Asian Games 2023: ಚೀನಾದಲ್ಲಿ ಲಂಕಾ ದಹನ, ಚಿನ್ನ ಗೆದ್ದು ಬೀಗಿದ ಮಹಿಳಾ ಟೀಂ ಇಂಡಿಯಾ
ಎಡಗೈ ಬ್ಯಾಟರ್ ಸ್ಮೃತಿ ಮಂಧನಾ 45 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 46 ರನ್ ಗಳಿಸಿ ರಣವೀರ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಸಾಕಷ್ಟು ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಜೆಮಿಯಾ ರೋಡ್ರಿಗ್ಸ್ ಕೊನೆಯ ಓವರ್‌ನಲ್ಲಿ ವಿಕೆಟ್ ಒಪ್ಪಿಸಿದರು.
ಹಾಂಗ್ಝೂ(ಸೆ.25): ಸ್ಮೃತಿ ಮಂಧನಾ, ಜೆಮಿಯಾ ರೋಡ್ರಿಗ್ಸ್ ಸಮಯೋಚಿತ ಬ್ಯಾಟಿಂಗ್ ಹಾಗೂ ತಿತಾಸ್ ಸಧು ಮಿಂಚಿನ ದಾಳಿಯ ನೆರವಿನಿಂದ ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಫೈನಲ್‌ನಲ್ಲಿ ಶ್ರೀಲಂಕಾ ಎದುರು 19 ರನ್ ರೋಚಕ ಜಯ ಸಾಧಿಸಿದೆ. ಈ ಮೂಲಕ ಲಂಕಾ ದಹನ ಮಾಡಿದ ಹರ್ಮನ್‌ಪ್ರೀತ್ ಕೌರ್ ಪಡೆ ಚಿನ್ನದ ಪದಕಕ್ಕೆ ಕೊರಳೊಡ್ಡುವಲ್ಲಿ ಯಶಸ್ವಿಯಾಗಿದೆ. ಭಾರತ ನೀಡಿದ್ದ 117 ರನ್ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡವು ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕೇವಲ 97 ರನ್ ಗಳಿಸಲಷ್ಟೇ ಶಕ್ತವಾಯಿತು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ಮಹಿಳಾ ಕ್ರಿಕೆಟ್ ತಂಡವು ಆರಂಭದಲ್ಲೇ ಸ್ಪೋಟಕ ಬ್ಯಾಟರ್ ಶಫಾಲಿ ವರ್ಮಾ ವಿಕೆಟ್ ಕಳೆದುಕೊಂಡಿತು. ಶಫಾಲಿ ವರ್ಮಾ 15 ಎಸೆತಗಳನ್ನು ಎದುರಿಸಿ 1 ಬೌಂಡರಿ ಬಾರಿಸಿ ಸುಗಂದಿಕಾ ಕುಮಾರಿ ಬೌಲಿಂಗ್‌ನಲ್ಲಿ ಸ್ಟಂಪೌಟ್ ಆಗಿ ಪೆವಿಲಿಯನ್ ಸೇರಿದರು. ಇದಾದ ಬಳಿಕ ಎರಡನೇ ವಿಕೆಟ್‌ಗೆ ಸ್ಮೃತಿ ಮಂಧನಾ ಹಾಗೂ ಜೆಮಿಯಾ ರೋಡ್ರಿಗ್ಸ್ ಜವಾಬ್ದಾರಿಯುತ 73 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಸಾಕಷ್ಟು ವಿಚಿತ್ರವಾಗಿ ವರ್ತಿಸುತ್ತಿದ್ದ ಪಿಚ್‌ನಲ್ಲಿ ನೆಲಕಚ್ಚಿ ಆಡುವ ಮೂಲಕ ತಂಡಕ್ಕೆ ಆಸರೆಯಾದರು.
