದ್ದು, 4ರಂದು ಎಲ್ಲಾ ತಂಡಗಳ ನಾಯಕರು ಅಹಮದಾಬಾದ್‌ಗೆ ಆಗಮಿಸಲಿದ್ದಾರೆ. 1.32 ಲಕ್ಷ ಆಸನ ಸಾಮರ್ಥ್ಯವಿರುವ ಇದೇ ಕ್ರೀಡಾಂಗಣದಲ್ಲೇ ಫೈನಲ್ ಪಂದ್ಯ ಕೂಡಾ ನಿಗದಿಯಾಗಿದೆ.
4ನೇ ಕ್ರಮಾಂಕಕ್ಕೆ ಕೊಹ್ಲಿ ಸೂಕ್ತ ಆಟಗಾರ: ಎಬಿಡಿ
ನವದೆಹಲಿ: ಭಾರತ ಏಕದಿನ ತಂಡದಲ್ಲಿ ವಿರಾಟ್ ಕೊಹ್ಲಿ 4ನೇ ಕ್ರಮಾಂಕದಲ್ಲಿ ಆಡಲು ಸೂಕ್ತ ಆಟಗಾರ ಎಂದು ದಕ್ಷಿಣ ಆಫ್ರಿಕಾದ ದಿಗ್ಗಜ ಆಟಗಾರ ಎಬಿ ಡಿ ವಿಲಿಯರ್ಸ್ ಅಭಿಪ್ರಾಯಿಸಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಏಕದಿನ ವಿಶ್ವಕಪ್, ಏಷ್ಯಾಕಪ್ ಬಗ್ಗೆ ಮಾತನಾಡಿರುವ ಎಬಿಡಿ, ‘ಭಾರತ ತಂಡದಲ್ಲಿ 4ನೇ ಕ್ರಮಾಂಕದಲ್ಲಿ ಯಾರು ಆಡಲಿದ್ದಾರೆ ಎನ್ನುವ ಚರ್ಚೆ ಇನ್ನೂ ನಡೆಯುತ್ತಿದೆ. ಕೊಹ್ಲಿ ಆಡಬಹುದು ಎನ್ನುವ ಬಗ್ಗೆ ಗುಸು ಗುಸು ಇದೆ. ಆ ಸ್ಥಾನಕ್ಕೆ ಅವರು ಸೂಕ್ತ ಆಟಗಾರ. ಕೊಹ್ಲಿಗೆ 4ನೇ ಕ್ರಮಾಂಕದಲ್ಲಿ ಆಡಲು ಇಷ್ಟವಿದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಆದರೆ ಅವರು ಆಡಿದರೆ ಬ್ಯಾಟಿಂಗ್ ಕ್ರಮಾಂಕಕ್ಕೆ ಇನ್ನಷ್ಟು ಸಮತೋಲನ ಸಿಗಲಿದೆ’ ಎಂದಿದ್ದಾರೆ.
ಏಷ್ಯಾಡ್ ಕ್ರಿಕೆಟ್: ಭಾರತ ತಂಡಕ್ಕೆ ಲಕ್ಷ್ಮಣ್ ಕೋಚ್
ನವದೆಹಲಿ: ಚೀನಾದ ಹ್ಯಾಂಗ್ಝೂನಲ್ಲಿ ಸೆಪ್ಟೆಂಬರ್ 23ರಿಂದ ಅಕ್ಟೋಬರ್ 8ರ ವರೆಗೆ ನಡೆಯಲಿರುವ ಏಷ್ಯನ್ ಗೇಮ್ಸ್‌ನ ಕ್ರಿಕೆಟ್ ಟೂರ್ನಿಗೆ ಭಾರತ ತಂಡಕ್ಕೆ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಅ.5ರಿಂದ ಏಕದಿನ ವಿಶ್ವಕಪ್ ಆರಂಭವಾಗಲಿರುವ ಕಾರಣ ತಂಡದ ಪ್ರಮುಖ ಕೋಚ್ ರಾಹುಲ್ ದ್ರಾವಿಡ್, ವಿಶ್ವಕಪ್ ಆಡಲಿರುವ ಭಾರತ ತಂಡದ ಜೊತೆ ಇರಲಿದ್ದಾರೆ.
ಏಷ್ಯಾಕಪ್ ಟೂರ್ನಿಗೂ ಮುನ್ನ ಲಂಕಾದ 2 ಸ್ಟಾರ್ ಆಟಗಾರರಿಗೆ ಕೊರೋನಾ ಪಾಸಿಟಿವ್! ಆತಂಕದಲ್ಲಿ ಲಂಕಾ ಪಾಳಯ
ಹೀಗಾಗಿ ಎನ್‌ಸಿಎ ಮುಖ್ಯಸ್ಥ ಲಕ್ಷ್ಮಣ್ ಅವರಿಗೆ ಈ ಜವಾಬ್ದಾರಿ ನೀಡಲಾಗಿದೆ ಎಂದು ವರದಿಯಾಗಿದೆ. ಬೌಲಿಂಗ್ ಕೋಚ್ ಆಗಿ ಸಾಯಿರಾಜ್ ಬಹುತುಲೆ ಮತ್ತು ಫೀಲ್ಡಿಂಗ್ ಕೋಚ್ ಆಗಿ ಮುನೀಶ್ ಬಾಲಿ ಕೂಡ ಭಾರತ ತಂಡದೊಂದಿಗೆ ಇರಲಿದ್ದಾರೆ ಎಂದು ತಿಳಿದುಬಂದಿದೆ.
ಏಷ್ಯನ್ ಗೇಮ್ಸ್ ಟೂರ್ನಿಗೆ ಭಾರತ ಪುರುಷರ ತಂಡ ಹೀಗಿದೆ:
ಋತುರಾಜ್ ಗಾಯಕ್ವಾಡ್(ನಾಯಕ), ಯಶಸ್ವಿ ಜೈಸ್ವಾಲ್, ರಾಹುಲ್ ತ್ರಿಪಾಠಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಪ್ರಭ್‌ಸಿಮ್ರನ್ ಸಿಂಗ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶೆಹಬಾಜ್ ಅಹಮದ್, ರವಿ ಬಿಷ್ಣೋಯ್, ಆವೇಶ್ ಖಾನ್, ಆರ್ಶದೀಪ್ ಸಿಂಗ್, ಮುಕೇಶ್ ಕುಮಾರ್, ಶಿವಂ ಮಾವಿ, ಶಿವಂ ದುಬೆ.