ICC T20 World Cup: ಭಾರತ ಕ್ರಿಕೆಟ್ ತಂಡದ ಆಯ್ಕೆಗೆ ಕ್ಷಣಗಣನೆ..! ಯಾರಿಗೆ ಸಿಗುತ್ತೆ ಸ್ಥಾನ?

ಬಿಸಿಸಿಐ ಪ್ರಧಾನ ಆಯ್ಕೆಗಾರ ಅಜಿತ್ ಅಗರ್ಕರ್ ಸದ್ಯ ರಜೆ ಮೇಲೆ ಸ್ಪೇನ್‌ಗೆ ತೆರಳಿದ್ದು, ಅವರು ಒಂದೆರಡು ದಿನಗಳಲ್ಲಿ ಭಾರತಕ್ಕೆ ವಾಪಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 15 ಸದಸ್ಯರ ತಂಡ ಪ್ರಕಟಿಸಲು ಮೇ 1 ಕೊನೆಯ ದಿನವಾಗಿದೆ. ಜೂ.1ರಿಂದ 29ರ ವರೆಗೂ ವೆಸ್ಟ್‌ಇಂಡೀಸ್, ಅಮೆರಿಕದಲ್ಲಿ ಟಿ20 ವಿಶ್ವಕಪ್ ನಡೆಯಲಿದೆ.

Ajit Agarkar to announce India T20 World Cup squad after meeting Rohit Sharma post Delhi Capitals vs Mumbai Indians match in Delhi Says report kvn

ನವದೆಹಲಿ: ಮುಂಬರುವ ಐಸಿಸಿ ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಆಯ್ಕೆ ಮಾಡಲು ಬಿಸಿಸಿಐ ಆಯ್ಕೆ ಸಮಿತಿಯು ಏ.27 ಅಥವಾ 28ರಂದು ಇಲ್ಲಿ ಸಭೆ ನಡೆಸಲಿದೆ ಎಂದು ತಿಳಿದುಬಂದಿದೆ. ಏ.27ರಂದು ದೆಹಲಿಯಲ್ಲಿ ಮುಂಬೈ ಇಂಡಿಯನ್ಸ್‌ಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂದ್ಯ ಇದ್ದು, ಈ ಪಂದ್ಯಕ್ಕೂ ಮುನ್ನ ಅಥವಾ ಪಂದ್ಯದ ಮುಗಿದ ಬಳಿಕ ಸಭೆ ನಡೆಯಲಿದೆ.

ಬಿಸಿಸಿಐ ಪ್ರಧಾನ ಆಯ್ಕೆಗಾರ ಅಜಿತ್ ಅಗರ್ಕರ್ ಸದ್ಯ ರಜೆ ಮೇಲೆ ಸ್ಪೇನ್‌ಗೆ ತೆರಳಿದ್ದು, ಅವರು ಒಂದೆರಡು ದಿನಗಳಲ್ಲಿ ಭಾರತಕ್ಕೆ ವಾಪಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 15 ಸದಸ್ಯರ ತಂಡ ಪ್ರಕಟಿಸಲು ಮೇ 1 ಕೊನೆಯ ದಿನವಾಗಿದೆ. ಜೂ.1ರಿಂದ 29ರ ವರೆಗೂ ವೆಸ್ಟ್‌ಇಂಡೀಸ್, ಅಮೆರಿಕದಲ್ಲಿ ಟಿ20 ವಿಶ್ವಕಪ್ ನಡೆಯಲಿದೆ.

IPL 2024 ಗುಜರಾತ್ ಟೈಟಾನ್ಸ್ ಎದುರು ಗೆಲ್ಲುತ್ತಾ ಪಂಜಾಬ್‌ ಕಿಂಗ್ಸ್..?

ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ, ರಿಷಭ್‌ ಪಂತ್, ಸೂರ್ಯಕುಮಾರ್‌ ಯಾದವ್, ಅರ್ಶ್‌ದೀಪ್‌ ಸಿಂಗ್, ಮೊಹಮ್ಮದ್ ಸಿರಾಜ್‌, ಕುಲ್ದೀಪ್‌ ಯಾದವ್ ಹಾಗೂ ಹಾರ್ದಿಕ್‌ ಪಾಂಡ್ಯ ಆಯ್ಕೆಯಾಗುವುದು ಬಹುತೇಕ ಖಚಿತ. ಇನ್ನು, ಆರಂಭಿಕ ಸ್ಥಾನಕ್ಕೆ ಶುಭ್‌ಮನ್ ಗಿಲ್‌ ಹಾಗೂ ಯಶಸ್ವಿ ಜೈಸ್ವಾಲ್‌, ಫಿನಿಶರ್‌ ಸ್ಥಾನಕ್ಕೆ ರಿಂಕು ಸಿಂಗ್‌-ಶಿವಂ ದುಬೆ ನಡುವೆ ಪೈಪೋಟಿ ಇದೆ ಎನ್ನಲಾಗುತ್ತಿದೆ

ಒಂದು ದಶಕದಿಂದ ಗೆದ್ದಿಲ್ಲ ಐಸಿಸಿ ಟ್ರೋಫಿ:

ಭಾರತ ಕ್ರಿಕೆಟ್‌ ತಂಡವು 2013ರಲ್ಲಿ ಕೊನೆಯ ಬಾರಿಗೆ ಐಸಿಸಿ ಟ್ರೋಫಿಯನ್ನು ಜಯಿಸಿತ್ತು. ಇದಾಗಿ ಒಂದು ದಶಕದಲ್ಲಿ ಟೀಂ ಇಂಡಿಯಾ ಯಾವುದೇ ಐಸಿಸಿ ಟ್ರೋಫಿ ಗೆಲ್ಲಲು ಸಫಲವಾಗಿಲ್ಲ. 2013ರಲ್ಲಿ ಇಂಗ್ಲೆಂಡ್‌ನಲ್ಲಿಯೇ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಂ ಇಂಡಿಯಾ, ಆತಿಥೇಯ ಇಂಗ್ಲೆಂಡ್ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

IPL ನಿಯಮದ ವಿರುದ್ಧವೇ ತಿರುಗಿ ಬಿದ್ದ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ..!

ಇದಾದ ಬಳಿಕ 2014ರ ಟಿ20 ವಿಶ್ವಕಪ್, 2015ರ ಏಕದಿನ ವಿಶ್ವಕಪ್, 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿ, 2019ರ ಏಕದಿನ ವಿಶ್ವಕಪ್, 2021ರ ಟಿ20 ವಿಶ್ವಕಪ್, 2023ರಲ್ಲಿ ತವರಿನಲ್ಲೇ ನಡೆದ ಐಸಿಸಿ ಏಕದಿನ ವಿಶ್ವಕಪ್ ಸೇರಿದಂತೆ ಐಸಿಸಿ ಹಲವು ಟೂರ್ನಿಗಳಲ್ಲಿ ಪಾಲ್ಗೊಂಡರೂ ಸಹಾ ಟೀಂ ಇಂಡಿಯಾ ನಾಕೌಟ್ ಹಂತದಲ್ಲಿ ಮುಗ್ಗರಿಸುವ ಮೂಲಕ ನಿರಾಸೆ ಅನುಭವಿಸಿದೆ

ಐಪಿಎಲ್‌: ಇಂಪ್ಯಾಕ್ಟ್‌ ಆಟಗಾರ ನಿಯಮ ರದ್ದು?

ನವದೆಹಲಿ: ಭಾರತ ತಂಡದ ನಾಯಕ ರೋಹಿತ್‌ ಶರ್ಮಾರಿಂದಲೇ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಐಪಿಎಲ್‌ನಲ್ಲಿ ಇಂಪ್ಯಾಕ್ಟ್‌ ಆಟಗಾರ ನಿಯಮವನ್ನು ಕೈಬಿಡುವ ಬಗ್ಗೆ ಬಿಸಿಸಿಐ ಚಿಂತನೆ ನಡೆಸುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ರೋಹಿತ್‌, ಇಂಪ್ಯಾಕ್ಟ್‌ ಆಟಗಾರ ನಿಯಮದಿಂದ ಭಾರತೀಯ ಕ್ರಿಕೆಟ್‌ಗೆ ನಷ್ಟವಾಗುತ್ತಿದೆ. ಇದರಿಂದ ಆಲ್ರೌಂಡರ್‌ಗಳ ಮಹತ್ವವೇ ಕಡಿಮೆಯಾಗಿದೆ ಎಂದಿದ್ದರು.
 

Latest Videos
Follow Us:
Download App:
  • android
  • ios