Asianet Suvarna News Asianet Suvarna News

3 ಮಾದರಿಯಲ್ಲೂ 100 ಪಂದ್ಯ: ಹೊಸ ಮೈಲಿಗಲ್ಲು ನೆಡಲು ಕಿಂಗ್ ಕೊಹ್ಲಿ ರೆಡಿ..!


* ಏಷ್ಯಾಕಪ್ ಟೂರ್ನಿಯಲ್ಲಿ ಭಾರತ-ಪಾಕಿಸ್ತಾನ ತಂಡಗಳ ನಡುವಿನ ಕಾದಾಟಕ್ಕೆ ಕ್ಷಣಗಣನೆ
* ಪಾಕ್ ಎದುರಿನ ಪಂದ್ಯವು ವಿರಾಟ್ ಕೊಹ್ಲಿ ಪಾಲಿಗೆ 100ನೇ ಅಂತಾರಾಷ್ಟ್ರೀಯ ಟಿ20 ಪಂದ್ಯ
* ಮೂರನೇ ಮಾದರಿಯ ಕ್ರಿಕೆಟ್‌ನಲ್ಲೂ 100 ಪಂದ್ಯವನ್ನಾಡಿದ ಭಾರತದ ಮೊದಲ ಕ್ರಿಕೆಟಿಗನಾಗಲಿರುವ ಕೊಹ್ಲಿ

Asia Cup 2022 Former Captain Virat Kohli to play 100th T20I in India vs Pakistan clash kvn
Author
First Published Aug 28, 2022, 11:34 AM IST

ದುಬೈ(ಆ.28) ಭಾನುವಾರದ ಪಾಕಿಸ್ತಾನದ ವಿರುದ್ಧದ ಪಂದ್ಯ ವಿರಾಟ್‌ ಕೊಹ್ಲಿಗೆ 100ನೇ ಅಂತಾರಾಷ್ಟ್ರೀಯ ಟಿ20 ಪಂದ್ಯವಾಗಿರಲಿದೆ. ಈ ಮೂಲಕ ಮೂರೂ ಮಾದರಿಯಲ್ಲಿ 100 ಪಂದ್ಯಗಳನ್ನು ಪೂರೈಸಲಿರುವ ಭಾರತದ ಮೊದಲ, ವಿಶ್ವದ 2ನೇ ಕ್ರಿಕೆಟಿಗ ಎನಿಸಿಕೊಳ್ಳಲಿದ್ದಾರೆ. ನ್ಯೂಜಿಲೆಂಡ್‌ನ ರಾಸ್‌ ಟೇಲರ್‌ ಎಲ್ಲಾ 3 ಮಾದರಿಯಲ್ಲೂ 100 ಪಂದ್ಯವಾಡಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ

2008ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ವಿರಾಟ್ ಕೊಹ್ಲಿ ಈವರೆಗೆ 99 ಟಿ20 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿ 50.12ರ ಬ್ಯಾಟಿಂಗ್ ಸರಾಸರಿಯಲ್ಲಿ 30 ಅರ್ಧಶತಕ ಸಹಿತ ಒಟ್ಟು 3,308 ರನ್ ಬಾರಿಸಿದ್ದಾರೆ. ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಇದುವರೆಗೂ ಶತಕ ಸಿಡಿಸಲು ಸಾಧ್ಯವಾಗಿಲ್ಲ. ವಿರಾಟ್ ಕೊಹ್ಲಿ 102 ಟೆಸ್ಟ್‌, 262 ಏಕದಿನ ಪಂದ್ಯಗಳನ್ನಾಡಿದ್ದಾರೆ.

ಇನ್ನು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ನೂರು ಪಂದ್ಯಗಳನ್ನಾಡಿದ ಎರಡನೇ ಭಾರತೀಯ ಆಟಗಾರ ಎನ್ನುವ ಕೀರ್ತಿ ಕೂಡಾ ಇಂದು ವಿರಾಟ್ ಕೊಹ್ಲಿ ಪಾಲಾಗಲಿದೆ. ಈಗಾಗಲೇ ನಾಯಕ ರೋಹಿತ್ ಶರ್ಮಾ, ಟೀಂ ಇಂಡಿಯಾ ಪರ 132 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿದ್ದಾರೆ. 

10 ವರ್ಷದಲ್ಲಿ ಮೊದಲ ಬಾರಿಗೆ ಒಂದು ತಿಂಗಳು ಬ್ಯಾಟ್‌ ಮುಟ್ಟಿರಲಿಲ್ಲ..! ವಿರಾಟ್ ಕೊಹ್ಲಿ ಹೀಗಂದಿದ್ದೇಕೆ?

ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಪಾಕಿಸ್ತಾನ ವಿರುದ್ದ ಏಷ್ಯಾಕಪ್‌ ಸರಣಿಯಲ್ಲಿ ತಮ್ಮ ನೂರನೇ ಟಿ20 ಪಂದ್ಯದಲ್ಲಿ ದೊಡ್ಡ ಮೊತ್ತ ಗಳಿಸುವ ಮೂಲಕ ಫಾರ್ಮ್‌ಗೆ ಮರಳಲು ಎದುರು ನೋಡುತ್ತಿದ್ದಾರೆ.  ಏಷ್ಯಾಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ಹಾಗೂ ಕೆ ಎಲ್ ರಾಹುಲ್ ಇನಿಂಗ್ಸ್‌ ಆರಂಭಿಸಲಿದ್ದು, ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಚುಟುಕು ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ, ಪಾಕಿಸ್ತಾನ ವಿರುದ್ದ ಅದ್ಭುತ ಟ್ರ್ಯಾಕ್‌ ರೆಕಾರ್ಡ್‌ ಹೊಂದಿದ್ದು, ಸಾಂಪ್ರದಾಯಿಕ ಎದುರಾಳಿ ತಂಡ ಎನಿಸಿಕೊಂಡಿರುವ ಪಾಕಿಸ್ತಾನ ವಿರುದ್ದ ಕಿಂಗ್ ಕೊಹ್ಲಿ ಅಬ್ಬರಿಸಲಿ ಎನ್ನುವುದು ಕೋಟ್ಯಾಂತರ ವಿರಾಟ್ ಕೊಹ್ಲಿ ಅಭಿಮಾನಿಗಳ ಹಾರೈಕೆಯಾಗಿದೆ.

ಮೊದಲ ಬಾರಿ 1 ತಿಂಗಳು ಬ್ಯಾಟ್‌ ಮುಟ್ಟಿಲ್ಲ: ಕೊಹ್ಲಿ

ನವದೆಹಲಿ: ಕೆಲ ವರ್ಷಗಳಿಂದ ರನ್‌ ಬರ ಎದುರಿಸುತ್ತಿರುವ ಭಾರತದ ಮಾಜಿ ನಾಯಕ ವಿರಾಟ್‌ ಕೊಹ್ಲಿ, ತಾವು ಮಾನಸಿಕವಾಗಿ ಕುಗ್ಗಿ ಹೋಗಿದ್ದೆ ಎಂದು ಹೇಳಿದ್ದು, 10 ವರ್ಷಗಳಲ್ಲೇ ಮೊದಲ ಬಾರಿ ಒಂದು ತಿಂಗಳ ಕಾಲ ಬ್ಯಾಟ್‌ ಮುಟ್ಟಿರಲಿಲ್ಲ ಎಂಬುದನ್ನು ಬಹಿರಂಗಪಡಿಸಿದ್ದಾರೆ. 

ಈ ಬಗ್ಗೆ ಸ್ಟಾರ್‌ ಸ್ಪೋಟ್ಸ್‌ರ್‍ ಸಂದರ್ಶನದಲ್ಲಿ ಮಾತನಾಡಿದ ಅವರು, ‘ನಾನು ನನ್ನ ಆಕ್ರಮಣಶೀಲ ಮನೋಭಾವವನ್ನು ನಕಲು ಮಾಡುತ್ತಿದ್ದೇನೆ ಎಂಬುದನ್ನು ಅರಿತಿದ್ದೇನೆ. ನನ್ನ ಮನಸ್ಸು ವಿಶ್ರಾಂತಿ ತೆಗೆದುಕೊಳ್ಳಲು ಹೇಳುತ್ತಿತ್ತು. ನಾನು ಮಾನಸಿಕವಾಗಿ ಬಲಿಷ್ಠ ಎಂದುಕೊಳ್ಳುತ್ತೇನೆ. ಆದರೆ ಎಲ್ಲದಕ್ಕೂ ಮಿತಿ ಇದೆ. ಮಾನಸಿಕವಾಗಿ ಕುಗ್ಗಿದ್ದೆ ಎಂದು ಹೇಳಲು ಹಿಂಜರಿಕೆಯಿಲ್ಲ. ಕುಗ್ಗಿದ್ದರೂ ಎಲ್ಲರ ಮುಂದೆ ಬಲಿಷ್ಠ ಎಂದು ತೋರಿಸುವುದು, ದುರ್ಬಲವಾಗಿದ್ದೇವೆಂದು ಒಪ್ಪಿಕೊಳ್ಳುವುದಕ್ಕಿಂತಲೂ ಕೆಟ್ಟದ್ದು ಎಂದು ಕೊಹ್ಲಿ ಹೇಳಿದ್ದಾರೆ.

Follow Us:
Download App:
  • android
  • ios