Asianet Suvarna News Asianet Suvarna News

ವಿರಾಟ್ ಕೊಹ್ಲಿಗೆ ಕೊಂಬು ಮೂಡಿಲ್ಲ..! ವಾಟರ್ ಬಾಯ್ ಕೆಲಸವನ್ನು ಎಂಜಾಯ್ ಮಾಡಿದ ಕಿಂಗ್ ಕೊಹ್ಲಿ..!

ಭಾರತದ ಶ್ರೀಮಂತ ಕ್ರಿಕೆಟಿಗ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ, ತಾವೊಬ್ಬ ಸ್ಟಾರ್ ಕ್ರಿಕೆಟಿಗನಾಗಿದ್ದರೂ ಕೂಡಾ ವಾಟರ್‌ ಬಾಯ್‌ ಕೆಲಸ ಮಾಡಲು ಹಿಂಜರಿಯುವುದಿಲ್ಲ ಎನ್ನುವುದನ್ನು ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಬಾಂಗ್ಲಾದೇಶ ಎದುರಿನ ಪಂದ್ಯದ ವೇಳೆ ಮತ್ತೊಮ್ಮೆ ಸಾಬೀತು ಮಾಡಿ ತೋರಿಸಿದ್ದಾರೆ.

Asia Cup 2023 Virat Kohli Turns Water Boy For Indian Cricket Team video goes viral kvn
Author
First Published Sep 15, 2023, 5:29 PM IST

ಕೊಲಂಬೊ(ಸೆ.15): ಆಧುನಿಕ ಕ್ರಿಕೆಟ್‌ನ ಸೂಪರ್ ಸ್ಟಾರ್ ಬ್ಯಾಟರ್ ಎನಿಸಿಕೊಂಡಿರುವ ವಿರಾಟ್ ಕೊಹ್ಲಿಗೆ ಯಾವುದೇ ಹಮ್ಮುಬಿಮ್ಮುಗಳಿಲ್ಲ ಎನ್ನುವುದನ್ನು ಮತ್ತೊಮ್ಮೆ ಜಗತ್ತಿನ ಮುಂದೆ ಅನಾವರಣ ಮಾಡಿದ್ದಾರೆ. ಒಂದೆರಡು ಅಂತಾರಾಷ್ಟ್ರೀಯ ಪಂದ್ಯವನ್ನಾಡಿದರೇ ಸಾಕು, ಕೆಲವು ಆಟಗಾರರಿಗೆ ಅವರಿಗರಿವಿಲ್ಲದೇ ಎರಡು ಕೊಂಬುಗಳು ಮೂಡಿ ಬಿಡುತ್ತವೆ. ಹೀಗಿರುವಾಗ, ಭಾರತದ ಶ್ರೀಮಂತ ಕ್ರಿಕೆಟಿಗ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ, ತಾವೊಬ್ಬ ಸ್ಟಾರ್ ಕ್ರಿಕೆಟಿಗನಾಗಿದ್ದರೂ ಕೂಡಾ ವಾಟರ್‌ ಬಾಯ್‌ ಕೆಲಸ ಮಾಡಲು ಹಿಂಜರಿಯುವುದಿಲ್ಲ ಎನ್ನುವುದನ್ನು ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಬಾಂಗ್ಲಾದೇಶ ಎದುರಿನ ಪಂದ್ಯದ ವೇಳೆ ಮತ್ತೊಮ್ಮೆ ಸಾಬೀತು ಮಾಡಿ ತೋರಿಸಿದ್ದಾರೆ.

ಹೌದು, ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್ ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ ಸೇರಿದಂತೆ 5 ಆಟಗಾರರಿಗೆ ವಿಶ್ರಾಂತಿ ನೀಡಿದೆ. ಹೀಗಾಗಿ ವಿರಾಟ್ ಕೊಹ್ಲಿ ಡಗೌಟ್‌ನಲ್ಲಿ ಕುಳಿತು ಪಂದ್ಯವನ್ನು ವೀಕ್ಷಿಸುತ್ತಿದ್ದರು. ಇದೇ ಸಂದರ್ಭದಲ್ಲಿ ಡ್ರಿಂಕ್ಸ್‌ ಬ್ರೇಕ್ ವೇಳೆ ಸ್ವತಃ ವಿರಾಟ್ ಕೊಹ್ಲಿ ವಾಟರ್ ಬಾಯ್ ಆಗಿ ಮೈದಾನಕ್ಕೆ ಓಡೋಡಿ ಬರುವ ಮೂಲಕ ಗಮನ ಸೆಳೆದಿದ್ದಾರೆ. ಬಾಂಗ್ಲಾದೇಶದ ಬ್ಯಾಟರ್ ಅನ್‌ಮೋಲ್ ಹಕ್ ಔಟಾಗುತ್ತಿದ್ದಂತೆಯೇ ವಿರಾಟ್ ಕೊಹ್ಲಿ, ಜೋಶ್‌ನಲ್ಲಿ ನೀರು ಹಿಡಿದುಕೊಂಡು ಕುಣಿದಾಡುತ್ತಾ ಮೈದಾನಕ್ಕೆ ಓಡೋಡಿ ಬರುವ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ. 

