Asianet Suvarna News Asianet Suvarna News

Asia Cup 2023: ಕ್ರಿಕೆಟ್‌ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌, ಇಂಡೋ-ಪಾಕ್‌ ಪಂದ್ಯಕ್ಕೆ ಮಳೆ ಬಂದ್ರೂ ಚಿಂತೆ ಬೇಡ..!

ಈ ಮೊದಲು ಏಷ್ಯಾಕಪ್ ಟೂರ್ನಿಯ ಗ್ರೂಪ್ ಹಂತದ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೂ ವರುಣ ಅಡ್ಡಿಯಾಗಿದ್ದ. ಮಳೆಯಿಂದಾಗಿ ಪಾಕಿಸ್ತಾನ ಕ್ರಿಕೆಟ್ ತಂಡವು ಎರಡನೇ ಇನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಲು ಮೈದಾನಕ್ಕಿಳಿಯಲು ಸಾಧ್ಯವಾಗಿರಲಿಲ್ಲ. ಪಂದ್ಯ ಅರ್ಧಕ್ಕೆ ರದ್ದಾಗಿದ್ದರಿಂದ ಉಭಯ ತಂಡಗಳು ತಲಾ ಒಂದೊಂದು ಅಂಕ ಹಂಚಿಕೊಂಡಿದ್ದವು. 

Asia Cup 2023 India vs Pakistan to have a reserve day in case rain plays spoilsport on Sunday kvn
Author
First Published Sep 8, 2023, 4:24 PM IST

ಕೊಲಂಬೊ(ಸೆ.09): 2023ರ ಏಷ್ಯಾಕಪ್ ಟೂರ್ನಿಯ ಗ್ರೂಪ್ ಹಂತ ಮುಕ್ತಾಯವಾಗಿ ಇದೀಗ ಸೂಪರ್ 4 ಹಂತದ ಪಂದ್ಯಗಳು ಆರಂಭವಾಗಿವೆ. ಇದೀಗ ಮತ್ತೊಮ್ಮೆ ಏಷ್ಯಾಖಂಡದ ಎರಡು ಬಲಿಷ್ಠ ಕ್ರಿಕೆಟ್ ತಂಡಗಳಾದ ಭಾರತ ಹಾಗೂ ಪಾಕಿಸ್ತಾನ ನಡುವಿನ ಕಾದಾಟಕ್ಕೆ ವೇದಿಕೆ ಸಜ್ಜಾಗಿದೆ. ಕ್ರಿಕೆಟ್ ಜಗತ್ತಿನ ಬದ್ದ ಎದುರಾಳಿಗಳಾಗಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳು ಸೆಪ್ಟೆಂಬರ್ 10ರಂದು ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಮತ್ತೊಮ್ಮೆ ಮುಖಾಮುಖಿಯಾಗಲು ರೆಡಿಯಾಗಿವೆ. ಹೀಗಿರುವಾಗಲೇ ಏಷ್ಯನ್ ಕ್ರಿಕೆಟ್ ಕೌನ್ಸಿಲ್, ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದು, ಭಾರತ-ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಮೀಸಲು ದಿನವನ್ನು ನಿಗದಿ ಪಡಿಸಿದೆ. ಹೀಗಾಗಿ ಮಳೆ ಬಂದರೂ ಯಾವುದೇ ಆತಂಕ ಪಡುವ ಅಗತ್ಯವಿಲ್ಲ.

ಹೌದು, ಇದೇ ಭಾನುವಾರ ನಡೆಯಲಿರುವ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಒಂದು ವೇಳೆ ಮಳೆರಾಯ ಅಡ್ಡಿಪಡಿಸಿದರೆ, ಮೀಸಲು ದಿನದಂದು ಪಂದ್ಯ ನಡೆಸಲು ತೀರ್ಮಾನಿಸಲಾಗಿದೆ. ಈ ಮೊದಲು ಏಷ್ಯಾಕಪ್ ಟೂರ್ನಿಯ ಗ್ರೂಪ್ ಹಂತದ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೂ ವರುಣ ಅಡ್ಡಿಯಾಗಿದ್ದ. ಮಳೆಯಿಂದಾಗಿ ಪಾಕಿಸ್ತಾನ ಕ್ರಿಕೆಟ್ ತಂಡವು ಎರಡನೇ ಇನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಲು ಮೈದಾನಕ್ಕಿಳಿಯಲು ಸಾಧ್ಯವಾಗಿರಲಿಲ್ಲ. ಪಂದ್ಯ ಅರ್ಧಕ್ಕೆ ರದ್ದಾಗಿದ್ದರಿಂದ ಉಭಯ ತಂಡಗಳು ತಲಾ ಒಂದೊಂದು ಅಂಕ ಹಂಚಿಕೊಂಡಿದ್ದವು. 

