ಅಹಮದಾಬಾದ್‌ ಟೆಸ್ಟ್ ಪಂದ್ಯ ನೀರಸ ಡ್ರಾನತ್ತ ಇನ್ನು 18 ರನ್‌ ಇನಿಂಗ್ಸ್ ಹಿನ್ನಡೆ ಅನುಭವಿಸಿರುವ ಆಸ್ಟ್ರೇಲಿಯಾಕೊನೆಯ ದಿನದಾಟದ ಮೊದಲ ಸೆಷನ್‌ನಲ್ಲಿ ಕೇವಲ ಒಂದು ವಿಕೆಟ್‌ ಕಳೆದುಕೊಂಡ ಆಸೀಸ್

ಅಹಮದಾಬಾದ್‌(ಮಾ.13): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕನೇ ಟೆಸ್ಟ್‌ ಪಂದ್ಯವು ನೀರಸ ಡ್ರಾನತ್ತ ಸಾಗುತ್ತಿದೆ. 91 ರನ್‌ ಇನಿಂಗ್ಸ್‌ ಹಿನ್ನಡೆಯೊಂದಿಗೆ ಕೊನೆಯ ದಿನದಾಟ ಆರಂಭಿಸಿರುವ ಆಸ್ಟ್ರೇಲಿಯಾ, 5ನೇ ದಿನದಾಟದ ಲಂಚ್ ಬ್ರೇಕ್ ವೇಳೆಗೆ ಎರಡನೇ ಇನಿಂಗ್ಸ್‌ನಲ್ಲಿ ಕೇವಲ ಒಂದು ವಿಕೆಟ್ ಕಳೆದುಕೊಂಡು 73 ರನ್ ಗಳಿಸಿದ್ದು, ಇನ್ನು 15 ರನ್ ಹಿನ್ನಡೆಯಲ್ಲಿದೆ.

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಪಂದ್ಯದ ಕೊನೆಯ ದಿನದಾಟದಲ್ಲಿ 3 ರನ್‌ಗಳೊಂದಿಗೆ ಎರಡನೇ ಇನಿಂಗ್ಸ್‌ ಆರಂಭಿಸಿದ ಆಸ್ಟ್ರೇಲಿಯಾ, ಆರಂಭದಲ್ಲೇ ನೈಟ್‌ ವಾಚ್‌ಮನ್‌ ಮ್ಯಾಥ್ಯೂ ಕುಹ್ನೆಮನ್ ವಿಕೆಟ್ ಕಳೆದುಕೊಂಡಿತು. ಕುಹ್ನೆಮನ್‌ 35 ಎಸೆತಗಳನ್ನು ಎದುರಿಸಿ ಕೇವಲ 6 ರನ್‌ ಗಳಿಸಿ ರವಿಚಂದ್ರನ್ ಅಶ್ವಿನ್ ಬೌಲಿಂಗ್‌ನಲ್ಲಿ ಎಲ್‌ಬಿ ಬಲೆಗೆ ಬಿದ್ದರು. ಆಸೀಸ್‌ ತಂಡವು 14 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು.

Scroll to load tweet…

ಹೆಡ್‌-ಲಬುಶೇನ್ ಎಚ್ಚರಿಕೆಯ ಆಟ: ನೈಟ್‌ ವಾಚ್‌ಮನ್‌ ಕುಹ್ನೆಮನ್‌ ವಿಕೆಟ್‌ ಪತನದ ಬಳಿಕ ಎರಡನೇ ವಿಕೆಟ್‌ಗೆ ಟ್ರಾವಿಸ್ ಹೆಡ್‌ ಹಾಗೂ ಮಾರ್ನಸ್‌ ಲಬುಶೇನ್‌ ಎಚ್ಚರಿಕೆಯ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾಗಿದ್ದಾರೆ. ಎರಡನೇ ವಿಕೆಟ್‌ಗೆ ಈ ಜೋಡಿ 152 ಎಸೆತಗಳನ್ನು ಎದುರಿಸಿ ಮುರಿಯದ 59 ರನ್‌ಗಳ ಜತೆಯಾಟವಾಡುವ ಮೂಲಕ ತಂಡವನ್ನು ಆರಂಭಿಕ ಆಘಾತದಿಂದ ಪಾರಾಗಿದ್ದಾರೆ. ಟ್ರಾವಿಸ್ ಹೆಡ್‌ 96 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ ಅಜೇಯ 45 ರನ್‌ ಬಾರಿಸಿದರೆ, ಮತ್ತೊಂದು ತುದಿಯಲ್ಲಿ ಮಾರ್ನಸ್ ಲಬುಶೇನ್‌ 85 ಎಸೆತಗಳನ್ನು ಎದುರಿಸಿ 2 ಬೌಂಡರಿ ಸಹಿತ 22 ರನ್‌ ಬಾರಿಸಿ ಕ್ರೀಸ್‌ ಕಾಯ್ದುಕೊಂಡಿದ್ದಾರೆ.