ಬೆಂಗಳೂರು(ಸೆ.15): ಆಸ್ಟ್ರೇಲಿಯಾ ತಂಡದ ಲೆಗ್‌ ಸ್ಪಿನ್ನರ್ ಆಡಂ ಜಂಪಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡಿಕೊಳ್ಳಲು ತುದಿಗಾಲಿನಲ್ಲಿ ನಿಂತಿರುವುದಾಗಿ ತಿಳಿಸಿದ್ದಾರೆ.

ಪ್ರಸ್ತುತ ಇಂಗ್ಲೆಂಡ್ ವಿರುದ್ಧ ಅಮೋಘ ಪ್ರದರ್ಶನ ತೋರುತ್ತಿರುವ ಜಂಪಾ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಲೆಗ್‌ಸ್ಪಿನ್ನರ್ ಯುಜುವೇಂದ್ರ ಚಹಲ್ ಜತೆಗೂಡಿ ವಿಕೆಟ್ ಕಬಳಿಸಲು ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ.

ನಾನು ಐಪಿಎಲ್ ಆಡಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಉತ್ತಮ ಅವಕಾಶ ಮಾಡಿಕೊಟ್ಟಿದೆ. ಆರ್‌ಸಿಬಿ ತಂಡಕ್ಕೆ ಅಗತ್ಯವಿದ್ದಾಗ ಕೊನೆಯ ಓವರ್‌ಗಳನ್ನು ಬೌಲಿಂಗ್ ಮಾಡಲು ತಾವು ಸಿದ್ದವಿರುವುದಾಗಿ ಇಎಸ್‌ಪಿಎನ್‌ಗೆ ತಿಳಿಸಿದ್ದಾರೆ.

ಮಗಳನ್ನು ನೋಡದೆ ತುಂಬಾ ದಿನಗಳಾಗಿದೆ; ಭಾವುಕರಾದ ಮೊಹಮ್ಮದ್ ಶಮಿ!

ನಾನು ಚಹಲ್ ಸೇರಿ ಅನುಭವವನ್ನು ಹಂಚಿಕೊಳ್ಳಲು ಎದುರು ನೋಡುತ್ತಿದ್ದೇವೆ. ಇದರ ಜತೆಗೆ ಬ್ಯಾಟಿಂಗ್ ದಿಗ್ಗಜರಾದ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಅವರ ಆಟವನ್ನು ತುಂಬಾ ಹತ್ತಿರದಿಂದ ನೋಡಲು ಉತ್ಸುಕನಾಗಿದ್ದೇನೆ ಎಂದು ಜಂಪಾ ತಿಳಿಸಿದ್ದಾರೆ.

ಕೇನ್‌ ರಿಚರ್ಡ್‌ಸನ್ ವೈಯುಕ್ತಿಕ ಕಾರಣದಿಂದ ಹಿಂದೆ ಸರಿದಿದ್ದರಿಂದ ಆಡಂ ಜಂಪಾ ಅವರನ್ನು ಆರ್‌ಸಿಬಿ ತನ್ನ ತೆಕ್ಕೆಗೆ ಸೆಳೆದುಕೊಂಡಿದೆ. ಐಪಿಎಲ್ ಆಟಗಾರರ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 4 ಕೋಟಿ ರುಪಾಯಿ ನೀಡಿ ಕೇನ್ ರಿಚರ್ಡ್‌ಸನ್ ಅವರನ್ನು ಖರೀದಿಸಿತ್ತು.

IPL 2020: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಂಪೂರ್ಣ ವೇಳಾಪಟ್ಟಿ!