ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದಿಂದ ಆತಿಥೇಯ ಆಸ್ಟ್ರೇಲಿಯಾ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಹೊರಬಿದ್ದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ಅಡಿಲೇಡ್(ಡಿ.09): ಟಿ20 ಸೋಲಿನ ಶಾಕ್‌ನಿಂದ ಹೊರಬರುವ ಮುನ್ನವೇ ಆತಿಥೇಯ ಆಸ್ಟ್ರೇಲಿಯಾ ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು, ಆಸ್ಟ್ರೇಲಿಯಾ ತಂಡದ ಸ್ಪೋಟಕ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದ ಹೊರಬಿದ್ದಿದ್ದಾರೆ.
ಕ್ರಿಕೆಟ್ ಆಸ್ಟ್ರೇಲಿಯಾ ಈ ವಿಚಾರವನ್ನು ಖಚಿತಪಡಿಸಿದ್ದು, ಸ್ನಾಯು ಸೆಳೆತದಿಂದ ಬಳಲುತ್ತಿರುವ ಡೇವಿಡ್ ವಾರ್ನರ್ ಅಡಿಲೇಡ್‌ನಲ್ಲಿ ಡಿಸೆಂಬರ್ 17ರಿಂದ ಅಡಿಲೇಡ್‌ನಲ್ಲಿ ಆರಂಭವಾಗಲಿರುವ ಡೇ ಅಂಡ್ ನೈಟ್ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ.
ಎರಡನೇ ಏಕದಿನ ಪಂದ್ಯದ ವೇಳೆ ಕ್ಷೇತ್ರರಕ್ಷಣೆ ಮಾಡುವಾಗ ವಾರ್ನರ್ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಡೇವಿಡ್ ವಾರ್ನರ್ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ತಂಡ ಕೊನೆಯ ಏಕದಿನ ಪಂದ್ಯ ಹಾಗೂ 2 ಪಂದ್ಯಗಳಲ್ಲಿ ಸೋಲಿನ ಕಹಿಯುಂಡಿತ್ತು. ಆಸ್ಟ್ರೇಲಿಯಾ ಏಕದಿನ ಸರಣಿ ಗೆಲುವಿನಲ್ಲಿ ಡೇವಿಡ್ ವಾರ್ನರ್ ಮಹತ್ವದ ಪಾತ್ರ ನಿಭಾಯಿಸಿದ್ದರು.
ಡೇವಿಡ್ ವಾರ್ನರ್ ಸದ್ಯ ಸಿಡ್ನಿಯಲ್ಲೇ ತಜ್ಞ ವೈದ್ಯರ ಬಳಿ ಚಿಕಿತ್ಸೆ ಪಡೆಯಲಿದ್ದಾರೆ. ಇನ್ನು ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ಸಿಡ್ನಿಯಿಂದ ಅಡಿಲೇಡ್‌ನತ್ತ ಬುಧವಾರ ಪ್ರಯಾಣ ಬೆಳೆಸಲಿದ್ದು, ವಾರ್ನರ್ ಸಿಡ್ನಿಯಲ್ಲೇ ಉಳಿದುಕೊಳ್ಳಲಿದ್ದಾರೆ. ಡೇವಿಡ್ ವಾರ್ನರ್ ಇನ್ನೂ 10 ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಮೊದಲ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಹಾಗೂ ಆಸ್ಟ್ರೆಲಿಯಾ ತಂಡಗಳು ಡಿಸೆಂಬರ್ 11ರಿಂದ ಮೂರು ಪಂದ್ಯಗಳ ಅಭ್ಯಾಸ ಪಂದ್ಯವನ್ನಾಡಲಿದೆ.
ಸರಣಿ ಶ್ರೇಷ್ಠ ಟ್ರೋಫಿಯನ್ನು ನಟರಾಜನ್‌ಗೆ ಕೊಟ್ಟ ಹಾರ್ದಿಕ್ ಪಾಂಡ್ಯ..!
ಮೆಲ್ಬರ್ನ್‌ನಲ್ಲಿ ನಡೆಯಲಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ವೇಳೆ ಡೇವಿಡ್ ವಾರ್ನರ್ ಸಂಪೂರ್ಣ ಫಿಟ್ ಆಗುವ ವಿಶ್ವಾಸವನ್ನು ಆಸ್ಟ್ರೇಲಿಯಾ ಮುಖ್ಯ ಕೋಚ್ ಜಸ್ಟಿನ್ ಲ್ಯಾಂಗರ್ ವ್ಯಕ್ತಪಡಿಸಿದ್ದಾರೆ. ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ಡಿಸೆಂಬರ್ 26ರಿಂದ ಆರಂಭವಾಗಲಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Dec 9, 2020, 11:37 AM IST