ಅಹಮದಾಬಾದ್‌ನಲ್ಲಿ ಕೊಹ್ಲಿ ಸಿಂಹ ಘರ್ಜನೆ, ಕೊನೆಗೂ ಟೆಸ್ಟ್‌ನಲ್ಲೂ ಬಂತು ವಿರಾಟ್ ಶತಕ..!
ಟೆಸ್ಟ್ ಕ್ರಿಕೆಟ್‌ನಲ್ಲಿ 28ನೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ
ಅಹಮದಾಬಾದ್ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಕರ್ಷಕ ಶತಕ
2019ರ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ
ಅಹಮದಾಬಾದ್(ಮಾ.12): ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, 2019ರ ಬಳಿಕ ಕೊನೆಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ಮೂರಂಕಿ ಮೊತ್ತ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಲಾತ್ಮಕ ಶತಕ ಸಿಡಿಸುವ ಮೂಲಕ ರೆಡ್ ಬಾಲ್ ಕ್ರಿಕೆಟ್‌ನಲ್ಲಿ ಶತಕದ ಬರ ನೀಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಹೌದು, ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಕೊನೆಯ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಕರ್ಷಕ ಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿರಾಟ್ ಕೊಹ್ಲಿ 2019ರಲ್ಲಿ ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಬಾಂಗ್ಲಾದೇಶ ಎದುರಿನ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಕೊನೆಯ ಬಾರಿಗೆ ಶತಕ ಸಿಡಿಸಿದ್ದರು. ಇದಾದ ಬಳಿಕ ಕಳೆದ ಕೆಲ ವರ್ಷಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಲು ವಿಫಲವಾಗಿದ್ದರು. ಆದರೆ ಕಳೆದ ವರ್ಷ ಏಷ್ಯಾಕಪ್ ಟಿ20 ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಆಫ್ಘಾನಿಸ್ತಾನ ಎದುರು ಆಕರ್ಷಕ ಶತಕ ಸಿಡಿಸಿ ಮಿಂಚಿದ್ದರು. ಇದಾದ ಬಳಿಕ ಏಕದಿನ ಸರಣಿಯಲ್ಲೂ ವಿರಾಟ್ ಶತಕದ ಬರ ನೀಗಿಸಿಕೊಂಡಿದ್ದರು. ಇದೀಗ ಟೆಸ್ಟ್ ಕ್ರಿಕೆಟ್‌ನಲ್ಲೂ ಕೊಹ್ಲಿ ಮೂರಂಕಿ ಮೊತ್ತ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
28ನೇ ಟೆಸ್ಟ್ ಶತಕ ಸಿಡಿಸಿದ ವಿರಾಟ್ ಕೊಹ್ಲಿ: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಇದೀಗ 241 ಎಸೆತಗಳನ್ನು ಎದುರಿಸಿ 5 ಬೌಂಡರಿ ಸಹಿತ ಮೂರಂಕಿ ಮೊತ್ತ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂದಹಾಗೆ ಇದು ಟೆಸ್ಟ್ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಬಾರಿಸಿದ 28ನೇ ಹಾಗೂ ಒಟ್ಟಾರೆ 75ನೇ ಶತಕವೆನಿಸಿಕೊಂಡಿತು.
Ahmedabad Test: ಶತಕದ ಹೊಸ್ತಿಲಲ್ಲಿ ವಿರಾಟ್ ಕೊಹ್ಲಿ, ಮುಂದುವರೆದ ಟೀಂ ಇಂಡಿಯಾ ಹೋರಾಟ
1205 ದಿನಗಳ ವನವಾಸಕ್ಕೆ ಮುಕ್ತಿ: ಹೌದು, ವಿರಾಟ್ ಕೊಹ್ಲಿ, 2019ರ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶ ಎದುರು ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ಕೊನೆಯ ಬಾರಿಗೆ ಶತಕ ಸಿಡಿಸಿದ್ದರು. ಇದಾಗಿ ಎರಡೂವರೆ ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಲು ವಿಫಲವಾಗಿದ್ದರು. ಆದರೆ ಇದೀಗ 2022ರ ಸೆಪ್ಟೆಂಬರ್‌ನಿಂದೀಚೆಗೆ ಕಳೆದ 6 ತಿಂಗಳಲ್ಲಿ ಮೂರು ಮಾದರಿಯ ಕ್ರಿಕೆಟ್‌ನಲ್ಲಿ 5 ಅಂತಾರಾಷ್ಟ್ರೀಯ ಶತಕ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ, ಹಳೆಯ ಲಯಕ್ಕೆ ಬರುವಲ್ಲಿ ಯಶಸ್ವಿಯಾಗಿದ್ದಾರೆ.