ಧೋನಿ, ಕೊಹ್ಲಿ, ಸಚಿನ್‌ ಲೆಕ್ಕಕ್ಕಿಲ್ಲ, ಈ ಭಾರತೀಯ ಕ್ರಿಕೆಟಿಗನ ಬಳಿ ಇದೆ ₹22 ಸಾವಿರ ಕೋಟಿ ಮೌಲ್ಯದ ಚಿನ್ನಾಭರಣ!
 
ಇದೀಗ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪ್ರಕಟಣೆಯನ್ನು ಹೊರಡಿಸಿದ್ದು, ಸೂಪರ್ 4 ಹಂತದಲ್ಲಿನ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಮೀಸಲು ದಿನವನ್ನು ನಿಗದಿ ಮಾಡಲಾಗಿದೆ. ಒಂದು ವೇಳೆ ಸೆಪ್ಟೆಂಬರ್ 10ರಂದು ನಡೆಯಬೇಕಿರುವ ಪಂದ್ಯಕ್ಕೆ ಮಳೆರಾಯ ಅಡ್ಡಿಪಡಿಸಿದರೆ, ಸೆಪ್ಟೆಂಬರ್ 11ರಂದು ಪಂದ್ಯ ನಡೆಯಲಿದೆ ಎಂದು ತಿಳಿಸಿದೆ.

ಸೂಪರ್ 4 ಹಂತದಲ್ಲಿ ಭಾರತ ಹಾಗೂ ಪಾಕಿಸ್ತಾನ ಮತ್ತು ಭಾರತ ಹಾಗೂ ಶ್ರೀಲಂಕಾ ನಡುವಿನ ಪಂದ್ಯಕ್ಕೆ ಕೇವಲ 2 ದಿನ ಅಂತರವಿದೆ. ಒಂದು ವೇಳೆ ಸೆಪ್ಟೆಂಬರ್ 11ರಂದು ಮೀಸಲು ದಿನದಂದು ಪಂದ್ಯ ನಡೆದರೆ, ಮತ್ತೆ ಮರುದಿನವೇ ಭಾರತ ಶ್ರೀಲಂಕಾ ಎದುರು ಮತ್ತೊಂದು ಪಂದ್ಯ ಆಡಬೇಕಾಗಿ ಬರಬಹುದು. ಏಷ್ಯಾಕಪ್ ಫೈನಲ್ ಪಂದ್ಯವು ಸೆಪ್ಟೆಂಬರ್ 17ರಂದು ನಡೆಯಲಿದೆ.

Asia Cup 2023: ಭಾರತ vs ಪಾಕಿಸ್ತಾನ ಮೆಗಾ ಫೈಟ್‌ಗೆ ಮತ್ತೆ ಮಳೆ ಭೀತಿ..! ಪಂದ್ಯ ನಡೆಯುತ್ತಾ?

90% ಮಳೆ ಮುನ್ಸೂಚನೆ: ಸದ್ಯದ ವರದಿ ಪ್ರಕಾರ ಭಾನುವಾರ ಶೇ.80ರಿಂದ 90ರ ವರೆಗೆ ಮಳೆ ಬೀಳಲಿದೆ. ಅಂದು ಬೆಳಗ್ಗೆ ಶೇ.70ರಷ್ಟು ಮಳೆ ಸಾಧ್ಯತೆಯಿದ್ದು, ಮಧ್ಯಾಹ್ನ ವೇಳೆಗೆ ಗುಡುಗು ಸಹಿತ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವರದಿಯಂತೆ ಮಳೆ ಸುರಿದರೆ ಈ ಬಾರಿ ಏಷ್ಯಾಕಪ್​ನಲ್ಲಿ ಭಾರತ-ಪಾಕಿಸ್ತಾನದ ಸತತ ಎರಡನೇ ಪಂದ್ಯ ರದ್ದುಗೊಳ್ಳುವುದು ಖಚಿತ.

ಈಗಾಗಲೇ ಕೊಲಂಬೊದಲ್ಲಿ ಹಲವು ದಿನಗಳಿಂದ ಮಳೆಯಾಗುತ್ತಿದ್ದು, ಹಲವು ಕಡೆಗಳಲ್ಲಿ ನೆರೆ ಸೃಷ್ಠಿಯಾಗಿದೆ. ಹವಾಮಾನ ವರದಿ ನಿಜವಾದರೆ ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ-ಪಾಕಿಸ್ತಾನದ ಸತತ ಎರಡನೇ ಪಂದ್ಯಕ್ಕೂ ಮಳೆರಾಯ ಅಡ್ಡಿಪಡಿಸುವ ಸಾಧ್ಯತೆಯಿದೆ. ಈ ಕಾರಣಕ್ಕಾಗಿಯೇ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

Follow Us:
Download App:
  • android
  • ios