ಭಾರತ ತಂಡವು ಮೂರು ವೇಗಿಗಳು ಹಾಗೂ ಇಬ್ಬರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿದಿದೆ. ಅನುಭವಿ ವೇಗಿ ಮೊಹಮ್ಮದ್ ಶಮಿ ಬದಲಿಗೆ ಶಾರ್ದೂಲ್ ಠಾಕೂರ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ

ಪಲ್ಲೆಕೆಲೆ(ಸೆ.02): 2023ರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಪಂದ್ಯ ತನ್ನದೇ ರೀತಿಯಲ್ಲಿ ವಿಶೇಷತೆ ಪಡೆದಿದ್ದು, 4 ವರ್ಷ ಬಳಿಕ ಉಭಯ ತಂಡಗಳು ಏಕದಿನ ಮಾದರಿಯಲ್ಲಿ ಮುಖಾಮುಖಿಯಾಗಲಿವೆ.ಎರಡೂ ತಂಡಗಳು ಕೊನೆಯ ಬಾರಿಗೆ ಏಕದಿನ ಪಂದ್ಯವಾಡಿದ್ದು 2019ರ ವಿಶ್ವಕಪ್‌ನಲ್ಲಿ. ಇದೀಗ ಮತ್ತೊಂದು ವಿಶ್ವಕಪ್‌ ಮುಖಾಮುಖಿಗೆ ಒಂದೂವರೆ ತಿಂಗಳಷ್ಟೇ ಬಾಕಿ ಇದ್ದು, ಈ ಪಂದ್ಯ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ.

ಭಾರತ ತಂಡವು ಮೂರು ವೇಗಿಗಳು ಹಾಗೂ ಇಬ್ಬರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿದಿದೆ. ಅನುಭವಿ ವೇಗಿ ಮೊಹಮ್ಮದ್ ಶಮಿ ಬದಲಿಗೆ ಶಾರ್ದೂಲ್ ಠಾಕೂರ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ

ಎರಡೂ ತಂಡಗಳು ಪರಸ್ಪರ ಎದುರಾಗುವಾಗ ಭಾರತದ ಬ್ಯಾಟರ್‌ಗಳು ಹಾಗೂ ಪಾಕಿಸ್ತಾನ ವೇಗಿಗಳ ನಡುವಿನ ಪೈಪೋಟಿಯೇ ಹೆಚ್ಚು ಆಸಕ್ತಿ ಕೆರಳಿಸಲಿದೆ. ಈ ಸಲದ ಸನ್ನಿವೇಶವೂ ವಿಭಿನ್ನವಾಗಿಲ್ಲ. ರೋಹಿತ್‌ ಶರ್ಮಾ, ಶುಭ್‌ಮನ್‌ ಗಿಲ್‌ ಹಾಗೂ ವಿರಾಟ್‌ ಕೊಹ್ಲಿಗೆ ಶಾಹೀನ್‌ ಅಫ್ರಿದಿ, ನಸೀಂ ಶಾ, ಹ್ಯಾರಿಸ್‌ ರೌಫ್‌ ಸವಾಲೆಸೆಯಲಿದ್ದಾರೆ.

ಉಭಯ ತಂಡಗಳ ನಡುವಿನ ಕಳೆದ 5 ಮುಖಾಮುಖಿಗಳಲ್ಲಿ ಭಾರತ 4ರಲ್ಲಿ ಗೆದ್ದಿದ್ದು, ಪಾಕಿಸ್ತಾನ 1 ಪಂದ್ಯ ಜಯಿಸಿದೆ. ಈ ಪಂದ್ಯದಲ್ಲೂ ಭರ್ಜರಿ ಪೈಪೋಟಿ ನಿರೀಕ್ಷಿಸಲಾಗಿದೆ.

ತಂಡಗಳು ಹೀಗಿವೆ ನೋಡಿ

ಭಾರತ: ರೋಹಿತ್‌ ಶರ್ಮಾ(ನಾಯಕ), ಶುಭ್‌ಮನ್‌ ಗಿಲ್‌, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಇಶಾನ್ ಕಿಶನ್‌, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್‌ ಠಾಕೂರ್, ಕುಲ್ದೀಪ್‌ ಯಾದವ್, ಮೊಹಮ್ಮದ್ ಸಿರಾಜ್‌, ಜಸ್ಪ್ರೀತ್ ಬುಮ್ರಾ.

ಪಾಕಿಸ್ತಾನ: ಫಖರ್‌ ಜಮಾನ್, ಇಮಾಮ್ ಇಮಾಮ್‌, ಬಾಬರ್‌ ಅಜಂ(ನಾಯಕ), ಮೊಹಮ್ಮದ್ ರಿಜ್ವಾನ್‌, ಅಘಾ ಸಲ್ಮಾನ್‌, ಇಫ್ತಿಕಾರ್‌ ಅಹಮ್ಮದ್, ಶಾಬಾದ್ ಖಾನ್, ಮೊಹಮ್ಮದ್ ನವಾಜ್‌, ಶಾಹೀನ್‌ ಅಫ್ರಿದಿ, ನಸೀಂ ಶಾ, ಹ್ಯಾರಿಸ್ ರೌಫ್‌.

ಪಂದ್ಯ: ಮಧ್ಯಾಹ್ನ 3ಕ್ಕೆ
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌, ಡಿಸ್ನಿ+ ಹಾಟ್‌ಸ್ಟಾರ್‌