Asia Cup 2023: ಬಾಂಗ್ಲಾ ಎದುರು ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ; ತಿಲಕ್ ವರ್ಮಾ ಡೆಬ್ಯೂ

ಹೀಗಿತ್ತು ನೋಡಿ ಆ ಕ್ಷಣ:

ಇನ್ನು ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಕೊನೆಯ ಪಂದ್ಯವು ಉಭಯ ತಂಡಗಳ ಪಾಲಿಗೆ ಔಪಚಾರಿಕ ಪಂದ್ಯ ಎನಿಸಿಕೊಂಡಿದೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಸೂಪರ್ 4 ಹಂತದಲ್ಲಿ ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಈಗಾಗಲೇ ಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದು, ಬಾಂಗ್ಲಾದೇಶ ತಂಡದ ಎದುರು ಫೈನಲ್‌ಗೂ ಮುನ್ನ ಅಭ್ಯಾಸ ಪಂದ್ಯವನ್ನಾಗಿ ಬಳಸಿಕೊಳ್ಳಲು ಸಜ್ಜಾಗಿದೆ. ಇನ್ನೊಂದೆಡೆ ಶಕೀಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶ ತಂಡವು ಕೂಡಾ ಮೊದಲೆರಡು ಪಂದ್ಯಗಳನ್ನು ಸೋತು ಈಗಾಗಲೇ ಫೈನಲ್‌ ರೇಸ್‌ನಿಂದ ಹೊರಬಿದ್ದಿದ್ದು, ಕೊನೆಯ ಪಂದ್ಯದಲ್ಲಿ ಗೆದ್ದು ಗೆಲುವಿನೊಂದಿಗೆ ಏಷ್ಯಾಕಪ್ ಟೂರ್ನಿಯಲ್ಲಿ ತನ್ನ ಅಭಿಯಾನವನ್ನು ಮುಗಿಸಲು ಎದುರು ನೋಡುತ್ತಿದೆ. 

ಮಗುವಾದ್ಮೇಲೆ ಚಾರ್ಮ್ ಕಳೆದುಕೊಂಡ್ರಾ ಮಯಾಂತಿ ಲ್ಯಾಂಗರ್? ನೆಟ್‌ವರ್ಥ್ ಮಾತ್ರ ಹೆಚ್ಚಾಗಿದೆ, ಏಷ್ಟಿದೆ ಆಸ್ತಿ?

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಬಾಂಗ್ಲಾದೇಶ ತಂಡಕ್ಕೆ ಶಾರ್ದೂಲ್ ಠಾಕೂರ್ ಹಾಗೂ ಮೊಹಮ್ಮದ್ ಶಮಿ ಆರಂಭದಲ್ಲೇ ಶಾಕ್ ನೀಡಿದರು. ಪರಿಣಾಮ ಬಾಂಗ್ಲಾದೇಶ ತಂಡವು 28 ರನ್ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ಮೂವರು ಬ್ಯಾಟರ್‌ಗಳು ಪೆವಿಲಿಯನ್ ಸೇರಿದ್ದರು. ಇನ್ನು ಮೆಹದಿ ಹಸನ್ ಮಿರಜ್ 13 ರನ್‌ ಗಳಿಸಿ ಅಕ್ಷರ್ ಪಟೇಲ್‌ ಜಾಲಕ್ಕೆ ಬಿದ್ದರು. 

ಬಾಂಗ್ಲಾದೇಶ ತಂಡವು ಒಂದು ಹಂತದಲ್ಲಿ 59 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ 5ನೇ ವಿಕೆಟ್‌ಗೆ ಜತೆಯಾದ ನಾಯಕ ಶಕೀಬ್ ಅಲ್ ಹಸನ್ ಹಾಗೂ ತೌಹಿದ್ ಹ್ರಿದಯ್‌ ಮುರಿಯದ ಶತಕದ ಜತೆಯಾಟವಾಡಿ ತಂಡಕ್ಕೆ ಆಸರೆಯಾಗಿದ್ದಾರೆ. 33 ಓವರ್ ಅಂತ್ಯದ ವೇಳೆಗೆ ಬಾಂಗ್ಲಾದೇಶ ತಂಡವು 4 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿದ್ದು, ಶಕೀಬ್ ಅಜೇಯ 80 ಹಾಗೂ ತೌಹಿದ್ 40 ರನ್ ಬಾರಿಸಿ ದಿಟ್ಟ ಹೋರಾಟ ನಡೆಸುತ್ತಿದ್ದಾರೆ.

Follow Us:
Download App:
  • android
  • ios