Asianet Suvarna News Asianet Suvarna News

Asia Cup 2022 ಶತಕ ಸಿಡಿಸಿ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಖಡಕ್ ವಾರ್ನಿಂಗ್ ನೀಡಿದ ವಿರಾಟ್ ಕೊಹ್ಲಿ..!

* ಏಷ್ಯಾಕಪ್ ಟೂರ್ನಿಯಲ್ಲಿ ಫೈನಲ್‌ ಪ್ರವೇಶಿಸಲು ಟೀಂ ಇಂಡಿಯಾ ಫೇಲ್
* ಇದರ ಬೆನ್ನಲ್ಲೇ ಉಳಿದ ತಂಡಗಳಿಗೆ ಎಚ್ಚರಿಕೆ ನೀಡಿದ ವಿರಾಟ್ ಕೊಹ್ಲಿ
* ಬಲಿಷ್ಠವಾಗಿಯೇ ಕಮ್‌ಬ್ಯಾಕ್ ಮಾಡಲಿದ್ದೇವೆ ಎಂದ ಕಿಂಗ್ ಕೊಹ್ಲಿ

Asia Cup 2022 We will get better and come back stronger says Virat Kohli kvn
Author
First Published Sep 9, 2022, 4:21 PM IST

ದುಬೈ(ಸೆ.09): 2022ನೇ ಸಾಲಿನ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ಅಭಿಯಾನ ಅಂತ್ಯವಾಗಿದೆ. ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಮೊದಲೆರಡು ಪಂದ್ಯಗಳಲ್ಲಿ ಪಾಕಿಸ್ತಾನ ಹಾಗೂ ಶ್ರೀಲಂಕಾ ಎದುರು ಸೋಲನುಭವಿಸಿದ್ದ ಟೀಂ ಇಂಡಿಯಾ, ತನ್ನ ಪಾಲಿನ ಕೊನೆಯ ಪಂದ್ಯದಲ್ಲಿ ಆಫ್ಘಾನಿಸ್ತಾನ ಎದುರು 101 ರನ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ತನ್ನ ಅಭಿಯಾನ ಮುಗಿಸಿದೆ. ಆದರೆ ಕೊನೆಯ ಪಂದ್ಯದಲ್ಲಿ ಸ್ಪೋಟಕ ಶತಕ ಸಿಡಿಸಿ ಮಿಂಚಿದ ಮಾಜಿ ನಾಯಕ ವಿರಾಟ್ ಕೊಹ್ಲಿ, ಮುಂಬರುವ ಮಹತ್ವದ ಟೂರ್ನಿಗಳಲ್ಲಿ ಭರ್ಜರಿಯಾಗಿಯೇ ಕಮ್‌ಬ್ಯಾಕ್ ಮಾಡುವ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.

ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಹೊರತುಪಡಿಸಿ ಟೀಂ ಇಂಡಿಯಾ ಬ್ಯಾಟರ್‌ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬಂದಿರಲಿಲ್ಲ. ಆದರೆ ಕಳೆದ ಎರಡೂವರೆ ವರ್ಷಗಳಿಂದ ಶತಕದ ಕನವರಿಕೆಯಲ್ಲಿದ್ದ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಕೊನೆಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೂರಂಕಿ ಮೊತ್ತ ದಾಖಲಿಸಲು ಯಶಸ್ವಿಯಾಗಿದ್ದರು. ಅಂದಹಾಗೆ ಆಫ್ಘಾನಿಸ್ತಾನ ವಿರುದ್ದ ವಿರಾಟ್ ಕೊಹ್ಲಿ ಬಾರಿಸಿದ ಶತಕ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ವಿರಾಟ್‌ ಬಾರಿಸಿದ ಮೊದಲ ಶತಕ ಎನಿಸಿಕೊಂಡಿತು.    

ಪಂದ್ಯ ಮುಕ್ತಾಯದ ಬಳಿಕ, ಸಾಮಾಜಿಕ ಜಾಲತಾಣವಾದ 'ಕೂ' ನಲ್ಲಿ ತಮ್ಮ ಹಾಗೂ ತಂಡದ ಕೆಲವು ಉತ್ತಮ ಫೋಟೋಗಳನ್ನು ಹಂಚಿಕೊಳ್ಳುವುದರ ಜತೆಗೆ, ಏಷ್ಯಾಕಪ್ ಟೂರ್ನಿಯುದ್ದಕ್ಕೂ ನಮ್ಮನ್ನು ಬೆಂಬಲಿಸಿದ ಹಾಗೂ ಪ್ರೀತಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ನಾವು ಮುಂಬರುವ ದಿನಗಳಲ್ಲಿ ಮತ್ತಷ್ಟು ಉತ್ತಮವಾಗಿ ಹಾಗೂ ಬಲಿಷ್ಠವಾಗಿ ಕಮ್‌ಬ್ಯಾಕ್‌ ಮಾಡುತ್ತೇವೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಎದುರಾಳಿ ತಂಡಗಳಿಗೆ ವಿರಾಟ್ ಕೊಹ್ಲಿ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಿ, ಕ್ರಮವಾಗಿ 35, 59*, 60,00 ಹಾಗೂ 122* ರನ್ ಬಾರಿಸಿ ಒಟ್ಟಾರೆ 276 ರನ್ ಗಳಿಸಿ, ಟೂರ್ನಿಯ ಗರಿಷ್ಠ ರನ್ ಸರದಾರ ಎನಿಸಿಕೊಂಡಿದ್ದಾರೆ. ಇಂಗ್ಲೆಂಡ್ ಪ್ರವಾಸ ಮುಕ್ತಾಯದ ಬಳಿಕ ವಿರಾಟ್ ಕೊಹ್ಲಿ 6 ವಾರಗಳ ಕಾಲ ವಿಶ್ರಾಂತಿ ಪಡೆದಿದ್ದರು. ಹೀಗಾಗಿ ವಿರಾಟ್ ಕೊಹ್ಲಿ, ವೆಸ್ಟ್ ಇಂಡೀಸ್ ಹಾಗೂ ಜಿಂಬಾಬ್ವೆ ಎದುರಿನ ಸರಣಿಗೆ ಅಲಭ್ಯರಾಗಿದ್ದರು. ಇದೀಗ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳಿರುವುದು ತಂಡದ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ.

Asia Cup 2022 We will get better and come back stronger says Virat Kohli kvn

Asia Cup 2022 ಶತಕ ಸಿಡಿಸಿ, ಟೀಕಾರರ ಕಾಲೆಳೆದ ಕಿಂಗ್‌ ಕೊಹ್ಲಿ..!

ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಯುಎಇ ನಲ್ಲಿ ಆರಂಭವಾದ ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಎದುರು 5 ವಿಕೆಟ್‌ಗಳ ಗೆಲುವು ಸಾಧಿಸುವ ಶುಭಾರಂಭ ಮಾಡಿತ್ತು. ಇದಾದ ಬಳಿಕ ಹಾಂಕಾಂಗ್ ಎದುರು ಕೂಡಾ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು. ಆದರೆ ಸೂಪರ್ 4 ಹಂತದಲ್ಲಿ ಪಾಕಿಸ್ತಾನ ಹಾಗೂ ಶ್ರೀಲಂಕಾ ಎದುರು ಸೋಲು ಕಾಣುವ ಮೂಲಕ ಫೈನಲ್‌ ರೇಸ್‌ನಿಂದ ಹೊರಬಿದ್ದಿತ್ತು.

Follow Us:
Download App:
  • android
  • ios