Asia Cup 2023: ಟೀಂ ಇಂಡಿಯಾ ಜೆರ್ಸಿ ಮೇಲೆ ಪಾಕಿಸ್ತಾನ ಹೆಸರು..! ಇತಿಹಾಸದಲ್ಲೇ ಮೊದಲು, ಜೆರ್ಸಿ ಫೋಟೋ ವೈರಲ್
6 ತಂಡಗಳ ಏಷ್ಯಾಕಪ್ ಟೂರ್ನಿ ಆಗಸ್ಟ್ 30ರಿಂದ ಸೆಪ್ಟೆಂಬರ್ 17ರ ವರೆಗೆ ನಡೆಯಲಿದೆ
ಏಷ್ಯಾಕಪ್ ಟೂರ್ನಿಗೆ ಆತಿಥ್ಯ ವಹಿಸಿರುವ ಪಾಕಿಸ್ತಾನ
ಟೀಂ ಇಂಡಿಯಾ ಜೆರ್ಸಿ ಮೇಲೆ ಪಾಕಿಸ್ತಾನ ಹೆಸರು
ನವದೆಹಲಿ(ಆ.09): ಭಾರತ ಕ್ರಿಕೆಟ್ ತಂಡದ ಜೆರ್ಸಿ ಮೇಲೆ ಪಾಕಿಸ್ತಾನದ ಹೆಸರು..! ಈ ವಿಚಾರ ಕೇಳುವುದಕ್ಕೇ ಕೊಂಚ ವಿಚಿತ್ರ ಎನಿಸಬಹುದು. ಆದರೆ ಮುಂಬರುವ 2023ರ ಏಷ್ಯಾಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಜೆರ್ಸಿ ಮೇಲೆ ಪಾಕಿಸ್ತಾನದ ಹೆಸರು ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನಿಸಿದೆ. ಈಗಾಗಲೇ ಈ ಕುರಿತಂತೆ ಟೀಂ ಇಂಡಿಯಾ ಜೆರ್ಸಿ ಮೇಲೆ ಪಾಕಿಸ್ತಾನದ ಹೆಸರಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.
ಭಾರತ ಹಾಗೂ ಪಾಕಿಸ್ತಾನ ತಂಡಗಳನ್ನು ಕ್ರಿಕೆಟ್ ಜಗತ್ತಿನ ಬದ್ದ ಎದುರಾಳಿಗಳೆಂದು ಬಿಂಬಿತವಾಗಿವೆ. 2023ರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಆತಿಥ್ಯದ ಹಕ್ಕನ್ನು ಪಾಕಿಸ್ತಾನ ಪಡೆದುಕೊಂಡಿದೆ. ಈ ಕಾರಣಕ್ಕಾಗಿಯೇ ಟೀಂ ಇಂಡಿಯಾ ಜೆರ್ಸಿ ಮೇಲೆ ಪಾಕಿಸ್ತಾನದ ಹೆಸರು ಕಾಣಿಸಿಕೊಂಡಿದೆ ಎನ್ನುವ ಮಾತುಗಳು ಕೇಳಿ ಬರಲಾರಂಭಿಸಿವೆ. ಭಾರತ ಕ್ರಿಕೆಟ್ ತಂಡವು ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಗುಂಪು ಹಂತದಲ್ಲಿ ಎರಡು ಬಾರಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದ್ದು, ಒಂದು ವೇಳೆ ಉಭಯ ತಂಡಗಳು ಫೈನಲ್ ಪ್ರವೇಶಿಸಿದರೆ ಮೂರನೇ ಬಾರಿಗೆ ಮುಖಾಮುಖಿಯಾಗಲಿವೆ.
ಟೂರ್ನಿ ಮಾದರಿ ಹೇಗೆ?
6 ತಂಡಗಳನ್ನು ತಲಾ 3 ತಂಡಗಳ 2 ಗುಂಪುಗಳನ್ನಾಗಿ ವಿಂಗಡಿಸಲಾಗಿದೆ. ಭಾರತ, ಪಾಕಿಸ್ತಾನ, ನೇಪಾಳ ‘ಎ’ ಗುಂಪಿನಲ್ಲಿದ್ದು, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ‘ಬಿ’ ಗುಂಪಿನಲ್ಲಿವೆ. ಗುಂಪು ಹಂತದಲ್ಲಿ ಪ್ರತಿ ತಂಡ ಇನ್ನುಳಿದ 2 ತಂಡದ ವಿರುದ್ಧ ಒಮ್ಮೆ ಸೆಣಸಲಿದೆ. ಗುಂಪಿನಲ್ಲಿ ಅಗ್ರ-2 ಸ್ಥಾನ ಪಡೆವ ತಂಡಗಳು ಸೂಪರ್-4 ಹಂತಕ್ಕೇರಲಿವೆ. ಸೂಪರ್-4ನಲ್ಲಿ ಪ್ರತಿ ತಂಡ ಇನ್ನುಳಿದ 3 ತಂಡದ ವಿರುದ್ಧ ಒಮ್ಮೆ ಆಡಲಿದ್ದು, ಅಂಕಪಟ್ಟಿಯಲ್ಲಿ ಅಗ್ರ-2 ಸ್ಥಾನ ಪಡೆಯುವ ತಂಡಗಳು ಫೈನಲ್‌ಗೇರಲಿವೆ.
