ಏಷ್ಯಾಕಪ್ ಹೋರಾಟದಲ್ಲಿ ರಾಹುಲ್-ಕೊಹ್ಲಿ ಸೆಂಚುರಿ ದಾಖಲೆ, ಪಾಕಿಸ್ತಾನಕ್ಕೆ 357 ರನ್ ಗುರಿ!
ಬದ್ಧವೈರಿ ಪಾಕಿಸ್ತಾನ ವಿರುದ್ದ ಟೀಂ ಇಂಡಿಯಾ ಹಲವು ದಾಖಲೆ ಬರೆದಿದೆ. ಕೊಹ್ಲಿ-ರಾಹುಲ್ ದ್ವಿಶತಕದ ಜೊತೆಯಾಟ, ಆಕರ್ಷಕ ಸೆಂಚುರಿ ಸೇರಿದಂತೆ ಕೆಲ ದಾಖಲೆ ನಿರ್ಮಾಣವಾಗಿದೆ. ಈ ಮೂಲಕ ಭಾರತ 357 ರನ್ ಬೃಹತ್ ಟಾರ್ಗೆಟ್ ನೀಡಿದೆ.
ಕೊಲೊಂಬೊ(ಸೆ.11) ಭಾರತ ಪಾಕಿಸ್ತಾನ ನಡುವಿನ ಏಷ್ಯಾಕಪ್ ಪಂದ್ಯಕ್ಕೆ ಅಂಟಿಕೊಂಟ ಮಳೆರಾಯನ ಶಾಪದ ನಡುವೆಯೂ ಟೀಂ ಇಂಡಿಯಾ ದಿಟ್ಟ ಹೋರಾಟ ನೀಡುವಲ್ಲಿ ಯಶಸ್ವಿಯಾಗಿದೆ. ಸೂಪರ್ 4 ಮಹತ್ವದ ಪಂದ್ಯ ಮಳೆಯಿಂದಾಗಿ ರದ್ದಾಗಿ ಮೀಸಲು ದಿನಕ್ಕೆ ಮುಂದೂಡಲ್ಪಟ್ಟಿತ್ತು. ಮೊದಲ ದಿನ ನಾಯಕ ರೋಹಿತ್ ಶರ್ಮಾ ಹಾಗೂ ಶುಭಮನ್ ಗಿಲ್ ಹಾಫ್ ಸೆಂಚುರಿ ಸಿಡಿಸಿ ಮಿಂಚಿದ್ದರು. ಮೀಸಲು ದಿನದಲ್ಲಿ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಹೋರಾಟ ಟೀಂ ಇಂಡಿಯಾ ಕೈಹಿಡಿಯಿತು. ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಆಕರ್ಷಕ ಶತಕ ಸಿಡಿಸಿ ಮಿಂಚಿದರು. ಇದರ ಪರಿಣಾಮ ಭಾರತ 2 ವಿಕೆಟ್ ನಷ್ಟಕ್ಕೆ 356 ರನ್ ಸಿಡಿಸಿದೆ. ಇದೀಗ ಪಾಕಿಸ್ತಾನಕ್ಕೆ ರನ್ ಟಾರ್ಗೆಟ್ ನೀಡಿದೆ.
ಟೀಂ ಇಂಡಿಯಾ 24.1 ಓವರ್‌ನಲ್ಲಿ 2 ವಿಕೆಟ್ ನಷ್ಟಕ್ಕೆ 147 ರನ್ ಸಿಡಿಸಿತ್ತು. ಆದರೆ ಮಳೆಯಿಂದ ಪಂದ್ಯ ಸ್ಥಗಿತಗೊಂಡು ಮತ್ತೆ ಆರಂಭಗೊಳ್ಳಲಿಲ್ಲ. ಹೀಗಾಗಿ ಪಂದ್ಯವನ್ನು ಮೀಸಲು ದಿನಕ್ಕೆ ಮುಂದೂಡಲಾಗಿತ್ತು. ಮೀಸಲು ದಿನವಾದ ಇಂದು ಪಂದ್ಯ ಆರಂಭಕ್ಕೆ ಮತ್ತೆ ಮಳೆ ಅಡ್ಡಿಯಾಗಿತ್ತು. ಹೀಗಾಗಿ ವಿಳಂಬವಾಗಿ ಪಂದ್ಯ ಆರಂಭಗೊಂಡಿತ್ತು. ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಬ್ಯಾಟಿಂಗ್‌ನಿಂದ ಭಾರತ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿತು.
