ಮೆಲ್ಬರ್ನ್(ಏ.24)‌: ಅಕ್ಟೋಬರ್ 18ರಿಂದ ನವೆಂಬರ್15ರವರೆಗೆ ಆಸ್ಪ್ರೇಲಿಯಾದಲ್ಲಿ ನಡೆಯಬೇಕಿರುವ ಟಿ20 ವಿಶ್ವಕಪ್‌ ಟೂರ್ನಿ ಕೊರೋನಾದಿಂದಾಗಿ 3 ತಿಂಗಳು ಮುಂದೂಡಿಕೆಯಾಗುವ ಸಾಧ್ಯತೆಯಿದೆ ಎಂದು ಆಸ್ಪ್ರೇಲಿಯಾದ ಆರಂಭಿಕ ಬ್ಯಾಟ್ಸ್‌ಮನ್‌ ಆ್ಯರೋನ್‌ ಫಿಂಚ್‌ ಹೇಳಿದ್ದಾರೆ. 

ಕೊರೋನಾದಿಂದಾಗಿ ಜಗತ್ತಿನಾದ್ಯಂತ ಎಲ್ಲಾ ಕ್ರೀಡಾ ಚಟುವಟಿಕೆಗಳು ಸ್ಥಗಿತಗೊಂಡಿವೆ. ಟಿ20 ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯು 1, 2 ಅಥವಾ 3 ತಿಂಗಳು ಮುಂದೂಡಿಕೆಯಾಗುವ ಸಾಧ್ಯತೆಯಿದೆ ಎಂದಿದ್ದಾರೆ. ಇತ್ತೀಚೆಗಷ್ಟೇ ನ್ಯೂಜಿಲೆಂಡ್‌ ವಿರುದ್ಧ 1 ಏಕದಿನ ಪಂದ್ಯವನ್ನು ಕ್ರೀಡಾಂಗಣದಲ್ಲಿ ಪ್ರೇಕ್ಷಕರಿಲ್ಲದೇ ಆಡಿದ್ದೇವೆ. ನಿಜಕ್ಕೂ ಈ ಪಂದ್ಯ ವಿಚಿತ್ರ ಅನುಭವ ನೀಡಿತ್ತು. ಪ್ರೇಕ್ಷಕರಿಲ್ಲದೇ ಪಂದ್ಯ ಆಡುವುದು ಕಷ್ಟ ಎಂದು ಫಿಂಚ್‌ ಹೇಳಿದ್ದಾರೆ.

ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ದೀರ್ಘಕಾಲಿಕ ದ್ವಿಪಕ್ಷೀಯ ಸರಣಿಯನ್ನಾಡಲಿದೆ. ಈ ವೇಳೆ ನಡೆಯಲಿರುವ ಟೆಸ್ಟ್ ಸರಣಿ ಸಾಕಷ್ಟು ರೋಚಕತೆಯನ್ನು ಹುಟ್ಟುಹಾಕಿದೆ. ಕಳೆದ ಬಾರಿ ಭಾರತ ತಂಡವು ಆಸೀಸ್ ಪ್ರವಾಸ ಕೈಗೊಂಡಿದ್ದಾಗ ಟೆಸ್ಟ್ ಸರಣಿ ಗೆದ್ದು ಐತಿಹಾಸಿಕ ಸಾಧನೆ ಮಾಡಿತ್ತು. 7 ದಶಕಗಳ ಬಳಿಕ ಟೀಂ ಇಂಡಿಯಾ ಮೊಟ್ಟಮೊದಲ ಬಾರಿಗೆ ಆಸೀಸ್ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದು ಬೀಗಿತ್ತು.

ಆಸೀಸ್‌ ಕ್ರಿಕೆಟ್‌ ಟೀಂಗೆ ಮತ್ತೆ ಸ್ಟೀವ್ ಸ್ಮಿತ್‌ ನಾಯಕ?

ಆಸೀಸ್ ವೇಗಿ ಜೋಸ್ ಹ್ಯಾಜಲ್‌ವುಡ್, ಭಾರತ-ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೂರ್ನಿಯನ್ನು ಒಂದೇ ಮೈದಾನದಲ್ಲಿ ನಡೆಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದರು. ಮುಂದುವರೆದು ಈ ಟೂರ್ನಿ ಅಡಿಲೇಡ್ ಓವಲ್‌ನಲ್ಲಿ ನಡೆಸಬಹುದು ಎಂದು ಹೇಳಿದ್ದರು.