ಮೆಲ್ಬರ್ನ್[ಡಿ.29]: ಆಸ್ಟ್ರೇಲಿಯಾದ ಮಾರಕ ವೇಗಿ ಪೀಟರ್ ಸಿಡ್ಲ್ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ವಿದಾಯ ಹೇಳಿದ್ದಾರೆ. ಇದರೊಂದಿಗೆ 11 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ಸಿಡ್ಲ್ ತೆರೆ ಎಳೆದಿದ್ದಾರೆ.

35 ವರ್ಷದ ಸಿಡ್ಲ್ ಆಸ್ಟ್ರೇಲಿಯಾ ಪರ 67 ಟೆಸ್ಟ್, 20 ಏಕದಿನ ಹಾಗೂ 2 ಟಿ20 ಪಂದ್ಯಗಳನ್ನಾಡಿದ್ದಾರೆ. ಇದೇ ವರ್ಷ ನಡೆದ ಇಂಗ್ಲೆಂಡ್ ವಿರುದ್ಧದ ಆ್ಯಷಸ್ ಸರಣಿಯ ಅಂತಿಮ ಪಂದ್ಯದಲ್ಲಿ ಸಿಡ್ಲ್, ಕಡೆಯ ಬಾರಿಗೆ ಆಸ್ಟ್ರೇಲಿಯಾ ತಂಡದ ಪರ ಕಣಕ್ಕಿಳಿದಿದ್ದರು.

ಕ್ರಿಕೆಟ್‌ಗೆ CSK ಮಾಜಿ ಸ್ಪಿನ್ನರ್‌ ಶದಾಬ್‌ ಜಕಾತಿ ನಿವೃತ್ತಿ

ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗದ ಬೆನ್ನಲ್ಲೇ ಸಿಡ್ಲ್ ನಿವೃತ್ತಿಯ ನಿರ್ಧಾರ ತಳೆದಿದ್ದಾರೆ. ಸಿಡ್ಲ್ 67 ಟೆಸ್ಟ್ ಪಂದ್ಯಗಳಿಂದ 221 ವಿಕೆಟ್ ಕಬಳಿಸಿದ್ದು, ಆಸೀಸ್ ಪರ ಗರಿಷ್ಠ ವಿಕೆಟ್ ಪಡೆದ ಬೌಲರ್’ಗಳ ಪಟ್ಟಿಯಲ್ಲಿ 13ನೇ ಸ್ಥಾನ ಪಡೆದಿದ್ದಾರೆ. ಇನ್ನು 2010ರಲ್ಲಿ ತಮ್ಮ 26ನೇ ಹುಟ್ಟುಹಬ್ಬದ ದಿನದಂದೇ ಇಂಗ್ಲೆಂಡ್ ವಿರುದ್ಧ ಬ್ರಿಸ್ಬೇನ್’ನಲ್ಲಿ ನಡೆದ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸುವ ಮೂಲಕ ಸ್ಮರಣೀಯವಾಗಿಸಿಕೊಂಡಿದ್ದರು. 

ಪೀಟರ್ ಸಿಡ್ಲ್ ಆಸ್ಟ್ರೇಲಿಯಾ ಪರ 20 ಏಕದಿನ ಹಾಗೂ 2 ಟಿ20 ಪಂದ್ಯಗಳನ್ನಾಡಿದ್ದಾರೆ. ಸಿಡ್ಲ್ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ವಿದಾಯ ಹೇಳಿದ್ದರೂ, ದೇಸಿ ಕ್ರಿಕೆಟ್’ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಬಿಗ್ ಬ್ಯಾಷ್ ಲೀಗ್ ಟೂರ್ನಿಯಲ್ಲಿ ಸಿಡ್ಲ್ ಅಡಿಲೇಡ್ ಸ್ಟ್ರೈಕರ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇನ್ನು ಶೆಫೀಲ್ಡ್ ಶೀಲ್ಡ್ ಟೂರ್ನಿಯಲ್ಲಿ ವಿಕ್ಟೋರಿಯಾ ತಂಡದ ಪರ ಕಣಕ್ಕಿಳಿಯಲಿದ್ದಾರೆ.