Ahmedabad Test: ಶತಕದ ಹೊಸ್ತಿಲಲ್ಲಿ ವಿರಾಟ್ ಕೊಹ್ಲಿ, ಮುಂದುವರೆದ ಟೀಂ ಇಂಡಿಯಾ ಹೋರಾಟ

ಅಹಮದಾಬಾದ್‌ ಟೆಸ್ಟ್‌ ಪಂದ್ಯದಲ್ಲಿ ಆಸೀಸ್‌ಗೆ ಟೀಂ ಇಂಡಿಯಾ ತಿರುಗೇಟು
ನಾಲ್ಕನೇ ದಿನದಾಟದ ಲಂಚ್‌ ಬ್ರೇಕ್‌ ವೇಳೆಗೆ ಟೀಂ ಇಂಡಿಯಾ 362/4
2019ರ ಬಳಿಕ ಮೊದಲ ಟೆಸ್ಟ್ ಶತಕದ ಹೊಸ್ತಿಲಲ್ಲಿ ವಿರಾಟ್ ಕೊಹ್ಲಿ

Ahmedabad Test Virat Kohli Solid On 88 As India Reach 362 for 4 At Lunch kvn

ಅಹಮದಾಬಾದ್‌(ಮಾ.12): ಟೆಸ್ಟ್‌ ಕ್ರಿಕೆಟ್‌ನಲ್ಲಿ ಶತಕದ ಬರ ನೀಗಿಸಿಕೊಳ್ಳುವತ್ತ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ದಿಟ್ಟ ಹೆಜ್ಜೆಯಿಟ್ಟಿದ್ದಾರೆ. ಬಾರ್ಡರ್ ಗವಾಸ್ಕರ್ ಟೆಸ್ಟ್‌ ಸರಣಿಯ ನಾಲ್ಕನೇ ಪಂದ್ಯದ ನಾಲ್ಕನೇ ದಿನದಾಟದ ಲಂಚ್‌ ಬ್ರೇಕ್‌ ವೇಳೆಗೆ ಟೀಂ ಇಂಡಿಯಾ 4 ವಿಕೆಟ್ ಕಳೆದುಕೊಂಡು 362 ರನ್‌ ಬಾರಿಸಿದ್ದು, ಇನ್ನು ಕೇವಲ 118 ರನ್‌ಗಳ ಹಿನ್ನಡೆಯಲ್ಲಿದೆ.

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಕೊನೆಯ ಟೆಸ್ಟ್ ಪಂದ್ಯದ ಮೂರನೇ ದಿನದಾಟದಂತ್ಯದ ವೇಳೆಗೆ ಕೇವಲ 3 ವಿಕೆಟ್ ಕಳೆದುಕೊಂಡು 289 ರನ್‌ ಬಾರಿಸಿದ್ದ ಟೀಂ ಇಂಡಿಯಾ, ನಾಲ್ಕನೇ ದಿನದಾಟದ ಆರಂಭದಲ್ಲೇ ಆಲ್ರೌಂಡರ್ ರವೀಂದ್ರ ಜಡೇಜಾ ವಿಕೆಟ್ ಕಳೆದುಕೊಂಡು ಆಘಾತಕ್ಕೊಳಗಾಯಿತು. ರವೀಂದ್ರ ಜಡೇಜಾ ನಾಲ್ಕನೇ ದಿನ ತನ್ನ ಖಾತೆಗೆ ಕೇವಲ 12 ರನ್ ಸೇರಿಸಿ ಟೋಡ್‌ ಮರ್ಫಿಗೆ ವಿಕೆಟ್ ಒಪ್ಪಿಸಿದರು. ಜಡೇಜಾ ಒಟ್ಟು 84 ಎಸೆತಗಳನ್ನು ಎದುರಿಸಿ ಎರಡು ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 28 ರನ್‌ ಬಾರಿಸಿ ವಿಕೆಟ್ ಒಪ್ಪಿಸಿದರು.

