ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ಫಿಟ್ ಆದ ಟೀಂ ಇಂಡಿಯಾ ದುಷ್ಮನ್; ರೋಹಿತ್ ಪಡೆಗೆ ಶುರುವಾಯ್ತು ಟೆನ್ಷನ್!

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯಕ್ಕೆ ಮೆಲ್ಬರ್ನ್ ಕ್ರಿಕೆಟ್ ಮೈದಾನ ಸಜ್ಜಾಗಿದೆ. ಡಿಸೆಂಬರ್ 26ರಂದು ಬೆಳಗ್ಗೆ 5 ಗಂಟೆಗೆ ಪಂದ್ಯ ಆರಂಭವಾಗಲಿದ್ದು, ಸರಣಿಯಲ್ಲಿ ಮುನ್ನಡೆ ಸಾಧಿಸಲು ಉಭಯ ತಂಡಗಳು ಹವಣಿಸುತ್ತಿವೆ. ಗಾಯಗೊಂಡಿದ್ದ ಟ್ರ್ಯಾವಿಸ್ ಹೆಡ್ ಫಿಟ್ ಆಗಿರುವುದು ಟೀಂ ಇಂಡಿಯಾ ತಲೆನೋವು ಹೆಚ್ಚಿಸಿದೆ.

Australia calls Travis Head fit announce playing XI for Boxing Day Test kvn

ಮೆಲ್ಬರ್ನ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಹಾಗೂ ಮಹತ್ವದ ಪಂದ್ಯಕ್ಕೆ ಇಲ್ಲಿನ ಮೆಲ್ಬರ್ನ್ ಕ್ರಿಕೆಟ್ ಮೈದಾನ ಆತಿಥ್ಯ ವಹಿಸಿದೆ. ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೆ ಉಭಯ ತಂಡಗಳು ಸಜ್ಜಾಗಿದ್ದು, ಡಿಸೆಂಬರ್ 26ರಂದು ಭಾರತೀಯ ಕಾಲಮಾನ ಬೆಳಗ್ಗೆ 5 ಗಂಟೆಗೆ ಹೈವೋಲ್ಟೇಜ್ ಟೆಸ್ಟ್ ಪಂದ್ಯ ಆರಂಭವಾಗಲಿದೆ. 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಮೂರು ಪಂದ್ಯಗಳು ಮುಕ್ತಾಯವಾಗಿದ್ದು, ಉಭಯ ತಂಡಗಳು ತಲಾ ಒಂದೊಂದು ಪಂದ್ಯದಲ್ಲ ಗೆಲುವಿನ ನಗೆ ಬೀರಿವೆ. ಗಾಬಾ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯವಾಗಿರುವುದರಿಂದ, ಇದೀಗ ಬಾಕ್ಸಿಂಗ್ ಡೇ ಟೆಸ್ಟ್ ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸಲು ಉಭಯ ತಂಡಗಳು ತುದಿಗಾಲಿನಲ್ಲಿ ನಿಂತಿವೆ.

ಭಾರತದ ದುಷ್ಮನ್ ಬಾಕ್ಸಿಂಗ್ ಡೇ ಗೆ ಫಿಟ್: 

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್‌ನಲ್ಲಿ ಸ್ಪೋಟಕ ಶತಕ ಸಿಡಿಸಿದ್ದ ಟ್ರ್ಯಾವಿಸ್ ಹೆಡ್ ಕೆಲಕಾಲ ಫಿಟ್ನೆಸ್ ಸಮಸ್ಯೆಯನ್ನು ಎದುರಿಸಿದ್ದರು. ಟ್ರ್ಯಾವಿಸ್ ಹೆಡ್ ಕೊಂಚ ಗಾಯಗೊಂಡಿದ್ದು, ನಾಲ್ಕನೇ ಟೆಸ್ಟ್ ಪಂದ್ಯ ಆಡುವುದು ಅನುಮಾನ ಎಂದೆಲ್ಲಾ ವರದಿಯಾಗಿತ್ತು. ಆದರೆ ಭಾರತವನ್ನು ಈ ಟೆಸ್ಟ್ ಸರಣಿಯಲ್ಲಿ ಇನ್ನಿಲ್ಲದಂತೆ ಕಾಡುತ್ತಿರುವ ಟ್ರ್ಯಾವಿಸ್ ಹೆಡ್ ಇದೀಗ ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯಕ್ಕೂ ಮುನ್ನ ಸಂಪೂರ್ಣ ಫಿಟ್‌ ಆಗಿದ್ದು, ಟೀಂ ಇಂಡಿಯಾ ತಲೆನೋವು ಹೆಚ್ಚುವಂತೆ ಮಾಡಿದ್ದಾರೆ.