Asia Cup 2023: 15 ದಿನಗಳ ಅಂತರದಲ್ಲಿ ಇಂಡೋ-ಪಾಕ್ 3 ಬಾರಿ ಮುಖಾಮುಖಿ? ಇಲ್ಲಿದೆ ಲೆಕ್ಕಾಚಾರ
6 ತಂಡಗಳ ಟೂರ್ನಿ ಆಗಸ್ಟ್ 30ರಿಂದ ಸೆಪ್ಟೆಂಬರ್ 17ರ ವರೆಗೆ ನಡೆಯಲಿದ್ದು, ಪಾಕಿಸ್ತಾನದ ಮುಲ್ತಾನ್, ಲಾಹೋರ್ ಒಟ್ಟು 4, ಶ್ರೀಲಂಕಾದ ಕ್ಯಾಂಡಿ ಹಾಗೂ ಕೊಲಂಬೊ ಫೈನಲ್ ಸೇರಿ 9 ಪಂದ್ಯಗಳಿಗೆ ಆತಿಥ್ಯ ವಹಿಸಲಿವೆ. ಟೂರ್ನಿಯ ಉದ್ಘಾಟನಾ ಪಂದ್ಯ ಮುಲ್ತಾನ್‌ನಲ್ಲಿ ನಡೆಯಲಿದ್ದು, ಪಾಕ್-ನೇಪಾಳ ಮುಖಾಮುಖಿಯಾಗಲಿವೆ. ಒಂದು ವೇಳೆ ಭಾರತ-ಪಾಕ್ ಸೂಪರ್-4 ಹಂತಕ್ಕೇರಿದರೆ ಉಭಯ ತಂಡಗಳ ಪಂದ್ಯ ಸೆಪ್ಟೆಂಬರ್ 10ರಂದು ಕೊಲಂಬೊದಲ್ಲಿ ನಡೆಯಲಿದೆ.
ಇನ್ನು ಇದಾದ ಬಳಿಕ ಒಂದು ವೇಳೆ ಸೂಪರ್-4 ಹಂತದಲ್ಲಿ ಅದ್ಬುತ ಪ್ರದರ್ಶನ ತೋರುವ ಮೂಲಕ ಭಾರತ ಹಾಗೂ ಪಾಕಿಸ್ತಾನ ತಂಡಗಳು ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನ ಪಡೆದರೆ, ಸೆಪ್ಟೆಂಬರ್ 17ರಂದು ಏಷ್ಯಾಕಪ್ ಫೈನಲ್‌ನಲ್ಲಿ ಮತ್ತೊಮ್ಮೆ ಮುಖಾಮುಖಿಯಾಗುವ ಸಾಧ್ಯತೆಯಿದೆ. ಏಷ್ಯಾಕಪ್ ಫೈನಲ್ ಪಂದ್ಯಕ್ಕೆ ಕೊಲಂಬೊದ ಪ್ರೇಮದಾಸ ಸ್ಟೇಡಿಯಂ ಸಾಕ್ಷಿಯಾಗಲಿದೆ.
ಋತುರಾಜ್ ಗಾಯಕ್ವಾಡ್ ಮದುವೆಯಾಗಿದ್ದರಿಂದ ಕ್ರಿಕೆಟ್ ಬದುಕು ಹಾಳಾಗುತ್ತಾ..? ಉತ್ಕರ್ಷ ಪವಾರ್ ಹೇಳಿದ್ದೇನು?
ಏಷ್ಯಾಕಪ್ ಟೂರ್ನಿಯ ಆತಿಥ್ಯದ ಹಕ್ಕನ್ನು ಪಾಕಿಸ್ತಾನ ಪಡೆದುಕೊಂಡಿತ್ತು. ಆದರೆ ರಾಜತಾಂತ್ರಿಕ ಬಿಕ್ಕಟ್ಟಿನಿಂದಾಗಿ, ಭಾರತ ಕ್ರಿಕೆಟ್ ತಂಡವು ಪಾಕಿಸ್ತಾನದಲ್ಲಿ ಏಷ್ಯಾಕಪ್ ಆಡಲು ಹಿಂದೇಟು ಹಾಕಿತ್ತು. ಹೀಗಾಗಿ ಈ ಬಾರಿಯ ಏಷ್ಯಾಕಪ್ ಟೂರ್ನಿಯನ್ನು ಹೈಬ್ರೀಡ್ ಮಾದರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಅದರಂತೆ 4 ಪಂದ್ಯಗಳನ್ನು ಪಾಕಿಸ್ತಾನದಲ್ಲಿ ಹಾಗೂ ಉಳಿದ 9 ಪಂದ್ಯಗಳನ್ನು ಶ್ರೀಲಂಕಾದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.