ಕೊನೆಯ ಟೆಸ್ಟ್‌ ಪಂದ್ಯದಲ್ಲಿ ಭಾರತ ಎದುರು ಟಾಸ್ ಗೆದ್ದ ಆಸ್ಟ್ರೇಲಿಯಾಟಾಸ್ ಗೆದ್ದ ಸ್ಟೀವ್ ಸ್ಮಿತ್ ಮೊದಲು ಬ್ಯಾಟಿಂಗ್ ಮಾಡಲು ತೀರ್ಮಾನಭಾರತ ತಂಡದಲ್ಲಿ ಒಂದು ಮಹತ್ವದ ಬದಲಾವಣೆ

ಅಹಮದಾಬಾದ್‌(ಮಾ.09): ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್‌-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಹಾಗೂ ಕೊನೆಯ ಟೆಸ್ಟ್‌ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಭಾರತ ತಂಡದಲ್ಲಿ ಒಂದು ಮಹತ್ವದ ಬದಲಾವಣೆ ಮಾಡಲಾಗಿದೆ

ಉಭಯ ತಂಡಗಳ ಪಾಲಿಗೆ ಸಾಕಷ್ಟು ಮಹತ್ವವೆನಿಸಿರುವ ಈ ಟೆಸ್ಟ್‌ ಪಂದ್ಯಕ್ಕೆ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ. ನಿರೀಕ್ಷೆಯಂತೆಯೇ ಆಸ್ಟ್ರೇಲಿಯಾ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇನ್ನು ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ನೀಡಲಾಗಿದ್ದು, ಮೊಹಮ್ಮದ್ ಶಮಿ ತಂಡ ಕೂಡಿಕೊಂಡಿದ್ದಾರೆ.

Scroll to load tweet…

ವಿಶೇಷ ಕ್ಯಾಪ್ ವಿತರಿಸಿದ ಪ್ರಧಾನಿ ಮೋದಿ: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಕೊನೆಯ ಟೆಸ್ಟ್ ಪಂದ್ಯದ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಪ್ರೇ​ಲಿಯಾ ಪ್ರಧಾನಿ ಆಂಥೋನಿ ಆಲ್ಬ​ನೀಸ್‌ ಉಪಸ್ಥಿತರಿದ್ದು, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಪ್ರಧಾನಿ ಮೋದಿ ವಿಶೇಷ ಕ್ಯಾಪ್ ನೀಡಿದರು. ಇನ್ನು ಸ್ಟೀವ್ ಸ್ಮಿತ್‌ಗೆ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ವಿಶೇಷ ಕ್ಯಾಪ್‌ ನೀಡಿದರು. ಇದಾದ ಬಳಿಕ ವಿಶೇಷ ವಾಹನ ಉಭಯ ದೇಶಗಳ ಪ್ರಧಾನಿಗಳು ಮೈದಾನದಲ್ಲಿ ನೆರೆದಿದ್ದ ಅಭಿಮಾನಿಗಳತ್ತ ಕೈಬೀಸಿದರು.

2-1 ಮುನ್ನಡೆಯಲ್ಲಿರುವ ಟೀಂ ಇಂಡಿಯಾ: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಮೊದಲೆರಡು ಪಂದ್ಯಗಳನ್ನು ಜಯಿಸುವ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿತ್ತು. ಆದರೆ ಮೂರನೇ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ನೇತೃತ್ವದ ಆಸ್ಟ್ರೇಲಿಯಾ ತಂಡವು ಇಂದೋರ್‌ನಲ್ಲಿ 9 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಭರ್ಜರಿಯಾಗಿಯೇ ಕಮ್‌ಬ್ಯಾಕ್ ಮಾಡಿತ್ತು. ಹೀಗಾಗಿ 4ನೇ ಟೆಸ್ಟ್‌ ಪಂದ್ಯದಲ್ಲಿ ಉಭಯ ತಂಡಗಳ ಪೈಕಿ ಯಾವ ತಂಡ ಮೇಲುಗೈ ಸಾಧಿಸಬಹುದು ಎನ್ನುವ ಕುತೂಹಲ ಜೋರಾಗಿದೆ 

ತಂಡಗಳು ಹೀಗಿವೆ ನೋಡಿ

ಭಾರತ: ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್‌, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ರವೀಂದ್ರ ಜಡೇಜಾ, ಕೆ ಎಸ್ ಭರತ್, ರವಿಚಂದ್ರನ್ ಅಶ್ವಿನ್‌, ಅಕ್ಷರ್‌ ಪಟೇಲ್, ಮೊಹಮದ್‌ ಶಮಿ, ಉಮೇ​ಶ್‌ ಯಾದವ್.

ಆಸ್ಪ್ರೇಲಿಯಾ: ಉಸ್ಮಾನ್ ಖವಾಜ, ಟ್ರಾವಿಸ್ ಹೆಡ್‌, ಮಾರ್ನಸ್ ಲಬುಶೇನ್‌, ಸ್ಟೀವ್ ಸ್ಮಿತ್‌(ನಾ​ಯ​ಕ​), ಪೀಟರ್ ಹ್ಯಾಂಡ್ಸ್‌ಕಂಬ್‌, ಕ್ಯಾಮರೋನ್ ಗ್ರೀನ್‌, ಅಲೆಕ್ಸ್ ಕೇರ್ರಿ, ಮಿಚೆಲ್‌ ಸ್ಟಾರ್ಕ್, ನೇಥನ್ ಲಯನ್‌, ಟೋಡ್‌ ಮರ್ಫಿ, ಮ್ಯಾಥ್ಯೂ ಕುಹ್ನೆ​ಮಾನ್‌