ಇಂಡಿಯಾ ಲಾಕ್‌ಡೌನ್ ಬಿಡುವಿನ ಸಮಯವನ್ನು ಸಿಕ್ಕಾಪಟ್ಟೆ ಎಂಜಾಯ್ ಮಾಡುತ್ತಿರುವ ವಿರುಷ್ಕಾ ಜೋಡಿಯ ಒಂದು ವಿಡಿಯಾ ಸಿಕ್ಕಾಪಟ್ಟೆ ವೈರಲ್ ಆಗಿದೆ. ಗಂಡ ವಿರಾಟ್‌ಗೆ ಪತ್ನಿ ಅನುಷ್ಕಾ ಬೌಂಡರಿ ಚಚ್ಚು ಎಂದು ರೇಗಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

ನವದೆಹಲಿ(ಏ.18): ಪತಿ, ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿಗೆ ಬೌಂಡರಿ ಬಾರಿಸುವಂತೆ ಪತ್ನಿ ಅನುಷ್ಕಾ ಶರ್ಮಾ ಕೂಗಿ ಹೇಳುತ್ತಿರುವ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದೆ. 

ಅನುಷ್ಕಾ ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಹಾಕಿದ್ದು, ‘ಕ್ರಿಕೆಟ್‌ ಆಟ, ಅಭಿಮಾನಿಗಳನ್ನು ಮಿಸ್‌ ಮಾಡಿಕೊಳ್ಳುತ್ತಿದ್ದಾರೆ. ಅವರಿಗೆ ಖುಷಿಯಾಗಲಿ ಎಂದು ಈ ವಿಡಿಯೋ’ ಎಂದು ಶೀರ್ಷಿಕೆ ಬರೆದಿದ್ದಾರೆ.

View post on Instagram

ಕೊರೋನಾ ವೈರಸ್ ಹರಡುವ ಭೀತಿಯಿಂದಾಗಿ ಈಗಾಗಲೇ ದೇಶಾದ್ಯಂತ ಎರಡನೇ ಹಂತದಲ್ಲಿ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಹೀಗಾಗಿ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ಜೋಡಿ ಮನೆಯಲ್ಲೇ ಸಮಯವನ್ನು ಕಳೆಯುತ್ತಿದ್ದಾರೆ. ವಿರುಷ್ಕಾ ಜೋಡಿ ತಮ್ಮ ಅಭಿಮಾನಿಗಳಿಗೆ ಲಾಕ್‌ಡೌನ್ ಸಮಯದಲ್ಲಿ ಮನೆಯಲ್ಲೇ ಇರಿ ಎಂದು ಹಲವಾರು ಬಾರಿ ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಕೊರೋನಾ ಫೈಟ್: ಪೊಲೀಸರ ನಿಸ್ವಾರ್ಥ ಸೇವೆಗೆ ಸಲಾಂ ಎಂದ ಕ್ಯಾಪ್ಟನ್ ವಿರಾಟ್ ಕೊಹ್ಲಿ

ಕೋವಿಡ್ 19 ಸೋಂಕಿನಿಂದಾಗಿ ಜಗತ್ತಿನಾದ್ಯಂತ ಕ್ರೀಡಾಚಟುವಟಿಕೆಗಳು ಅಕ್ಷರಶಃ ಸ್ತಬ್ಧವಾಗಿವೆ. ಇದಕ್ಕೆ ಕ್ರಿಕೆಟ್ ಕೂಡಾ ಹೊರತಾಗಿಲ್ಲ. ದೇಸಿ, ಅಂತಾರಾಷ್ಟ್ರೀಯ ಹಾಗೂ ಲೀಗ್ ಕ್ರಿಕೆಟ್ ಟೂರ್ನಿಗಳು ರದ್ದಾಗಿವೆ, ಇನ್ನು ಕೆಲವು ಮುಂದೂಡಲ್ಪಟ್ಟಿವೆ. ಸದಾ ಕ್ರಿಕೆಟ್ ಟೂರ್ನಿಗಳಲ್ಲಿ ಬ್ಯುಸಿಯಾಗಿರುತ್ತಿದ್ದ ಟೀಂ ಇಂಡಿಯಾ ಕ್ರಿಕೆಟಿಗರು ಇದೀಗ ಕೊರೋನಾದಿಂದಾಗಿ ಮನೆಯಲ್ಲೇ ಸಾಕಷ್ಟು ಸಮಯ ಕಳೆಯುವ ಅವಕಾಶ ಒದಗಿಸಿದೆ. 

"

ಗುರುವಾರ(ಏ.16) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದೆ. ಹೀಗಾಗಿ ಕ್ರಿಕೆಟಿಗರು ಮನೆಯಲ್ಲೇ ಬಿಡುವಿನ ಸಮಯವನ್ನು ಎಂಜಾಯ್ ಮಾಡುತ್ತಿದ್ದಾರೆ.