Asia Cup 2022 ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿ ಪ್ರಕಟ: ಭಾರತಕ್ಕೆ ಮೊದಲ ಪಂದ್ಯದಲ್ಲೇ ಪಾಕ್ ಎದುರಾಳಿ..!

* ಬಹುನಿರೀಕ್ಷಿತ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿ ಪ್ರಕಟ
* ಆಗಸ್ಟ್‌ 27ರಿಂದ ಯುಎಇನಲ್ಲಿ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಆರಂಭ
* ಆಗಸ್ಟ್‌ 27ರಿಂದ ಸೆಪ್ಟೆಂಬರ್ 11ರ ವರೆಗೆ ನಡೆಯಲಿರುವ ಟೂರ್ನಿಯಲ್ಲಿ 6 ತಂಡಗಳು ಭಾಗಿ

Asia Cup 2022 Cricket Tournament in the UAE to take place from August 27 kvn

ದುಬೈ(ಆ.02): 2022ನೇ ಸಾಲಿನ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯು ಇದೇ ಆಗಸ್ಟ್‌ 27ರಿಂದ ಸೆಪ್ಟೆಂಬರ್ 11ರ ವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್‌(ಯುಎಇ)ನಲ್ಲಿ ನಡೆಯಲಿದೆ. ಈ ಮೊದಲು ಈ ಬಾರಿಯ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯನ್ನು ಶ್ರೀಲಂಕಾದಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಶ್ರೀಲಂಕಾದಲ್ಲಿ ತಲೆದೂರಿದ್ದ ರಾಜಕೀಯ ಅರಾಜಕತೆ ಹಾಗೂ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯನ್ನು ದ್ವೀಪರಾಷ್ಟ್ರದಿಂದ ಯುಎಇಗೆ ಸ್ಥಳಾಂತರಿಸಲಾಗಿತ್ತು. 

ಸಾಂಪ್ರದಾಯಿಕ ಎದುರಾಳಿಗಳೆಂದೇ ಬಿಂಬಿಸಲ್ಪಟ್ಟಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳು ಟೂರ್ನಿ ಆರಂಭದ ಎರಡನೇ ದಿನ ಮುಖಾಮುಖಿಯಾಗಲಿವೆ. ಗ್ರೂಪ್‌ 'ಎ' ನಲ್ಲಿ ಸ್ಥಾನ ಪಡೆದಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಸೆಣಸಾಡಲಿವೆ. ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಕೊನೆಯ ಬಾರಿಗೆ 2021ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಭಾರತ ಎದುರು ಪಾಕಿಸ್ತಾನ ತಂಡವು 10 ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿತ್ತು. 

ಇನ್ನು ಈ ಬಾರಿಯ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ, ಪಾಕಿಸ್ತಾನದ ಜತೆಗೆ 'ಎ' ಗುಂಪಿನಲ್ಲಿ ಅರ್ಹತಾ ಸುತ್ತಿನಲ್ಲಿ ವಿಜೇತವಾದ ತಂಡವು ಸ್ಥಾನ ಪಡೆಯಲಿದೆ. ಇನ್ನು 'ಬಿ' ಗುಂಪಿನಲ್ಲಿ ಶ್ರೀಲಂಕಾ, ಆಪ್ಘಾನಿಸ್ತಾನ ಹಾಗೂ ಬಾಂಗ್ಲಾದೇಶ ತಂಡಗಳು ಸ್ಥಾನ ಪಡೆದಿವೆ. ಗ್ರೂಪ್ ಹಂತದ ಪಂದ್ಯಗಳು ಆಗಸ್ಟ್ 27ರಿಂದ ಸೆಪ್ಟೆಂಬರ್ 02ರವರೆಗೆ ನಡೆಯಲಿವೆ. ಇದಾದ ಬಳಿಕ ಸೂಪರ್ 4 ಹಂತದ ಪಂದ್ಯಗಳು ಸೆಪ್ಟೆಂಬರ್ 03ರಿಂದ ಸೆಪ್ಟೆಂಬರ್ 09ರವರೆಗೆ ನಡೆಯಲಿವೆ. ಇನ್ನು ಏಷ್ಯಾಕಪ್ ಫೈನಲ್ ಪಂದ್ಯವು ಸೆಪ್ಟಂಬರ್ 11ರಂದು ಜರುಗಲಿದೆ.

Ind vs WI: ಭುವಿ ಬದಲು ನಾಯಕ ರೋಹಿತ್ ಶರ್ಮಾ ಆವೇಶ್‌ ಖಾನ್‌ಗೆ ಕೊನೆಯ ಓವರ್‌ ನೀಡಿದ್ದೇಕೆ..?

ಭಾರತ ಕ್ರಿಕೆಟ್ ತಂಡವು ಈ ಹಿಂದೆ ಏಷ್ಯಾಕಪ್ ಟೂರ್ನಿಯ ಕಳೆದೆರಡು ಮುಖಾಮುಖಿಯಲ್ಲೂ ಪಾಕಿಸ್ತಾನ ಎದುರು ಗೆಲುವಿನ ನಗೆ ಬೀರಿತ್ತು. ಇದೀಗ ಏಷ್ಯಾಕಪ್ ಟೂರ್ನಿಯಲ್ಲಿ ಪಾಕ್‌ ಎದುರು ಹ್ಯಾಟ್ರಿಕ್ ಗೆಲುವು ದಾಖಲಿಸಲು ಎದುರು ನೋಡುತ್ತಿದೆ. ಈ ಬಾರಿಯ ಏಷ್ಯಾಕಪ್‌ ಟೂರ್ನಿಯು ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಟಿ20 ಮಾದರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ಈ ಬಾರಿಯ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯು ದುಬೈ ಮಾತ್ರವಲ್ಲದೇ ಶಾರ್ಜಾ ಕ್ರಿಕೆಟ್ ಮೈದಾನದಲ್ಲಿಯೂ ಪಂದ್ಯಾಟಗಳು ನಡೆಯಲಿವೆ. ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಏಷ್ಯಾಕಪ್ ಪಂದ್ಯಾವಳಿಗಳು ಆರಂಭವಾಗಲಿವೆ. 2018ರಲ್ಲಿ ಕೊನೆಯ ಬಾರಿಗೆ ನಡೆದ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಬಾಂಗ್ಲಾದೇಶ ತಂಡವನ್ನು ಬಗ್ಗುಬಡಿದು ಚಾಂಪಿಯನ್‌ ಪಟ್ಟ ಅಲಂಕರಿಸಿತ್ತು.

ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಹೀಗಿದೆ ನೋಡಿ..

Latest Videos
Follow Us:
Download App:
  • android
  • ios