ಕೊಹ್ಲಿ-ಭರತ್ ಜುಗಲ್ಬಂದಿ: ರವೀಂದ್ರ ಜಡೇಜಾ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ವಿಕೆಟ್ ಕೀಪರ್ ಬ್ಯಾಟರ್ ಕೆ ಎಸ್ ಭರತ್ 5ನೇ ವಿಕೆಟ್‌ಗೆ ವಿರಾಟ್ ಕೊಹ್ಲಿ ಜತೆ ಸಮಯೋಚಿತ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾಗಿದ್ದಾರೆ. ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪರ್ ಸ್ಥಾನ ಗಿಟ್ಟಿಸಿಕೊಂಡಿರುವ ಭರತ್, ಮೊದಲ ಮೂರು ಟೆಸ್ಟ್‌ ಪಂದ್ಯಗಳಲ್ಲಿ ಗಮನಾರ್ಹ ಪ್ರದರ್ಶನ ತೋರಲು ವಿಫಲವಾಗಿದ್ದರು. ಆದರೆ ಇದೀಗ ಕೊಹ್ಲಿ ಜತೆಗೂಡಿ 5ನೇ ವಿಕೆಟ್‌ಗೆ 144 ಎಸೆತಗಳನ್ನು ಎದುರಿಸಿ ಮುರಿಯದ 53 ರನ್‌ಗಳ ಜತೆಯಾಟವಾಡುವಲ್ಲಿ ಯಶಸ್ವಿಯಾಗಿದ್ದಾರೆ. ಭರತ್ 70 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 25 ರನ್ ಗಳಿಸಿ ಕ್ರೀಸ್‌ ಕಾಯ್ದುಕೊಂಡಿದ್ದಾರೆ.

Ahmedabad Test ಕ್ರಿಕೆಟ್ ದಿಗ್ಗಜ ಬ್ರಿಯನ್‌ ಲಾರಾ ದಾಖಲೆ ಅಳಿಸಿ ಹಾಕಿದ ವಿರಾಟ್‌ ಕೊಹ್ಲಿ..!

ಶತಕದತ್ತ ವಿರಾಟ್ ಕೊಹ್ಲಿ ದಾಪುಗಾಲು: ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡಾ ಮೊದಲ ಮೂರು ಟೆಸ್ಟ್‌ ಪಂದ್ಯಗಳಲ್ಲಿ ದೊಡ್ಡ ಮೊತ್ತ ಕಲೆಹಾಕಲು ವಿಫಲವಾಗಿದ್ದರು. ಆದರೆ ಇದೀಗ ಕೊನೆಯ ಟೆಸ್ಟ್‌ ಪಂದ್ಯದಲ್ಲಿ ಕಲಾತ್ಮಕ ಆಟದ ಮೂಲಕ ಗಮನ ಸೆಳೆದಿದ್ದು, 2019ರ ಬಳಿಕ ಇದೀಗ ಮೊದಲ ಬಾರಿಗೆ ಟೆಸ್ಟ್‌ ಕ್ರಿಕೆಟ್‌ನಲ್ಲಿ ಶತಕ ಸಿಡಿಸಲು ವಿರಾಟ್ ಕೊಹ್ಲಿ ದಾಪುಗಾಲಿಟ್ಟಿದ್ದಾರೆ. ಸದ್ಯ ವಿರಾಟ್ ಕೊಹ್ಲಿ 220 ಎಸೆತಗಳನ್ನು ಎದುರಿಸಿ 5 ಬೌಂಡರಿ ಸಹಿತ 88 ರನ್ ಬಾರಿಸಿದ್ದು, ಇನ್ನು ಕೇವಲ 12 ರನ್ ಬಾರಿಸಿದರೆ, ಟೆಸ್ಟ್ ಕ್ರಿಕೆಟ್‌ನಲ್ಲಿ 28ನೇ ಶತಕ ಪೂರೈಸಲಿದ್ದಾರೆ.

30 ವರ್ಷದ ಬಳಿಕ ಭಾರತ ಹೊಸ ದಾಖಲೆ: ಹೌದು ಟೀಂ ಇಂಡಿಯಾದ ಅಗ್ರಕ್ರಮಾಂಕದ 5 ಜೋಡಿಯು 50+ ರನ್‌ಗಳ ಜತೆಯಾಟವಾಡುವ ಮೂಲಕ ಮೂರು ದಶಕಗಳ ದಾಖಲೆಯನ್ನು ಸರಿಗಟ್ಟಿದೆ. ಈ ಮೊದಲು 1993ರಲ್ಲಿ ಮುಂಬೈನಲ್ಲಿ ಟೀಂ ಇಂಡಿಯಾ, ಇಂಗ್ಲೆಂಡ್ ಎದುರು ಮೊದಲ 5 ವಿಕೆಟ್‌ಗೆ 50+ ರನ್‌ಗಳ ಜತೆಯಾಟವಾಡಿತ್ತು. ಇದೀಗ ಅಹಮದಾಬಾದ್‌ನಲ್ಲಿ ಆಸೀಸ್‌ ಎದುರು ಟೀಂ ಇಂಡಿಯಾ ಅಂತಹದ್ದೇ ಸಾಧನೆ ಮಾಡಿದೆ.

Latest Videos
Follow Us:
Download App:
  • android
  • ios