ದೆಹಲಿ(ಅ.17): ದೆಹಲಿ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ಪತ್ರಕರ್ತ ರಜತ್ ಶರ್ಮಾ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇದೀಗ ಅವಿರೋಧವಾಗಿ ಕೇಂದ್ರದ ಮಾಜಿ ಹಣಕಾಸು ಸಚಿವ, ಕಳೆದ ವರ್ಷ ನಿಧನರಾದ ಅರುಣ್ ಜೇಟ್ಲಿ ಪುತ್ರ ರೋಹನ್ ಜೇಟ್ಲಿ ಆಯ್ಕೆಯಾಗಿದ್ದಾರೆ.

ದೆಹಲಿ ಕ್ರಿಕೆಟ್ ಸಂಸ್ಥೆಯಲ್ಲಿ ರಾಜಕೀಯ; ಅಧ್ಯಕ್ಷ ಸ್ಥಾನಕ್ಕೆ ರಜತ್ ಶರ್ಮಾ ರಾಜೀನಾಮೆ!..

ವೃತ್ತಿಯಲ್ಲಿ ವಕೀಲರಾಗಿರುವ ರೋಹನ್ ಜೇಟ್ಲಿ ಅಂತಿಮ ಕ್ಷಣದಲ್ಲಿ ದೆಹಲಿ ಕ್ರಿಕೆಟ್ ಸಂಸ್ಥೆ ಅಧ್ಯಕ್ಷೆ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ರೋಹನ್ ಜೇಟ್ಲಿ ಅಖಾಡಕ್ಕೆ ಇಳಿಯುತ್ತಿದ್ದಂತೆ ಇತರ ಎಲ್ಲಾ ಸದಸ್ಯರು ಬೆಂಬಲ ನೀಡಿದ್ದಾರೆ. ಹೀಗಾಗಿ ರೋಹನ್ ಜೇಟ್ಲಿ ಅವಿರೋಧವಾಗಿ ದೆಹಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ದೆಹಲಿ ಕ್ರಿಕೆಟ್‌ ಚುನಾವಣೆ ಸ್ಪರ್ಧಿಸಲು ಗಂಭೀರ್ ಅನರ್ಹ..!.

ಅರುಣ್ ಜೇಟ್ಲಿ 1999ರಿಂದ 2013ರ ವರೆಗೆ ದೆಹಲಿ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಇದೀಗ ಅರುಣ್ ಜೇಟ್ಲಿ ಪುತ್ರ ರೋಹನ್ ಜೇಟ್ಲಿ ರಾಷ್ಟ್ರ ರಾಜಧಾನಿ ಕ್ರಿಕೆಟ್ ಆಡಳಿತಕ್ಕೆ ಇಳಿದಿದ್ದಾರೆ.

ನವೆಂಬರ್ 5 ಮತ್ತು 6 ರಂದು ದೆಹಲಿ ಕ್ರಿಕೆಟ್ ಸಂಸ್ಥೆಯ ಖಜಾಂಚಿ, ಕಾರ್ಯದರ್ಶಿ ಸೇರಿದಂತೆ ಇತರ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.