Asianet Suvarna News Asianet Suvarna News

ಪಂದ್ಯದ ಮಧ್ಯದಲ್ಲೇ ಮೈದಾನ ತೊರೆದ ಪಾಂಡ್ಯ..! ಹಾರ್ದಿಕ್‌ ಗಾಯದ ಬಗ್ಗೆ ಮಹತ್ವದ ಅಪ್‌ಡೇಟ್ ಕೊಟ್ಟ BCCI

ರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಇನಿಂಗ್ಸ್‌ನ 9ನೇ ಓವರ್ ಬೌಲಿಂಗ್ ಮಾಡಲಿಳಿದರು. ಮೂರನೇ ಎಸೆತ ಹಾಕುತ್ತಿದ್ದಂತೆಯೇ ಪಾದ ಟ್ವಿಸ್ಟ್ ಆದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಮೈದಾನ ತೊರೆಯಬೇಕಾಯಿತು. ಹೀಗಾಗಿ ಉಳಿದ ಮೂರು ಎಸೆತಗಳನ್ನು ವಿರಾಟ್ ಕೊಹ್ಲಿ ಬೌಲಿಂಗ್ ಮಾಡುವ ಮೂಲಕ 9ನೇ ಓವರ್ ಪೂರೈಸಿದರು.

All rounder Hardik Pandya Suffers Injury During Cricket World Cup 2023 Game BCCI Provides Massive Update kvn
Author
First Published Oct 19, 2023, 6:35 PM IST

ಪುಣೆ(ಅ.19): ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ತೋರುವ ಮೂಲಕ ತವರಿನ ಅಭಿಮಾನಿಗಳನ್ನು ರಂಜಿಸುತ್ತಿದೆ. ಹೀಗಿರುವಾಗಲೇ ಟೀಂ ಇಂಡಿಯಾ ಪಾಳಯದಲ್ಲಿ ಬಿಗ್ ಶಾಕ್ ಎದುರಾಗಿದ್ದು, ತಂಡದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಬಾಂಗ್ಲಾದೇಶ ಎದುರಿನ ಪಂದ್ಯದಲ್ಲಿ ಬೌಲಿಂಗ್ ಮಾಡುವ ವೇಳೆ ಗಾಯಗೊಂಡು ಅರ್ಧಕ್ಕೆ ಮೈದಾನ ತೊರೆದರು. ಇದು ಟೀಂ ಇಂಡಿಯಾ ಪಾಳಯದಲ್ಲಿ ಕೊಂಚ ಆತಂಕ ಮನೆ ಮಾಡುವಂತೆ ಆಗಿತ್ತು. ಇದೀಗ ಹಾರ್ದಿಕ್ ಪಾಂಡ್ಯ ಗಾಯದ ಕುರಿತಂತೆ ಬಿಸಿಸಿಐ ಮಹತ್ವದ ಅಪ್‌ಡೇಟ್‌ ನೀಡಿದ್ದಾರೆ. 

ಹೌದು, ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಇನಿಂಗ್ಸ್‌ನ 9ನೇ ಓವರ್ ಬೌಲಿಂಗ್ ಮಾಡಲಿಳಿದರು. ಮೂರನೇ ಎಸೆತ ಹಾಕುತ್ತಿದ್ದಂತೆಯೇ ಪಾದ ಟ್ವಿಸ್ಟ್ ಆದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಮೈದಾನ ತೊರೆಯಬೇಕಾಯಿತು. ಹೀಗಾಗಿ ಉಳಿದ ಮೂರು ಎಸೆತಗಳನ್ನು ವಿರಾಟ್ ಕೊಹ್ಲಿ ಬೌಲಿಂಗ್ ಮಾಡುವ ಮೂಲಕ 9ನೇ ಓವರ್ ಪೂರೈಸಿದರು. ಇದೀಗ ಈ ಕುರಿತಂತೆ ಮಹತ್ವದ ಅಪ್‌ಡೇಟ್ ನೀಡಿರುವ ಬಿಸಿಸಿಐ, "ಸದ್ಯದ ಮಟ್ಟಿಗೆ ಹಾರ್ದಿಕ್ ಪಾಂಡ್ಯ ಅವರ ಗಾಯವನ್ನು ಪರೀಕ್ಷಿಸಲಾಗುತ್ತಿದೆ, ಈಗ ಅವರು ಸ್ಕ್ಯಾನಿಂಗ್‌ಗೆ ಒಳಗಾಗಿದ್ದಾರೆ" ಎಂದು ಟ್ವೀಟ್ ಮಾಡಿ ಖಚಿತಪಡಿಸಿದೆ. ಆದರೆ ಹಾರ್ದಿಕ್ ಪಾಂಡ್ಯ ಅಗತ್ಯಬಿದ್ದರೆ, ಬ್ಯಾಟಿಂಗ್ ಮಾಡಲಿಳಿಯುತ್ತಾರೆಯೇ ಅಥವಾ ಇಲ್ಲವೇ ಎನ್ನುವುದು ಇನ್ನೂ ಖಚಿತವಾಗಿಲ್ಲ. 

ICC World Cup 2023 ಆರಂಭಿಕರ ಭರ್ಜರಿ ಬ್ಯಾಟಿಂಗ್, ಟೀಂ ಇಂಡಿಯಾಗೆ ಸ್ಪರ್ಧಾತ್ಮಕ ಗುರಿ ನೀಡಿದ ಬಾಂಗ್ಲಾದೇಶ..!

ಇನ್ನು ಪಂದ್ಯದ ಬಗ್ಗೆ ಹೇಳುವುದಾದರೇ, ಟಾಸ್ ಗೆದ್ದ ಬಾಂಗ್ಲಾದೇಶ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂಟೋ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಆರಂಭಿಕ ಬ್ಯಾಟರ್‌ಗಳಾದ ತಾನ್ಜಿದ್ ಹಸನ್(51), ಲಿಟನ್ ದಾಸ್(66) ಬಾರಿಸಿದ ಆಕರ್ಷಕ ಅರ್ಧಶತಕ ಹಾಗೂ ಕೊನೆಯಲ್ಲಿ ಮೊಹಮದುಲ್ಲಾ ಬಾರಿಸಿದ ಸ್ಪೋಟಕ 46 ರನ್‌ಗಳ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 256 ರನ್ ಬಾರಿಸಿದ್ದು, ಭಾರತಕ್ಕೆ ಸವಾಲಿನ ಗುರಿ ನೀಡಿದೆ.

ಪ್ರಸಕ್ತ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಭರ್ಜರಿ ಲಯದಲ್ಲಿದ್ದು, ಆಡಿದ ಮೊದಲ 3 ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿದೆ. ಪ್ರಶಸ್ತಿ ಗೆಲ್ಲಬಲ್ಲ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿರುವ ಟೀಂ ಇಂಡಿಯಾ, ಬಾಂಗ್ಲಾದೇಶದ ಸವಾಲನ್ನು ಮೆಟ್ಟಿನಿಲ್ಲಲಿದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.

Follow Us:
Download App:
  • android
  • ios