Asianet Suvarna News Asianet Suvarna News

ವಿಶ್ವಕಪ್ ಸೋಲಿನ ಬೆನ್ನಲ್ಲೇ ಕೊಹ್ಲಿಯನ್ನು ಬಿಗಿದಪ್ಪಿ ಸಂತೈಸಿದ ಅನುಷ್ಕಾ ಶರ್ಮಾ..! ಇಲ್ಲಿದೆ ಭಾವನಾತ್ಮಕ ಕ್ಷಣ

2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಮೋಘ ಪ್ರದರ್ಶನದೊಂದಿಗೆ 11 ಪಂದ್ಯಗಳನ್ನಾಡಿ 3 ಶತಕ ಹಾಗೂ 6 ಅರ್ಧಶತಕ ಸಹಿತ 765 ರನ್ ಬಾರಿಸಿದರೂ ವಿರಾಟ್ ಕೊಹ್ಲಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಲು ವಿಫಲವಾದರು.

Anushka Sharma Hugs Heartbroken Virat Kohli After World Cup Final Defeat Picture Goes Viral kvn
Author
First Published Nov 20, 2023, 10:03 AM IST

ಅಹಮದಾಬಾದ್‌(ನ.20): ತವರಿನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್ ಗೆಲ್ಲುವ ಭಾರತದ ಕನಸು ನುಚ್ಚುನೂರಾಗಿದೆ. ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತ ಎದುರು ಪ್ಯಾಟ್ ಕಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ತಂಡವು 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ದಾಖಲೆಯ 6ನೇ ಬಾರಿಗೆ ಏಕದಿನ ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. 

2023ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯುದ್ದಕ್ಕೂ ಅಜೇಯವಾಗಿಯೇ ಫೈನಲ್ ಪ್ರವೇಶಿಸಿದ್ದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡವಾಗಿಯೇ ಗುರುತಿಸಿಕೊಂಡಿತ್ತು. ಆದರೆ ಫೈನಲ್‌ನಲ್ಲಿ ಭಾರತದ ಎದುರು ಆಸ್ಟ್ರೇಲಿಯಾ ಎಲ್ಲಾ ವಿಭಾಗದಲ್ಲೂ ಅದ್ಭುತ ಪ್ರದರ್ಶನ ತೋರುವ ಮೂಲಕ ಚಾಂಪಿಯನ್ ಪಟ್ಟ ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು.

ಇನ್ನು 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಮೋಘ ಪ್ರದರ್ಶನದೊಂದಿಗೆ 11 ಪಂದ್ಯಗಳನ್ನಾಡಿ 3 ಶತಕ ಹಾಗೂ 6 ಅರ್ಧಶತಕ ಸಹಿತ 765 ರನ್ ಬಾರಿಸಿದರೂ ವಿರಾಟ್ ಕೊಹ್ಲಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಲು ವಿಫಲವಾದರು. ಫೈನಲ್‌ನಲ್ಲಿ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ ಬಾರಿಸಿದ ಶತಕ, ಭಾರತದ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿತು. ಇನ್ನು ಭಾರತ ಫೈನಲ್‌ನಲ್ಲಿ ಸೋಲುತ್ತಿದ್ದಂತೆಯೇ ಟೀಂ ಇಂಡಿಯಾ ಆಟಗಾರರು ಮೈದಾನದಲ್ಲೇ ಕಣ್ಣೀರಿಟ್ಟರು. ಈ ಸಂದರ್ಭದಲ್ಲಿ ಸರಣಿಶ್ರೇಷ್ಠ ಪ್ರಶಸ್ತಿ ಗೆದ್ದರೂ, ಕಪ್ ಗೆಲ್ಲದೇ ನಿರಾಶರಾಗಿದ್ದ ಪತಿ ವಿರಾಟ್ ಕೊಹ್ಲಿಯನ್ನು ಪತ್ನಿ ಬಿಗಿದಪ್ಪಿ ಸಂತೈಸುವ ಮೂಲಕ  ಗಮನ ಸೆಳೆದಿದ್ದಾರೆ.

ಒಂದು ದಶಕದಿಂದಲೂ ಭಾರತಕ್ಕೆ ನಿರಂತರ ಹಾರ್ಟ್‌ ಬ್ರೇಕ್‌! ಸೇಡಿಗೆ ಚಾನ್ಸ್‌ ಕೊಡದ ಆಸೀಸ್‌!

ಈ ಕ್ಷಣ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ. ಇನ್ನು ರಚಿನ್ ರವೀಂದ್ರ ಈ ಕುರಿತಂತೆ ಟ್ವೀಟ್ ಮಾಡಿದ್ದು, ಪ್ರತಿಯೊಬ್ಬ ಅಥ್ಲೀಟ್‌ ಕಷ್ಟದ ಸಮಯದಲ್ಲಿ ಇಂತಹ ಸಪೋರ್ಟ್ ಸಿಸ್ಟಂ ಅಗತ್ಯವಿದೆ ಎಂದು ಟ್ವೀಟ್ ಮಾಡಿದ್ದಾರೆ.

ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಟೀಂ ಇಂಡಿಯಾ, ವಿರಾಟ್ ಕೊಹ್ಲಿ(54), ಕೆ ಎಲ್ ರಾಹುಲ್(66) ಬಾರಿಸಿದ ಅರ್ಧಶತಕ ಹಾಗೂ ನಾಯಕ ರೋಹಿತ್ ಶರ್ಮಾ(47) ಸಮಯೋಚಿತ ಬ್ಯಾಟಿಂಗ್ ಹೊರತಾಗಿಯೂ ಉಳಿದ ಬ್ಯಾಟರ್‌ಗಳ ವೈಪಲ್ಯದಿಂದಾಗಿ ಭಾರತ ಕೇವಲ 240 ರನ್‌ಗಳಿಗೆ ಸರ್ವಪತನ ಕಂಡಿತು.

ವಿಶ್ವಕಪ್ ಫೈನಲ್ ಸೋಲಿನ ನೋವಿಗೆ ಕಣ್ಣೀರಾದ ಟೀಂ ಇಂಡಿಯಾ, ತುಂಬಿ ಬಂತು ಫ್ಯಾನ್ಸ್ ಕಣ್ಣಾಲಿ!

ಇನ್ನು ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು ಒಂದು ಹಂತದಲ್ಲಿ 47 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಕೊಂಚ ಆತಂಕಕ್ಕೆ ಸಿಲುಕಿತ್ತು. ಆದರೆ ಟ್ರಾವಿಸ್ ಹೆಡ್(137) ಹಾಗೂ ಮಾರ್ನಸ್ ಲಬುಶೇನ್(58) ಶತಕದ ಜತೆಯಾಟವಾಡುವ ಮೂಲಕ ಆಸ್ಟ್ರೇಲಿಯಾ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದರು.

Follow Us:
Download App:
  • android
  • ios