Asia Cup 2023:ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾಗೆ ಮಳೆ ಅಡ್ಡಿ..!
ಉಭಯ ತಂಡಗಳ ನಡುವಿನ ಕಳೆದ 5 ಮುಖಾಮುಖಿಗಳಲ್ಲಿ ಭಾರತ 4ರಲ್ಲಿ ಗೆದ್ದಿದ್ದು, ಪಾಕಿಸ್ತಾನ 1 ಪಂದ್ಯ ಜಯಿಸಿದೆ. ಈ ಪಂದ್ಯದಲ್ಲೂ ಭರ್ಜರಿ ಪೈಪೋಟಿ ನಿರೀಕ್ಷಿಸಲಾಗಿದೆ
ಪಲ್ಲೆಕೆಲೆ(ಸೆ.02): ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಏಷ್ಯಾಕಪ್ ಟೂರ್ನಿಯ ಹೈವೋಲ್ಟೇಜ್ ಪಂದ್ಯ ಆರಂಭದಲ್ಲೇ ಮಳೆರಾಯ ಅಡ್ಡಿಪಡಿಸಿದ್ದಾನೆ. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿರುವ ಭಾರತ 4.2 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 15 ರನ್ ಗಳಿಸಿದ್ದಾಗ ತುಂತುರು ಮಳೆ ಆರಂಭವಾಗಿದೆ. ಹೀಗಾಗಿ ಪಂದ್ಯ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಇಲ್ಲಿನ ಪಲ್ಲೆಕೆಲೆ ಅಂತಾರಾಷ್ಟ್ರೀಯ ಮೈದಾನದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ ಎಚ್ಚರಿಕೆಯ ಆರಂಭವನ್ನೇ ಪಡೆಯಿತು. ಮೊದಲ ಓವರ್‌ನಲ್ಲಿ ಶಾಹೀನ್ ಅಫ್ರಿದಿ ಬೌಲಿಂಗ್‌ನಲ್ಲಿ ರೋಹಿತ್ ಶರ್ಮಾ ಬೌಂಡರಿ ಬಾರಿಸಿದರು. ಇನ್ನು ಎರಡನೇ ಓವರ್‌ನಲ್ಲಿ ನಸೀಂ ಶಾ ಬೌಲಿಂಗ್‌ನಲ್ಲಿ ಟೀಂ ಇಂಡಿಯಾ ಬ್ಯಾಟರ್‌ಗಳು ಕೇವಲ 3 ರನ್ ಗಳಿಸಲಷ್ಟೇ ಶಕ್ತರಾದರು. ಇದಾದ ಬಳಿಕ ಮೂರನೇ ಓವರ್‌ನಲ್ಲಿ ಶಾಹೀನ್ ಅಫ್ರಿದಿಗೆ ರೋಹಿತ್ ಶರ್ಮಾ ಮತ್ತೊಂದು ಬೌಂಡರಿ ಬಾರಿಸಿದರು. ಆದರೆ ನಸೀಂ ಶಾ ಎದುರು 4ನೇ ಓವರ್‌ನಲ್ಲಿ ಟೀಂ ಇಂಡಿಯಾ ಬ್ಯಾಟರ್‌ಗಳು ರನ್ ಗಳಿಸಲು ಪರದಾಡಿದರು.
Asia Cup 2023: ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ
ಉಭಯ ತಂಡಗಳ ನಡುವಿನ ಕಳೆದ 5 ಮುಖಾಮುಖಿಗಳಲ್ಲಿ ಭಾರತ 4ರಲ್ಲಿ ಗೆದ್ದಿದ್ದು, ಪಾಕಿಸ್ತಾನ 1 ಪಂದ್ಯ ಜಯಿಸಿದೆ. ಈ ಪಂದ್ಯದಲ್ಲೂ ಭರ್ಜರಿ ಪೈಪೋಟಿ ನಿರೀಕ್ಷಿಸಲಾಗಿದೆ. ಎರಡೂ ತಂಡಗಳು ಪರಸ್ಪರ ಎದುರಾಗುವಾಗ ಭಾರತದ ಬ್ಯಾಟರ್‌ಗಳು ಹಾಗೂ ಪಾಕಿಸ್ತಾನ ವೇಗಿಗಳ ನಡುವಿನ ಪೈಪೋಟಿಯೇ ಹೆಚ್ಚು ಆಸಕ್ತಿ ಕೆರಳಿಸಲಿದೆ. ಈ ಸಲದ ಸನ್ನಿವೇಶವೂ ವಿಭಿನ್ನವಾಗಿಲ್ಲ. ರೋಹಿತ್ ಶರ್ಮಾ, ಶುಭ್‌ಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿಗೆ ಶಾಹೀನ್ ಅಫ್ರಿದಿ, ನಸೀಂ ಶಾ, ಹ್ಯಾರಿಸ್ ರೌಫ್ ಸವಾಲೆಸೆಯಲಿದ್ದಾರೆ.
ತಂಡಗಳು ಹೀಗಿವೆ ನೋಡಿ
ಭಾರತ: ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.
ಪಾಕಿಸ್ತಾನ: ಫಖರ್ ಜಮಾನ್, ಇಮಾಮ್ ಇಮಾಮ್, ಬಾಬರ್ ಅಜಂ(ನಾಯಕ), ಮೊಹಮ್ಮದ್ ರಿಜ್ವಾನ್, ಅಘಾ ಸಲ್ಮಾನ್, ಇಫ್ತಿಕಾರ್ ಅಹಮ್ಮದ್, ಶಾಬಾದ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ನಸೀಂ ಶಾ, ಹ್ಯಾರಿಸ್ ರೌಫ್.
ಪಂದ್ಯ: ಮಧ್ಯಾಹ್ನ 3ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಡಿಸ್ನಿ+ ಹಾಟ್‌ಸ್ಟಾರ್