ಎಡಗೈ ಬ್ಯಾಟರ್ ಸ್ಮೃತಿ ಮಂಧನಾ 45 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 46 ರನ್ ಗಳಿಸಿ ರಣವೀರ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಸಾಕಷ್ಟು ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಜೆಮಿಯಾ ರೋಡ್ರಿಗ್ಸ್ ಕೊನೆಯ ಓವರ್‌ನಲ್ಲಿ ವಿಕೆಟ್ ಒಪ್ಪಿಸಿದರು. ಜೆಮಿಯಾ ಪೆವಿಲಿಯನ್ ಸೇರುವ ಮುನ್ನ 40 ಎಸೆತಗಳನ್ನು ಎದುರಿಸಿ 5 ಬೌಂಡರಿ ಸಹಿತ 42 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ಆಸೀಸ್ ಎದುರು ಸರಣಿ ಗೆದ್ದು ಬೀಗುತ್ತಿರುವ ಟೀಂ ಇಂಡಿಯಾಗೆ ಬಿಗ್ ಶಾಕ್..! ಕೊನೆಯ ಪಂದ್ಯದಿಂದ ಸ್ಟಾರ್ ಆಲ್ರೌಂಡರ್ ಔಟ್
ಭಾರತ ಪರ ಸ್ಮೃತಿ ಮಂಧನಾ ಹಾಗೂ ಜೆಮಿಯಾ ರೋಡ್ರಿಗ್ಸ್ ಹೊರತುಪಡಿಸಿ ಯಾವೊಬ್ಬ ಬ್ಯಾಟರ್ ಕೂಡ ಎರಡಂಕಿ ಮೊತ್ತ ದಾಖಲಿಸಲು ಸಫಲರಾಗಲಿಲ್ಲ. ಇದರ ಹೊರತಾಗಿಯೂ ಹರ್ಮನ್‌ಪ್ರೀತ್ ಕೌರ್ ಪಡೆ ಗೌರವಾನ್ವಿತ ಮೊತ್ತ ಕಲೆಹಾಕಲು ನೆರವಾಯಿತು.
ಇನ್ನು ಗುರಿ ಬೆನ್ನತ್ತಿದ ಶ್ರೀಲಂಕಾ ತಂಡಕ್ಕೆ ಮಧ್ಯಮ ವೇಗಿ ತಿತಾಸ್ ಸಧು ತಾವು ಎಸೆದ ಮೊದಲ ಓವರ್‌ನಲ್ಲೇ ಎರಡು ವಿಕೆಟ್ ಕಬಳಿಸಿ ಡಬಲ್ ಶಾಕ್ ನೀಡಿದರು. ಇದಾದ ಬಳಿಕ ಮಧ್ಯಮ ಕ್ರಮಾಂಕದಲ್ಲಿ ಹಸಿನಿ ಪೆರೆರಾ(25), ನೀಲಾಕ್ಷಿ ಡಿ ಸಿಲ್ವಾ(23) ಹಾಗೂ ಒಶಾಡಿ ರಣಸಿಂಘೆ(19) ಭಾರತೀಯ ಬೌಲರ್‌ಗಳೆದುರು ಕೊಂಚ ಪ್ರತಿರೋಧ ತೋರಿದರಾದರೂ, ಭಾರತದ ಸಂಘಟಿತ ಪ್ರದರ್ಶಕ್ಕೆ ಲಂಕಾ ಕೊನೆಗೂ ತಲೆಬಾಗಿತು.
6,6,6,6..! ಸೂರ್ಯನ ಸಿಕ್ಸರ್ ಆರ್ಭಟಕ್ಕೆ ಕಾಂಗರೂ ಪಡೆ ಕಂಗಾಲು..! ಇಲ್ಲಿದೆ ಮತ್ತೆ ಮತ್ತೆ ನೋಡಬೇಕೆನಿಸುವ ಓವರ್
ಭಾರತ ತಂಡದ ಪರ ತಿತಾಸ್ ಸಧು 4 ಓವರ್ ಬೌಲಿಂಗ್ ಮಾಡಿ ಒಂದು ಮೇಡನ್ ಓವರ್ ಸಹಿತ ಕೇವಲ 6 ರನ್ ನೀಡಿ 3 ವಿಕೆಟ್ ಪಡೆದರು. ಇನ್ನುಳಿದಂತೆ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ ಎರಡು ವಿಕೆಟ್ ತಮ್ಮ ಖಾತೆಗೆ ಸೇರಿಸಿಕೊಂಡರು. ಇನ್ನು ದೇವಿಕಾ ವೈದ್ಯ, ಪೂಜಾ ವಸ್ತ್ರಾಕರ್ ಹಾಗೂ ದೀಪ್ತಿ ಶರ್ಮಾ ತಲಾ ಒಂದೊಂದು ವಿಕೆಟ್ ಕಬಳಿಸಿದರು.