Asianet Suvarna News Asianet Suvarna News

ಭಾರತದ ಗೆಲುವಿನ ಕ್ಷಣವನ್ನು ಕ್ಯಾಮರಾದಲ್ಲಿ ಸೆರೆ ಹಿಡಿದ ಆಸೀಸ್ ನಾಯಕಿ..! ವಿಡಿಯೋ Viral

ಆಸ್ಟ್ರೇಲಿಯಾ ಎದುರು ಟೆಸ್ಟ್ ಪಂದ್ಯವನ್ನು ಗೆಲ್ಲುತ್ತಿದ್ದಂತೆಯೇ ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯರು ಸಂಭ್ರಮದಲ್ಲಿ ಕುಣಿದು ಕುಪ್ಪಳಿಸಿದರು. ಈ ಕ್ಷಣವನ್ನು ಆಸೀಸ್ ನಾಯಕಿ ನಿರ್ಭಾವುಕವಾಗಿ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದು, ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

Australia Captain Turns Photographer For Victorious Indian Womens Team Video goes viral kvn
Author
First Published Dec 24, 2023, 5:45 PM IST

ಮುಂಬೈ(ಡಿ.24): ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು ಇಲ್ಲಿನ ವಾಂಖೇಡೆ ಮೈದಾನದಲ್ಲಿ ಬಲಾಢ್ಯ ಆಸ್ಟ್ರೇಲಿಯಾ ಎದುರು ಟೆಸ್ಟ್ ಪಂದ್ಯವನ್ನು ಜಯಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಇದು ಆಸ್ಟ್ರೇಲಿಯಾ ಎದುರು ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಜಯಿಸಿದ ಚೊಚ್ಚಲ ಪಂದ್ಯ ಎನಿಸಿದೆ. 

ಅಲೀಸಾ ಹೀಲಿ ನೇತೃತ್ವದ ಆಸ್ಟ್ರೇಲಿಯಾ ತಂಡವು ಮತ್ತೊಮ್ಮೆ ಭಾರತ ಎದುರು ಟೆಸ್ಟ್ ಗೆಲುವು ಸಾಧಿಸುವ ನಿರೀಕ್ಷೆಯೊಂದಿಗೆ ಭಾರತ ಪ್ರವಾಸ ಕೈಗೊಂಡಿತ್ತು. ಆದರೆ ನಾಲ್ಕೂ ದಿನವೂ ಆಸೀಸ್ ಮೇಲೆ ಸವಾರಿ ಮಾಡಿದ ಭಾರತ ಮಹಿಳಾ ಕ್ರಿಕೆಟ್ ತಂಡವು ಚೊಚ್ಚಲ ಟೆಸ್ಟ್ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಯಿತು. ಇನ್ನು ಮೈದಾನದಲ್ಲಿ ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಹಾಗೂ ಆಸೀಸ್ ನಾಯಕಿ ಅಲಿಸಾ ಹೀಲಿ ನಡುವಿನ ದೃಷ್ಟಿಯುದ್ದಕ್ಕೂ ಈ ಪಂದ್ಯ ಸಾಕ್ಷಿಯಾಯಿತು. ಆದರೆ ಪಂದ್ಯ ಮುಕ್ತಾಯದ ಬಳಿಕ ಭಾರತ ಮಹಿಳಾ ಕ್ರಿಕೆಟ್ ತಂಡದ ಗೆಲುವಿನ ಕ್ಷಣವನ್ನು ಆಸೀಸ್ ನಾಯಕಿ ಕ್ಯಾಮರಾ ಕಣ್ಣುಗಳಲ್ಲಿ ಸೆರೆಹಿಡಿದ ಕ್ಷಣ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

ಋತುರಾಜ್ ಗಾಯಕ್ವಾಡ್‌ ಗಾಯಾಳುವಾಗಿದಕ್ಕೆ RCBಗೆ 30 ಲಕ್ಷ ನಷ್ಟ..! ಇಲ್ಲಿದೆ ಇಂಟ್ರೆಸ್ಟಿಂಗ್ ಕಹಾನಿ

ಭಾರತ ಮಹಿಳಾ ತಂಡವು ಕೊನೆಯ ದಿನ ಗೆಲ್ಲಲು ಕೇವಲ 75 ರನ್‌ಗಳ ಸಾಧಾರಣ ಗುರಿ ಪಡೆದಿತ್ತು. ಹರ್ಮನ್‌ಪ್ರೀತ್ ಕೌರ್ ಪಡೆ ಕೇವಲ 2 ವಿಕೆಟ್ ಕಳೆದುಕೊಂಡು ಗೆಲುವಿನ ಕೇಕೆ ಹಾಕುವಲ್ಲಿ ಯಶಸ್ವಿಯಾಯಿತು. ಭಾರತ ಮಹಿಳಾ ಕ್ರಿಕೆಟ್ ತಂಡವು ಕೆಲ ದಿನಗಳ ಹಿಂದಷ್ಟೇ ತವರಿನಲ್ಲಿ ಇಂಗ್ಲೆಂಡ್ ಎದುರು ಭರ್ಜರಿ ಗೆಲುವು ದಾಖಲಿಸಿ ಬೀಗಿತ್ತು. ಆದರೆ ಆಸೀಸ್ ಎದುರು ಟೆಸ್ಟ್ ಪಂದ್ಯ ಗೆಲ್ಲಲು ಭಾರತಕ್ಕೆ ಇದುವರೆಗೂ ಸಾಧ್ಯವಾಗಿರಲಿಲ್ಲ. ಈಗ ತವರಿನಲ್ಲಿ ಆಸೀಸ್ ಬಗ್ಗುಬಡಿಯಲು ಭಾರತ ಯಶಸ್ವಿಯಾಗಿದೆ.

ಆಸ್ಟ್ರೇಲಿಯಾ ಎದುರು ಟೆಸ್ಟ್ ಪಂದ್ಯವನ್ನು ಗೆಲ್ಲುತ್ತಿದ್ದಂತೆಯೇ ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯರು ಸಂಭ್ರಮದಲ್ಲಿ ಕುಣಿದು ಕುಪ್ಪಳಿಸಿದರು. ಈ ಕ್ಷಣವನ್ನು ಆಸೀಸ್ ನಾಯಕಿ ನಿರ್ಭಾವುಕವಾಗಿ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದು, ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

ಹಿಮ್ಮಡಿ ನೋವಿನಿಂದ ಬಳಲುತ್ತಿರುವ ಪಾಂಡ್ಯ: ಯಾರಾಗ್ತಾರೆ ಮುಂಬೈ ಇಂಡಿಯನ್ಸ್ ನಾಯಕ..?

ಹೀಗಿತ್ತು ನೋಡಿ ಆ ಕ್ಷಣ:

ಇನ್ನು ಪಂದ್ಯ ಮುಕ್ತಾಯದ ಬಳಿಕ ಮಾತನಾಡಿದ ಆಸೀಸ್ ನಾಯಕಿ ಅಲಿಸಾ ಹೀಲಿ, ಭವಿಷ್ಯದಲ್ಲಿ ಇನ್ನಷ್ಟು ಟೆಸ್ಟ್ ಪಂದ್ಯಗಳು ಆಯೋಜನೆಗೊಂಡರೆ ಚೆನ್ನಾಗಿರುತ್ತದೆ ಎಂದು ಹೇಳಿದರು. 

Follow Us:
Download App:
  • android
  • ios