2026ರ ಐಪಿಎಲ್ ಟೂರ್ನಿ ನಿರ್ಣಾಯಕ ಹಂತ ತಲುಪಿದ್ದು, ಪ್ಲೇ ಆಫ್ ರೇಸ್ ತೀವ್ರಗೊಂಡಿದೆ. ಈ ನಡುವೆ, ಗೂಗಲ್ ಜೆಮಿನಿ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಈ ಬಾರಿಯ ಚಾಂಪಿಯನ್ ಯಾರೆಂದು ಭವಿಷ್ಯ ನುಡಿದಿದೆ. ಅದರ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸತತ ಎರಡನೇ ಬಾರಿಗೆ ಕಪ್ ಗೆದ್ದು ಹೊಸ ಇತಿಹಾಸ ನಿರ್ಮಿಸುವ ಸಾಧ್ಯತೆಯಿದೆ.
ಬೆಂಗಳೂರು: 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಇದೀಗ ನಿರ್ಣಾಯಕ ಘಟ್ಟದತ್ತ ಸಾಗುತ್ತಿದೆ. ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಪ್ಲೇ ಆಫ್ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ಇನ್ನೊಂದು ಸ್ಥಾನ ಬಾಕಿ ಉಳಿದಿದೆ. ನಾಲ್ಕನೇ ಸ್ಥಾನಕ್ಕಾಗಿ ರಾಜಸ್ಥಾನ ರಾಯಲ್ಸ್, ಕೋಲ್ಕತಾ ನೈಟ್ ರೈಡರ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಹೀಗಿರುವಾಗಲೇ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಯಾವ ತಂಡ ಕಪ್ ಗೆಲ್ಲಬಹುದು ಎನ್ನುವ ಕುರಿತಾದ ಚರ್ಚೆ ಕ್ರಿಕೆಟ್ ವಲಯದಲ್ಲಿ ಜೋರಾಗಿ ನಡೆಯುತ್ತಿದೆ.

ಈ ಬಾರಿ ಯಾವ ತಂಡ ಐಪಿಎಲ್ ಟ್ರೋಫಿ ಜಯಿಸಬಹುದು ಎನ್ನುವುದರ ಕುರಿತಂತೆ ಹಲವು ಕ್ರಿಕೆಟ್ ಪಂಡಿತರು ಹಲವು ಅಚ್ಚರಿಯ ಭವಿಷ್ಯಗಳನ್ನು ನುಡಿದಿದ್ದಾರೆ. ಹೀಗಿರುವಾಗಲೇ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ತನ್ನದೇ ಆದ ಕಾರಣಗಳನ್ನು ಇಟ್ಟುಕೊಂಡು ಅಚ್ಚರಿಯ ಭವಿಷ್ಯ ನುಡಿದಿದೆ. ಹೀಗಾದಲ್ಲಿ ಹೊಸ ಇತಿಹಾಸವೇ ನಿರ್ಮಾಣವಾಗಲಿದೆ.
2026ರ ಐಪಿಎಲ್ ಚಾಂಪಿಯನ್ ಪಟ್ಟ ಯಾರ ಪಾಲು?
ಸದ್ಯದ ಪ್ರದರ್ಶನವನ್ನು ಗಮನಿಸಿದರೆ, ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಹೀಗೆ ಮೂರು ತಂಡಗಳು ಈ ಬಾರಿ ಐಪಿಎಲ್ ಟ್ರೋಫಿ ಗೆಲ್ಲಬಲ್ಲ ನೆಚ್ಚಿನ ತಂಡಗಳಾಗಿ ಗುರುತಿಸಿಕೊಂಡಿವೆ. ಈ ಸೀಸನ್ ಐಪಿಎಲ್ ಟೂರ್ನಿಯಲ್ಲಿ ಈ ಮೂರೂ ತಂಡಗಳು ಲೀಗ್ ಹಂತ ಮುಕ್ತಾಯದ ವೇಳೆಗೆ ತಲಾ ಒಂಬತ್ತು ಪಂದ್ಯಗಳಲ್ಲಿ ಗೆದ್ದು ಬೀಗಿವೆ. ಆದರೆ ನೆಟ್ ರನ್‌ರೇಟ್ ಆಧಾರದಲ್ಲಿ ಆರ್‌ಸಿಬಿ ಮೊದಲ ಸ್ಥಾನದಲ್ಲಿದ್ದರೇ, ಗುಜರಾತ್ ಟೈಟಾನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿವೆ. ಇನ್ನು ಈ ಮೂರೂ ತಂಡಗಳು ಐಪಿಎಲ್ ಟೂರ್ನಿಯಲ್ಲಿ ತಲಾ ಒಮ್ಮೆ ಐಪಿಎಲ್ ಟ್ರೋಫಿ ಜಯಿಸಿದ್ದು, ಎರಡನೇ ಐಪಿಎಲ್ ಕಪ್ ಮೇಲೆ ಕಣ್ಣಿಟ್ಟಿವೆ. ಇನ್ನು ಈ ಬಾರಿ ಯಾವ ತಂಡ ಐಪಿಎಲ್ ಟ್ರೋಫಿ ಜಯಿಸಬಹುದು ಎನ್ನುವ ಪ್ರಶ್ನೆಗೆ Google Gemini ಅಚ್ಚರಿಯ ಭವಿಷ್ಯ ನುಡಿದಿದೆ.
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಎಲ್ಲಾ ತಂಡಗಳ ಪ್ರದರ್ಶನವನ್ನು ವಿಶ್ಲೇಷಣೆ ಮಾಡಿರುವ Google Gemini, ಈ ಬಾರಿಯ ಐಪಿಎಲ್ ಫೈನಲ್‌ನಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಫೈನಲ್‌ನಲ್ಲಿ ಪ್ರಶಸ್ತಿಗಾಗಿ ಕಾದಾಡಲಿವೆ ಎಂದು ಭವಿಷ್ಯ ನುಡಿದಿದೆ. ಇನ್ನು ಈ ಎರಡು ತಂಡಗಳ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಹೆಚ್ಚು ಸಮತೋಲನದಿಂದ ಕೂಡಿದ್ದು, ಸತತ ಎರಡನೇ ಬಾರಿ ಕಪ್ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದು ಭವಿಷ್ಯ ನುಡಿದಿದೆ.
ಹೊಸ ಇತಿಹಾಸ ನಿರ್ಮಾಣ?
Google Gemini ಹೇಳಿದಂತೆ ಒಂದು ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿಯೂ ಐಪಿಎಲ್ ಟೂರ್ನಿಯಲ್ಲಿ ಕಪ್ ಗೆದ್ದರೇ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಯಾಕೆಂದರೆ ಇದುವರೆಗೂ ಐಪಿಎಲ್‌ನಲ್ಲಿ ಯಾವ ತಂಡವು ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದಿಲ್ಲ. ಹೀಗಾಗಿ ಹಾಲಿ ಚಾಂಪಿಯನ್ ಆರ್‌ಸಿಬಿ ಈ ಸಲ ಕಪ್ ಗೆದ್ದರೇ ಹೊಸ ಮೈಲಿಗಲ್ಲು ನಿರ್ಮಾಣವಾಗಲಿದೆ.