Asia cup ಪಾಕಿಸ್ತಾನ ವಿರುದ್ದ ಟೀಂ ಇಂಡಿಯಾ ದಾಖಲೆ, ಕೆಎಲ್ ರಾಹುಲ್-ವಿರಾಟ್ ಕೊಹ್ಲಿ ಶತಕ!
ಸ್ಫೋಟಕ ಬ್ಯಾಟಿಂಗ್ ಮೂಲಕ ಮಿಂಚಿದ ಕೆಎಲ್ ರಾಹುಲ್ ತಮ್ಮ ಕಮ್‌ಬ್ಯಾಕ್ ಪಂದ್ಯದಲ್ಲೇ ಶತಕ ಸಿಡಿಸಿದ್ದಾರೆ. 100 ಎಸೆತದಲ್ಲಿ ಕೆಎಲ್ ರಾಹುಲ್ ಸೆಂಚುರಿ ಸಿಡಿಸಿ ಸಂಭ್ರಮಿಸಿದರು. ಕೆಎಲ್ ರಾಹುಲ್ 6ನೇ ಶತಕ ದಾಖಲಿಸಿದರು. ಇತ್ತ ರಾಹುಲ್ ಬೆನ್ನಲ್ಲೇ ವಿರಾಟ್ ಕೊಹ್ಲಿ ತಮ್ಮ 47ನೇ ಏಕದಿನ ಸೆಂಚುರಿ ಸಿಡಿಸಿದರು. ಕೊಹ್ಲಿ 84 ಎಸೆತದಲ್ಲಿ ಶತಕ ಸಿಡಿಸಿದ್ದಾರೆ.
ಕೊಹ್ಲಿ ಹಾಗೂ ಗಿಲ್ ನಿರ್ಗಮನದ ಬಳಿಕ ಸಂಪೂರ್ಣ ಜವಾಬ್ದಾರಿ ಹೊತ್ತಕೊಂಡ ಕೊಹ್ಲಿ ಹಾಗೂ ರಾಹುಲ್ ದ್ವಿಶತಕದ ಜೊತೆಯಾಟ ವಾಡಿದ್ದಾರೆ. ಏಷ್ಯಾಕಪ್ ಟೂರ್ನಿಯಲ್ಲಿ 2ನೇ ವಿಕೆಟ್‌ಗೆ ದಾಖಲಾದ ಗರಿಷ್ಠ ಜೊತೆಯಾಟ ಅನ್ನೋ ದಾಖಲೆಗೂ ಪಾತ್ರವಾಗಿದೆ. ವಿರಾಟ್ ಕೊಹ್ಲಿ 94 ಎಸೆತದಲ್ಲಿ ಅಜೇಯ 124 ರನ್ ಸಿಡಿಸಿದರೆ, ರಾಹುಲ್ 106 ಎಸೆತದಲ್ಲಿ ಅಜೇಯ 111 ರನ್ ಸಿಡಿಸಿದ್ದಾರೆ. ಈ ಮೂಲಕ ಭಾರತ 2 ವಿಕೆಟ್ ನಷ್ಟಕ್ಕೆ 356 ರನ್ ಸಿಡಿಸಿತು.
ತಂದೆಯಾದ ಬುಮ್ರಾಗೆ ಸರ್ಪ್ರೈಸ್ ಗಿಫ್ಟ್ ಕೊಟ್ಟ ಪಾಕ್ ವೇಗಿ ಶಾಹೀನ್ ಅಫ್ರಿದಿ..! ಹೃದಯಗೆದ್ದ ವಿಡಿಯೋ ವೈರಲ್