ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ: 2024ರ ಐಪಿಎಲ್‌ ಬಗ್ಗೆ ಮಹತ್ವದ ಅಪ್‌ಡೇಟ್‌ ಕೊಟ್ಟ ಅರುಣ್ ಧುಮಾಲ್‌..!

‘ಲೀಗ್‌ ಭಾರತದಲ್ಲೇ ನಡೆಯಲಿದೆ. ಈ ಬಗ್ಗೆ ಸರ್ಕಾರದ ಜೊತೆ ಮಾತುಕತೆ ನಡೆಸುತ್ತಿದ್ದೇವೆ. ಲೋಕಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಗೊಳ್ಳಲು ಕಾಯುತ್ತಿದ್ದೇವೆ. ಆ ಬಳಿಕ ಐಪಿಎಲ್‌ ವೇಳಾಪಟ್ಟಿ ಅಂತಿಮಗೊಳಿಸುತ್ತೇವೆ’ ಎಂದಿದ್ದಾರೆ ಐಪಿಎಲ್‌ ಮುಖ್ಯಸ್ಥ ಅರುಣ್‌ ಧುಮಾಲ್‌.

Arun Dhumal provides update on Indian cash rich tournament kvn

ನವದೆಹಲಿ(ಫೆ.15): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ 17ನೇ ಆವೃತ್ತಿಯ ಕೆಲ ಪಂದ್ಯಗಳ ವಿದೇಶದಲ್ಲಿ ನಡೆಯಲಿವೆ ಎಂಬ ಊಹಾಪೋಹಗಳಿಗೆ ಐಪಿಎಲ್‌ ಮುಖ್ಯಸ್ಥ ಅರುಣ್‌ ಧುಮಾಲ್‌ ತೆರೆ ಎಳೆದಿದ್ದಾರೆ. ಈ ಬಾರಿ ಐಪಿಎಲ್‌ ಭಾರತದಲ್ಲೇ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ‘ಲೀಗ್‌ ಭಾರತದಲ್ಲೇ ನಡೆಯಲಿದೆ. ಈ ಬಗ್ಗೆ ಸರ್ಕಾರದ ಜೊತೆ ಮಾತುಕತೆ ನಡೆಸುತ್ತಿದ್ದೇವೆ. ಲೋಕಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಗೊಳ್ಳಲು ಕಾಯುತ್ತಿದ್ದೇವೆ. ಆ ಬಳಿಕ ಐಪಿಎಲ್‌ ವೇಳಾಪಟ್ಟಿ ಅಂತಿಮಗೊಳಿಸುತ್ತೇವೆ’ ಎಂದಿದ್ದಾರೆ. ಮಾರ್ಚ್‌ ಕೊನೆ ವಾರದಲ್ಲಿ ಟೂರ್ನಿ ಆರಂಭಗೊಳ್ಳುವ ನಿರೀಕ್ಷೆಯಿದೆ. ಏಪ್ರಿಲ್‌ನಲ್ಲಿ ಚುನಾವಣೆ ನಡೆಯಬಹುದು. ಹೀಗಾಗಿ ಸರ್ಕಾರದ ಜೊತೆ ಸಂಪರ್ಕದಲ್ಲಿದ್ದೇವೆ’ ಎಂದಿದ್ದಾರೆ.

ರಾಜ್‌ಕೋಟ್ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ; ಮಹತ್ವದ ಬದಲಾವಣೆ

ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ ಯಾರು ನಾಯಕ?: ಗೊಂದಲಕ್ಕೆ ತೆರೆ ಎಳೆದ ಜಯ್‌ ಶಾ

ರಾಜ್‌ಕೋಟ್‌: ಟೀಂ ಇಂಡಿಯಾದ ಹಿರಿಯ ಆಟಗಾರರು ಜೂನ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಆಡುತ್ತಾರೋ, ಇಲ್ಲವೋ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಅದರಲ್ಲೂ ಭಾರತ ತಂಡ ನಾಯಕ ಯಾರು ಎಂಬ ಕುತೂಹಲ ಕೂಡಾ ಅಭಿಮಾನಿಗಳಲ್ಲಿ ಇತ್ತು. ಇದಕ್ಕೆ ಸ್ವತಃ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಉತ್ತರ ನೀಡಿದ್ದಾರೆ.

