ವಿರಾಟ್ ಕೊಹ್ಲಿಯನ್ನು ಕೆಣಕಬೇಡಿ ಎಚ್ಚರವೆಂದ ಆ್ಯರೋನ್ ಫಿಂಚ್
ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಕೆಣಕಬೇಡಿ ಎಂದು ಆಸ್ಟ್ರೇಲಿಯಾ ಸೀಮಿತ ಓವರ್‌ಗಳ ತಂಡದ ನಾಯಕ ಆ್ಯರೋನ್ ಫಿಂಚ್ ಎಚ್ಚರಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ಸಿಡ್ನಿ(ಡಿ.14): ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಕೌಂಟ್‌ಡೌನ್ ಶುರುವಾಗಿದೆ. ಡಿಸೆಂಬರ್ 17ರಂದು ಅಡಿಲೇಡ್‌ನಲ್ಲಿ ನಡೆಯಲಿರುವ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬಗ್ಗೆ ಎಚ್ಚರಿಕೆಯಿಂದಿರಬೇಕು ಆಸ್ಟ್ರೇಲಿಯಾ ತಂಡದ ಸೀಮಿತ ಓವರ್‌ಗಳ ತಂಡದ ನಾಯಕ ಆ್ಯರೋನ್ ಫಿಂಚ್ ಹೇಳಿದ್ದಾರೆ.
ವಿರಾಟ್ ಕೊಹ್ಲಿ ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯದ ಬಳಿಕ ತವರಿಗೆ ಮರಳಲಿದ್ದಾರೆ. ಮೊದಲ ಪಂದ್ಯ ಮುಗಿದ ಬಳಿಕ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿರುವ ವಿರಾಟ್ ಕೊಹ್ಲಿ ಪಿತೃತ್ವದ ರಜೆಯ ಮೇರೆಗೆ ತವರಿಗೆ ಮರಳಲಿದ್ದಾರೆ.
ವಿರಾಟ್ ಕೊಹ್ಲಿಯನ್ನು ಟೆಸ್ಟ್ ಪಂದ್ಯದಲ್ಲಿ ಕೆಣಕಲು ಹೋಗಬೇಡಿ. ಒಂದು ವೇಳೆ ಕೆಣಕಿದರೆ ಎದುರಾಳಿ ತಂಡ ಯಾರೆಂದು ಯೋಚಿಸದೇ ನಿರ್ದಯವಾಗಿ ದಂಡಿಸಲಿದ್ದಾರೆ ಎಂದು ಆ್ಯರೋನ್ ಫಿಂಚ್ ತಮ್ಮ ತಂಡದ ಆಟಗಾರರು ಎಚ್ಚರಿಸಿದ್ದಾರೆ.
ಅಡಿಲೇಡ್ ಟೆಸ್ಟ್‌ಗೆ ಮತ್ತೋರ್ವ ಆಸೀಸ್ ಆಲ್ರೌಂಡರ್ ಸೇರ್ಪಡೆ
ಈ ಹಿಂದಿನ ಹಲವು ವರ್ಷಗಳಲ್ಲಿ ಭಾರತ-ಆಸ್ಟ್ರೇಲಿಯಾ ನಡುವಿನ ಪಂದ್ಯ ಸಾಕಷ್ಟು ಪೈಪೋಟಿಯುತ ಪಂದ್ಯಕ್ಕೆ ಸಾಕ್ಷಿಯಾಗಿತ್ತು. ಮಾತಿನ ಚಕಮಕಿ, ಸ್ಲೆಡ್ಜಿಂಗ್‌ಗಳು ಸಾಮಾನ್ಯ ಎನ್ನುವಷ್ಟರ ಮಟ್ಟಿಗೆ ನಡೆದಿವೆ. ಹೀಗಾಗಿ ಈ ಹಿಂದೆ ವಿರಾಟ್ ಕೊಹ್ಲಿ ಜತೆ ಒಡೆನಾಟ ಹೊಂದಿರುವ ಆರ್‌ಸಿಬಿ ಕ್ರಿಕೆಟಿಗ ಆ್ಯರೋನ್ ಫಿಂಚ್ ಕಾಂಗರೂ ಪಡೆಯನ್ನು ಎಚ್ಚರಿಸಿದ್ದಾರೆ.
2018-19ನೇ ಸಾಲಿನಲ್ಲಿ ಉಭಯ ತಂಡದ ನಾಯಕರಾದ ವಿರಾಟ್ ಕೊಹ್ಲಿ ಹಾಗೂ ಟಿಮ್ ಪೈನೆ ನಡುವಿನ ಮಾತಿನ ಚಕಮಕಿ ನಡೆದಿತ್ತು. ಆ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಲ್ಲಿ ಜಯಿಸುವ ಮೂಲಕ ವಿರಾಟ್ ಪಡೆ ಚಾರಿತ್ರಿಕ ಸಾಧನೆ ಮಾಡಿತ್ತು.