ಇಲ್ಲಿನ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಆರಂಭವಾದ ಪಂದ್ಯದಲ್ಲಿ ಟೀಂ ಇಂಡಿಯಾ ಒಂದು ಬದಲಾವಣೆ ಮಾಡಿದೆ

ಕೊಲಂಬೊ(ಸೆ.12): ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಸೂಪರ್ 4 ಹಂತದ ಪಂದ್ಯದಲ್ಲಿಂದು ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಭಾರತ ತಂಡವು ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ.

ಹೌದು, ಇಲ್ಲಿನ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಆರಂಭವಾದ ಪಂದ್ಯದಲ್ಲಿ ಟೀಂ ಇಂಡಿಯಾ ಒಂದು ಬದಲಾವಣೆ ಮಾಡಿದೆ. ಕಳೆದ ಪಾಕಿಸ್ತಾನ ಎದುರಿನ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್‌ಗೆ ಮಣೆ ಹಾಕಲಾಗಿತ್ತು. ಇದೀಗ ಶಾರ್ದೂಲ್ ಠಾಕೂರ್ ಬದಲಿಗೆ ಎಡಗೈ ಆಲ್ರೌಂಡರ್ ಅಕ್ಷರ್ ಪಟೇಲ್ ತಂಡ ಕೂಡಿಕೊಂಡಿದ್ದಾರೆ.

Asia Cup 2023 ರಕ್ತ ಸುರಿಯುತ್ತಿದ್ದ ಪಾಕ್‌ ಆಟಗಾರನ ಯೋಗಕ್ಷೇಮ ವಿಚಾರಿಸಿದ 'ಸೆಂಚುರಿ ವೀರ ಕನ್ನಡಿಗ' ರಾಹುಲ್..!

ಭಾರತ ಕ್ರಿಕೆಟ್ ತಂಡವು ಏಷ್ಯಾಕಪ್ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಸತತ ಮೂರನೇ ದಿನ ಮೈದಾನಕ್ಕೆ ಕಣಕ್ಕಿಳಿದಿದೆ. ಸೆಪ್ಟೆಂಬರ್ 10ರಂದು ಭಾರತ-ಪಾಕಿಸ್ತಾನ ತಂಡ ಆಯೋಜನೆಗೊಂಡಿತ್ತು. ಮಳೆಯಿಂದಾಗಿ ಸೆಪ್ಟೆಂಬರ್ 10ರಂದು ಈ ಪಂದ್ಯ ಅರ್ಧಕ್ಕೆ ಸ್ಥಗಿತಗೊಂಡಿತ್ತು. ಇದಾದ ಬಳಿಕ ಸೆಪ್ಟೆಂಬರ್ 11ರಂದು ಪಂದ್ಯವನ್ನು ಪುನರ್‌ ಆರಂಭಿಸಲಾಗಿತ್ತು. ಇದೀಗ ಮೂರನೇ ದಿನ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಮೈದಾನಕ್ಕಿಳಿದಿದೆ.

ತಂಡಗಳು ಹೀಗಿವೆ ನೋಡಿ:

ಭಾರತ: ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್, ಇಶಾನ್ ಕಿಶನ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಶ್ರೀಲಂಕಾ: ಪಥುಮ್ ನಿಸ್ಸಾಂಕ, ದಿಮುತ್ ಕರುಣರತ್ನೆ, ಕುಸಾಲ್ ಮೆಂಡೀಸ್(ವಿಕೆಟ್ ಕೀಪರ್), ಸದೀರಾ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ದಶುನ್ ಶನಕಾ(ನಾಯಕ), ದುನಿತ್ ವೆಲ್ಲಾಲಗೆ, ಮಹೀಶ್ ತೀಕ್ಷಣ, ಕಸುನ್ ರಜಿತಾ, ಮಹೀಶಾ ಪತಿರಣ