ವೆಸ್ಟ್‌ ಇಂಡೀಸ್‌ ಹಾಗೂ ಅಮೆರಿಕದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ನಲ್ಲಿ ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ತಿಳಿಸಿದ್ದಾರೆ. ಅಲ್ಲದೆ ಟಿ20 ವಿಶ್ವಕಪ್ ಗೆಲ್ಲುವಲ್ಲಿ ರೋಹಿತ್ ಶರ್ಮಾ ತಂಡ ಖಂಡಿತವಾಗಿಯೂ ಯಶಸ್ವಿಯಾಗಲಿದೆ ಎಂದು ಜಯ್ ಶಾ ಭರವಸೆ ವ್ಯಕ್ತಪಡಿಸಿದ್ದಾರೆ.

ರಾಜ್‌ಕೋಟ್‌ ಕ್ರೀಡಾಂಗಣಕ್ಕೆ ಮರು ನಾಮಕರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಏಕದಿನ ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದರೂ ಫೈನಲ್‌ನಲ್ಲಿ ಗೆಲ್ಲಲಾಗಲಿಲ್ಲ. ಸತತ 9 ಪಂದ್ಯ ಗೆದ್ದರೂ ವಿಶ್ವಕಪ್‌ ಸಿಗಲಿಲ್ಲ. ಆದರೆ ನಾವು ಎಲ್ಲರ ಪ್ರೀತಿ ಗಳಿಸಿದ್ದೇವೆ. ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಬಾರ್ಬಡೊಸ್(ಫೈನಲ್‌ ನಡೆಯುವ ಕ್ರೀಡಾಂಗಣ)ನಲ್ಲಿ ರೋಹಿತ್‌ ಶರ್ಮಾ ನಾಯಕತ್ವದಲ್ಲಿ ನಾವು ಭಾರತದ ತ್ರಿವರ್ಣ ಧ್ವಜ ಹಾರಿಸುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಿ20 ವಿಶ್ವಕಪ್‌ಗೆ ಭಾರತ ತಂಡದ ನಾಯಕ ಹಾರ್ದಿಕ್ ಅಲ್ಲ, ಕ್ಯಾಪ್ಟನ್ ಹೆಸರು ಬಹಿರಂಗಪಡಿಸಿದ ಜಯ್ ಶಾ!

ಕಳೆದ ಟಿ20 ವಿಶ್ವಕಪ್‌ ಸೋಲಿನ ಬಳಿಕ ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ಭಾರತ ತಂಡವನ್ನು ಟಿ20 ಕ್ರಿಕೆಟ್‌ನಲ್ಲಿ ಮುನ್ನಡೆಸುತ್ತಿದ್ದರು. ಇತ್ತೀಚೆಗಷ್ಟೇ ಅಂದರೆ ಜನವರಿಯಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ 14 ತಿಂಗಳ ನಂತರ ಟಿ20 ತಂಡಕ್ಕೆ ಮರಳಿ, ಅಫ್ಘಾನಿಸ್ತಾನ ವಿರುದ್ಧದ ಸರಣಿ ಆಡಿದ್ದರು. ಆ ಬಳಿಕ ಮುಂದಿನ ಟಿ20 ವಿಶ್ವಕಪ್‌ನಲ್ಲೂ ರೋಹಿತ್ ಶರ್ಮಾ ಭಾರತದ ನಾಯಕತ್ವ ವಹಿಸಿಕೊಳ್ಳುತ್ತಾರೆ ಎಂದು ಹೇಳಲಾಗುತ್ತಿತ್ತು.
 

Latest Videos
Follow Us:
Download App:
  • android
  • ios