Asia Cup 2023: ಭಾರತ ಎದುರು ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ಕೆ
ನಿರೀಕ್ಷೆಯಂತೆಯೇ ವಿಕೆಟ್ ಕೀಪರ್ ಬ್ಯಾಟರ್ ಕೆ ಎಲ್ ರಾಹುಲ್ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. 16ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಎದುರಿನ ಪಂದ್ಯದ ವೇಳೆ ಲಖನೌ ತಂಡದ ನಾಯಕ ಕ್ಷೇತ್ರರಕ್ಷಣೆ ಮಾಡುವ ವೇಳೆ ಗಾಯಗೊಂಡು ತಂಡದಿಂದ ಹೊರಬಿದ್ದಿದ್ದರು. ಇದಾದ ಬಳಿಕ ಸಾಕಷ್ಟು ಸಮಯದ ಬಳಿಕ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ.
ಕೊಲಂಬೊ(ಸೆ.10): ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಹೈವೋಲ್ಟೇಜ್ ಪಂದ್ಯದಲ್ಲಿಂದು ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ.
ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತಕ್ಕೆ ನಿರೀಕ್ಷೆಯಂತೆಯೇ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ತಂಡ ಕೂಡಿಕೊಂಡಿದ್ದಾರೆ. ನೇಪಾಳ ಎದುರಿನ ಪಂದ್ಯದಿಂದ ಹೊರಗುಳಿದಿದ್ದ ಬುಮ್ರಾ, ಇದೀಗ ಪಾಕ್ ಎದುರಿನ ಮಹತ್ವದ ಪಂದ್ಯಕ್ಕೆ ತಂಡ ಕೂಡಿಕೊಂಡಿದ್ದಾರೆ. ಇನ್ನು ನಿರೀಕ್ಷೆಯಂತೆಯೇ ವಿಕೆಟ್ ಕೀಪರ್ ಬ್ಯಾಟರ್ ಕೆ ಎಲ್ ರಾಹುಲ್ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. 16ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಎದುರಿನ ಪಂದ್ಯದ ವೇಳೆ ಲಖನೌ ತಂಡದ ನಾಯಕ ಕ್ಷೇತ್ರರಕ್ಷಣೆ ಮಾಡುವ ವೇಳೆ ಗಾಯಗೊಂಡು ತಂಡದಿಂದ ಹೊರಬಿದ್ದಿದ್ದರು. ಇದಾದ ಬಳಿಕ ಸಾಕಷ್ಟು ಸಮಯದ ಬಳಿಕ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ.
Asia Cup 2023: ಇಂದು ಮತ್ತೆ ಭಾರತ vs ಪಾಕ್ ಹೈವೋಲ್ಟೇಜ್ ಫೈಟ್..!
ಮಳೆ ಅಡ್ಡಿಪಡಿಸಿದ್ರೆ ಪಂದ್ಯ ನಾಳೆಗೆ
ಭಾರತ-ಪಾಕಿಸ್ತಾನ ಪಂದ್ಯಕ್ಕೆ ಸೋಮವಾರ ಮೀಸಲು ದಿನ ನಿಗದಿಪಡಿಸಲಾಗಿದೆ. ಭಾನುವಾರ ಮಳೆಯಿಂದಾಗಿ ಪಂದ್ಯ ಮುಗಿಯದಿದ್ದರೆ, ಅಂದರೆ ಮೊದಲ ಇನ್ನಿಂಗ್ಸ್ ಮುಗಿದು 2ನೇ ಇನ್ನಿಂಗ್ಸಲ್ಲಿ ಕನಿಷ್ಠ 20 ಓವರ್ ಆಟವೂ ಸಾಧ್ಯವಾಗದೆ ಇದ್ದರೆ ಆಗ ಸೋಮವಾರ ಪಂದ್ಯವನ್ನು ಮುಂದುವರಿಸಲಾಗುತ್ತದೆ.
ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಬದ್ದ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಒಟ್ಟು 133 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಪಾಕಿಸ್ತಾನ ತಂಡವು ಮೇಲುಗೈ ಸಾಧಿಸಿದೆ. 133 ಪಂದ್ಯಗಳ ಪೈಕಿ ಪಾಕಿಸ್ತಾನ ತಂಡವು 73 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಭಾರತ ತಂಡವು 55 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. ಇನ್ನು 5 ಪಂದ್ಯಗಳು ರದ್ದಾಗಿವೆ.
ಭಾರತ: ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.
ಪಾಕಿಸ್ತಾನ: ಫಖರ್ ಜಮಾನ್, ಇಮಾಮ್ ಉಲ್ ಹಕ್, ಬಾಬರ್ ಅಜಂ(ನಾಯಕ), ಮೊಹಮ್ಮದ್ ರಿಜ್ವಾನ್, ಅಘಾ ಸಲ್ಮಾನ್, ಇಫ್ತಿಕಾರ್ ಅಹಮ್ಮದ್, ಶದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ನಸೀಂ ಶಾ, ಹ್ಯಾರಿಸ್ ರೌಫ್.
ಪಂದ್ಯ: ಮಧ್ಯಾಹ್ನ 3ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಡಿಸ್ನಿ+ ಹಾಟ್‌ಸ್ಟಾರ್