ಬಾಕ್ಸಿಂಗ್ ಡೇ ಟೆಸ್ಟ್: ಆರಂಭಿಕನಾಗಿ ರೋಹಿತ್ ಕಣಕ್ಕೆ, ಇಬ್ಬರು ಸ್ಪಿನ್ನರ್‌ಗೆ ಟೀಂ ಇಂಡಿಯಾ ಮಣೆ?

ಎಡಗೈ ಸ್ಪೋಟಕ ಬ್ಯಾಟರ್ ಟ್ರ್ಯಾವಿಸ್ ಹೆಡ್ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ಮೊದಲ ಮೂರು ಪಂದ್ಯಗಳ ಬಳಿಕ ಸರಣಿಯಲ್ಲಿ ಗರಿಷ್ಠ ರನ್ ಬಾರಿಸಿದ ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ. ಕಳೆದ ಮೂರು ಪಂದ್ಯಗಳ 5 ಇನ್ನಿಂಗ್ಸ್‌ಗಳನ್ನಾಡಿ ಟ್ರ್ಯಾವಿಸ್ ಹೆಡ್ 81.80 ಬ್ಯಾಟಿಂಗ್ ಸರಾಸರಿಯಲ್ಲಿ 409 ರನ್ ಸಿಡಿಸಿದ್ದಾರೆ. ಇದರಲ್ಲಿ ಎರಡು ಶತಕ ಹಾಗೂ ಒಂದು ಆಕರ್ಷಕ ಅರ್ಧಶತಕವೂ ಸೇರಿದೆ. 

ಬಾಕ್ಸಿಂಗ್ ಡೇ ಟೆಸ್ಟ್ ಅಂದ್ರೇನು? ಇದಕ್ಕಿದೆ ಒಂದು ಶತಮಾನದ ದೀರ್ಘ ಇತಿಹಾಸ!

ಬಾಕ್ಸಿಂಗ್ ಡೇ ಟೆಸ್ಟ್‌ಗೆ ಆಸೀಸ್ ತಂಡದಲ್ಲಿ ಎರಡು ಬದಲಾವಣೆ:

ಗಾಬಾ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಆಸೀಸ್ ಅನುಭವಿ ವೇಗಿ ಗಾಯದ ಸಮಸ್ಯೆಯಿಂದಾಗಿ ಇನ್ನುಳಿದ ಎರಡೂ ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಹೀಗಾಗಿ ಹೇಜಲ್‌ವುಡ್ ಸ್ಥಾನಕ್ಕೆ ಮತ್ತೋರ್ವ ವೇಗಿ ಸ್ಕಾಟ್ ಬೋಲೆಂಡ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಆರಂಭಿಕ ಬ್ಯಾಟರ್ ನೇಥನ್ ಮೆಕ್‌ಸ್ವಾಮಿ ಪದೇ ಪದೇ ವೈಫಲ್ಯ ಅನುಭವಿಸಿದ್ದರಿಂದ ಅವರನ್ನು ಹೊರಗಿಟ್ಟು ಮತ್ತೋರ್ವ ಪ್ರತಿಭಾನ್ವಿತ ಯುವ ಬ್ಯಾಟರ್ ಸ್ಯಾಮ್ ಕೊನ್‌ಸ್ಟಾಸ್ ಅವರಿಗೆ ಮಣೆ ಹಾಕಲಾಗಿದೆ.

Latest Videos
Follow Us:
Download App:
  • android
  • ios