34ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಕ್ರಿಕೆಟ್ ದಂತಕಥೆ ವಿರಾಟ್ ಕೊಹ್ಲಿಟಿ20 ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರುತ್ತಿರುವ ಮಾಜಿ ನಾಯಕಕೊಹ್ಲಿ ಬರ್ತ್‌ ಡೇ ಗೆ ಮುದ್ದಾಗಿ ಶುಭಕೋರಿದ ಮಡದಿ ಅನುಷ್ಕಾ ಶರ್ಮಾ

ಸಿಡ್ನಿ(ಅ.05): ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ನವೆಂಬರ್ 05, 2022ರಂದು ತಮ್ಮ 34ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದೀಗ ವಿರಾಟ್ ಕೊಹ್ಲಿ ತವರಿನಾಚೆಯಲ್ಲಿಯಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಸದ್ಯ ಕಿಂಗ್ ಕೊಹ್ಲಿ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನದ ಮೂಲಕ ಮಿಂಚುತ್ತಿದ್ದಾರೆ. ಇದೆಲ್ಲದರ ನಡುವೆ ಮಡದಿ ಅನುಷ್ಕಾ ಶರ್ಮಾ, ವಿರಾಟ್ ಕೊಹ್ಲಿಗೆ ವಿನೂತನವಾಗಿ ಹುಟ್ಟುಹಬ್ಬದ ಶುಭ ಕೋರಿದ್ದಾರೆ.

ವಿರಾಟ್ ಕೊಹ್ಲಿಯ ಅಪರೂಪದ ಫೋಟೋವನ್ನು ಹಂಚಿಕೊಳ್ಳುವುದರ ಜತೆಗೆ, ಇದು ನಿಮ್ಮ ಹುಟ್ಟುಹಬ್ಬ ಮೈ ಲವ್. ಹಾಗಾಗಿಯೇ ನಾನು ಈ ಅತ್ಯುತ್ತಮ ಫೋಟೋವನ್ನು ಪೋಸ್ಟ್ ಮಾಡಿದ್ದೇನೆ. ಎಲ್ಲಾ ರೀತಿಯಲ್ಲೂ, ಎಲ್ಲಾ ಸಂದರ್ಭದಲ್ಲೂ ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದು ಅನುಷ್ಕಾ ಶರ್ಮಾ ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

View post on Instagram

ಇನ್ನು ವಿರಾಟ್ ಕೊಹ್ಲಿ, ನಗುವಿನ ಎಮೋಜಿಯ ಜತೆಗೆ ಹಾರ್ಟ್‌ ಎಮೋಜಿ ಹಾಕಿ ಅನುಷ್ಕಾ ಶರ್ಮಾ ಅವರ ಪೋಸ್ಟ್‌ ಅನ್ನು ಮೆಚ್ಚಿಕೊಂಡಿದ್ದಾರೆ. ಇನ್ನು ಇದೇ ಪೋಸ್ಟ್‌ಗೆ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಹಾಗೂ ವಿರಾಟ್ ಕೊಹ್ಲಿ ಆಪ್ತ ಸ್ನೇಹಿತ ಎಬಿ ಡಿ ವಿಲಿಯರ್ಸ್‌ ಕೂಡಾ ಪ್ರತಿಕ್ರಿಯಿಸಿದ್ದು, "ಆ ಮುಖ" ಎಂದು ಕಮೆಂಟ್ ಮಾಡಿದ್ದಾರೆ.

Happy Birthday Virat Kohli: ಕಿಂಗ್ ಕೊಹ್ಲಿ ಹುಟ್ಟುಹಬ್ಬಕ್ಕೆ ಶುಭಾಶಯಗಳ ಸುರಿಮಳೆ..!

ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಪ್ರಸಕ್ತ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ 4 ಪಂದ್ಯಗಳಿಂದ 3 ಅರ್ಧಶತಕ ಸಹಿತ 220 ರನ್ ಬಾರಿಸುವ ಮೂಲಕ ಗರಿಷ್ಠ ರನ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಅದರಲ್ಲೂ ಅಕ್ಟೋಬರ್ 23ರಂದು ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಪಾಕಿಸ್ತಾನ ವಿರುದ್ದ ನಡೆದ ಪಂದ್ಯದಲ್ಲಿ ಅಜೇಯ 82 ರನ್ ಬಾರಿಸುವ ಮೂಲಕ ಟೀಂ ಇಂಡಿಯಾ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದರು. 

ವಿರಾಟ್ ಕೊಹ್ಲಿ ಸದ್ಯ, ಐಸಿಸಿ ಟಿ20 ವಿಶ್ವಕಪ್ ಇತಿಹಾಸದಲ್ಲಿ ಮಹೇಲಾ ಜಯವರ್ಧನೆ(1016) ಅವರನ್ನು ಹಿಂದಿಕ್ಕಿ ಇದೀಗ ಗರಿಷ್ಠ ರನ್ ಬಾರಿಸಿದ ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ. ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕೊಹ್ಲಿ ಸದ್ಯ 1,065 ರನ್ ಬಾರಿಸಿದ್ದಾರೆ. ಬಾಂಗ್ಲಾದೇಶ ವಿರುದ್ದದ ಸೂಪರ್ 12 ಹಂತದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದರು. ಇದೀಗ ವಿರಾಟ್ ಕೊಹ್ಲಿ, ನವೆಂಬರ್ 06ರಂದು ಜಿಂಬಾಬ್ವೆ ಎದುರು ಕಣಕ್ಕಿಳಿಯಲು ಸಜ್ಜಾಗಿದ್ದಾರೆ.