Asia Cup 2022 ಬಾಬರ್ ಅಜಂ ಬಳಿಕ ಪಾಕ್ ಲೆಜೆಂಡ್ ಮೊಹಮ್ಮದ್ ಯೂಸುಫ್ ಮಾತಾಡಿಸಿದ ವಿರಾಟ್ ಕೊಹ್ಲಿ..!
* ಏಷ್ಯಾಕಪ್ ಟೂರ್ನಿಯು ಆಗಸ್ಟ್ 27ರಿಂದ ಆರಂಭ
* ಪಾಕ್ ಮಾಜಿ ನಾಯಕ ಮೊಹಮ್ಮದ್ ಯೂಸುಫ್ ಭೇಟಿಯಾದ ವಿರಾಟ್ ಕೊಹ್ಲಿ
* ಭಾರತ ಹಾಗೂ ಪಾಕಿಸ್ತಾನ ನಡುವಿನ ಕಾದಾಟಕ್ಕೆ ಸಾಕ್ಷಿಯಾಗಲಿದೆ ದುಬೈ ಅಂತಾರಾಷ್ಟ್ರೀಯ ಮೈದಾನ
ದುಬೈ(ಆ.25): ಟೀಂ ಇಂಡಿಯಾ ಏಷ್ಯಾಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಯುಎಇಗೆ ಬಂದಿಳಿದಿದೆ. ದುಬೈಗೆ ಬಂದಿಳಿಯುತ್ತಿದ್ದಂತೆಯೇ ಟೀಂ ಇಂಡಿಯಾ ಮೊದಲ ದಿನದ ಅಭ್ಯಾಸ ಸೆಷನ್ ಮುಗಿಸಿದ್ದು, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ ನಡೆಸಿದ್ದಾರೆ. ನೆಟ್ಸ್ ಪ್ರಾಕ್ಟೀಸ್‌ನಲ್ಲಿ ಟೀಂ ಇಂಡಿಯಾ ಬೌಲರ್‌ಗಳ ಎದುರು ವಿರಾಟ್ ಕೊಹ್ಲಿ ನಿರ್ಭಯವಾಗಿ ಬ್ಯಾಟ್ ಬೀಸುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಸುಸೂಫ್ ಅವರನ್ನು ಭೇಟಿಯಾಗಿದ್ದು, ಈ ವಿಡಿಯೋ ವೈರಲ್ ಆಗಿದೆ.
33 ವರ್ಷದ ವಿರಾಟ್ ಕೊಹ್ಲಿ, ರನ್ ಬರ ಅನುಭವಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯವಾದ ವೆಸ್ಟ್ ಇಂಡೀಸ್ ಹಾಗೂ ಜಿಂಬಾಬ್ವೆ ಎದುರಿನ ಸರಣಿಯಿಂದ ಹೊರಗುಳಿದು ವಿಶ್ರಾಂತಿ ಪಡೆದಿದ್ದರು. 14ನೇ ಆವೃತ್ತಿಯ ಐಪಿಎಲ್ ಮುಕ್ತಾಯದ ಬಳಿಕ ವಿರಾಟ್ ಕೊಹ್ಲಿ ಆಡಿದ 6 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 20+ರನ್ ಗಡಿ ದಾಟಲು ಸಾಧ್ಯವಾಗಿಲ್ಲ. ಆದರೆ ಏಷ್ಯಾಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳಲಿದ್ದಾರೆ ಎಂದು ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಏಷ್ಯಾಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಇದಕ್ಕೂ ಮುನ್ನ ನೆಟ್ಸ್ ಪ್ರಾಕ್ಟೀಸ್ ಮುಗಿಸಿ ವಾಪಾಸ್ಸಾಗುತ್ತಿದ್ದ ವೇಳೆ, ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಪಾಕಿಸ್ತಾನ ನಾಯಕ ಬಾಬರ್ ಅಜಂ ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ. ಇದಾದ ಬಳಿಕ ಪಾಕಿಸ್ತಾನ ಬ್ಯಾಟಿಂಗ್ ಕೋಚ್ ಮೊಹಮ್ಮದ್ ಯೂಸುಫ್ ಅವರನ್ನು ಭೇಟಿಯಾಗಿ ಚುಟುಕು ಮಾತುಕತೆ ನಡೆಸಿರುವ ವಿಡಿಯೋ ಸಾಮಾಜಿಕ ಕಾಲತಾಣಗಳಲ್ಲಿ ವೈರಲ್ ಆಗಿದೆ.
ಈ ವರ್ಷಾರಂಭದಲ್ಲೇ ಮೊಹಮ್ಮದ್ ಯೂಸುಫ್, ವಿರಾಟ್ ಕೊಹ್ಲಿ ಪರ ಬ್ಯಾಟ್ ಬೀಸಿದ್ದರು. ಇದಷ್ಟೇ ಅಲ್ಲದೇ ಎಲ್ಲಾ ಆಟಗಾರರು ಒಂದಲ್ಲ ಒಂದು ಹಂತದಲ್ಲಿ ಫಾರ್ಮ್ ಸಮಸ್ಯೆ ಎದುರಿಸುತ್ತಾರೆ ಎಂದಿದ್ದರು. ಪ್ರತಿಯೊಬ್ಬ ಆಟಗಾರರು ತಮ್ಮ ವೃತ್ತಿಜೀವನದಲ್ಲಿ ಫಾರ್ಮ್ ಸಮಸ್ಯೆಯನ್ನು ಎದುರಿಸುತ್ತಾರೆ. ಇದಕ್ಕೆ ವಿರಾಟ್ ಕೊಹ್ಲಿ ಕೂಡಾ ಹೊರತಲ್ಲ. ಅವರು ಕಳೆದ 10 ವರ್ಷಗಳ ಕ್ರಿಕೆಟ್ ಜಗತ್ತನ್ನು ಸಚಿನ್ ತೆಂಡುಲ್ಕರ್ ಅವರಂತೆ ಆಳಿದ್ದಾರೆ ಎಂದು ಮೊಹಮ್ಮದ್ ಯೂಸುಫ್ ಹೇಳಿದ್ದರು.
Asia Cup 2022 ಟೂರ್ನಿಗೂ ಮುನ್ನ ಬಾಬರ್ ಅಜಂ ಕೈ ಕುಲುಕಿದ ವಿರಾಟ್ ಕೊಹ್ಲಿ..! ವಿಡಿಯೋ ವೈರಲ್
70 ಅಂತಾರಾಷ್ಟ್ರೀಯ ಶತಕ ಸಿಡಿಸುವುದು ಸುಲಭದ ಮಾತಲ್ಲ, ನನ್ನ ಪ್ರಕಾರ ಕಳೆದ ಹತ್ತು ವರ್ಷದಲ್ಲಿ ವಿರಾಟ್ ಕೊಹ್ಲಿ ನಂ.1 ಕ್ರಿಕೆಟಿಗ ಎಂದು ಬಣ್ಣಿಸಿದ್ದರು.
ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತಂಡವು 'ಎ' ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಇದೇ ಗುಂಪಿನಲ್ಲಿ ಪಾಕಿಸ್ತಾನ ಹಾಗೂ ಹಾಂಕಾಂಗ್ ತಂಡಗಳು ಕೂಡಾ ಸ್ಥಾನ ಪಡೆದಿವೆ. ಆಗಸ್ಟ್ 27ರಂದು ನಡೆಯಲಿರುವ ಏಷ್ಯಾಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ತಂಡವು ಆಫ್ಘಾನಿಸ್ತಾನ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.