ಮೆಲ್ಬರ್ನ್(ಜ.03)‌: ಆಸ್ಪ್ರೇಲಿಯಾದ ತಾರಾ ಆರಂಭಿಕ ಬ್ಯಾಟ್ಸ್‌ಮನ್‌ ಡೇವಿಡ್‌ ವಾರ್ನರ್‌ 3ನೇ ಟೆಸ್ಟ್‌ನಲ್ಲಿ ಆಡುವುದು ಅನುಮಾನವೆನಿಸಿದೆ. ಈ ವಿಚಾರವನ್ನು ಸ್ವತಃ ಅವರೇ ಹೇಳಿಕೊಂಡಿದ್ದಾರೆ. 

ಶನಿವಾರ ಪತ್ರಿಕಾಗೋಷ್ಠಿ ವೇಳೆ ಮಾತನಾಡಿದ ವಾರ್ನರ್‌, ‘ಕಳೆದ 2-3 ದಿನಗಳಲ್ಲಿ ನಾನು ಅಭ್ಯಾಸ ನಡೆಸಿಲ್ಲ. ಶನಿವಾರ ಹಾಗೂ ಭಾನುವಾರ ಅಭ್ಯಾಸದಲ್ಲಿ ಪಾಲ್ಗೊಳ್ಳಲಿದ್ದು, ನಾನು ಫಿಟ್‌ ಆಗಿದ್ದೇನಾ ಇಲ್ಲವಾ ಎನ್ನುವುದನ್ನು ತಿಳಿದುಕೊಳ್ಳಲಿದ್ದೇನೆ. ನನ್ನ ಪ್ರಕಾರ ನಾನು ಇನ್ನೂ ಸಂಪೂರ್ಣ ಫಿಟ್‌ ಆಗಿಲ್ಲ. ಆದರೆ ಆಯ್ಕೆಗಾರರು, ತಂಡದ ಆಡಳಿತ ನಾನು ಆಡಲು ಹಸಿರು ನಿಶಾನೆ ತೋರಿದರೆ, ಶೇ.100ರಷ್ಟು ಫಿಟ್‌ ಇಲ್ಲದಿದ್ದರೂ ಕಣಕ್ಕಿಳಿಯುತ್ತೇನೆ’ಎಂದಿದ್ದಾರೆ.

ಡೇವಿಡ್‌ ವಾರ್ನರ್ ಭಾರತ ವಿರುದ್ದದ ಎರಡನೇ ಏಕದಿನ ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿದ್ದರು. ಇದಾದ ಬಳಿಕ ಆಸೀಸ್‌ ಎಡಗೈ ಆರಂಭಿಕ ಬ್ಯಾಟ್ಸ್‌ಮನ್‌ ಟಿ20 ಸರಣಿ ಹಾಗೂ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದರು. ಇನ್ನು ಜನವರಿ 07ರಿಂದ ಸಿಡ್ನಿ ಕ್ರಿಕೆಟ್‌ ಮೈದಾನದಲ್ಲಿ ಆರಂಭವಾಗಲಿರುವ ಮೂರನೇ ಟೆಸ್ಟ್‌ ಪಂದ್ಯಕ್ಕೆ ವಾರ್ನರ್ ತಂಡ ಕೂಡಿಕೊಂಡಿದ್ದಾರೆ.

ಸಿಡ್ನಿ ಟೆಸ್ಟ್‌ಗೂ ಮುನ್ನ ಟೀಂ ಇಂಡಿಯಾಗೆ ಎಂಟ್ರಿ ಕೊಟ್ಟ ಮಾರಕ ವೇಗಿ..!

ಬಾರ್ಡರ್‌-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಟೆಸ್ಟ್‌ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದುಕೊಂಡು ಸರಣಿಯಲ್ಲಿ ಶುಭಾರಂಭ ಮಾಡಿತ್ತು. ಇನ್ನು ಮೆಲ್ಬರ್ನ್‌ನಲ್ಲಿ ನಡೆದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಅಜಿಂಕ್ಯ ರಹಾನೆ ನೇತೃತ್ವದ ಟೀಂ ಇಂಡಿಯಾ ಬಲಿಷ್ಠ ಆಸ್ಟ್ರೇಲಿಯಾ ತಂಡಕ್ಕೆ ತಿರುಗೇಟು ನೀಡುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿದೆ. ಹೀಗಾಗಿ ಮೂರನೇ ಟೆಸ್ಟ್ ಪಂದ್ಯದಲ್ಲಿ ಯಾರ ಕೈ ಮೇಲಾಗಲಿದೆ ಎನ್ನುವ ಕುತೂಹಲ ಜೋರಾಗಿದೆ.