ಭಾರತ ಎದುರಿನ ಟೆಸ್ಟ್‌ ಸರಣಿಗೆ ಬಲಿಷ್ಠ ಬಾಂಗ್ಲಾದೇಶ ಕ್ರಿಕೆಟ್ ತಂಡ ಪ್ರಕಟ!

ಭಾರತ ಎದುರಿನ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಬಾಂಗ್ಲಾದೇಶ ಕ್ರಿಕೆಟ್ ತಂಡ ಪ್ರಕಟವಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ

Bangladesh Announce Test Squad for India tour Najmul Hossain Shanto lead the squad kvn

ಢಾಕಾ: ಭಾರತ ವಿರುದ್ಧ 2 ಪಂದ್ಯಗಳ ಟೆಸ್ಟ್‌ ಸರಣಿಗೆ ಬಾಂಗ್ಲಾದೇಶ ತಂಡ ಪ್ರಕಟಗೊಂಡಿದೆ. ನಜ್ಮುಲ್‌ ಹೊಸೈನ್‌ ಶಾಂಟೊ ತಂಡದ ನಾಯಕತ್ವ ವಹಿಸಲಿದ್ದಾರೆ. ಗಾಯಾಳು ವೇಗಿ ಶೊರೀಫುಲ್‌ ಇಸ್ಲಾಂ ಬದಲು ಜಾಕರ್‌ ಅಲಿ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಉಳಿದಂತೆ ಇತ್ತೀಚೆಗೆ ಪಾಕಿಸ್ತಾನ ವಿರುದ್ಧ ಆಡಿದ್ದ ಆಟಗಾರರೇ ತಂಡದಲ್ಲಿದ್ದಾರೆ. 23 ವರ್ಷದ ಶೊರೀಫುಲ್ ಇಸ್ಲಾಂ, ಪಾಕಿಸ್ತಾನ ಎದುರಿನ ರಾವಲ್ಪಿಂಡಿ ಟೆಸ್ಟ್‌ನಲ್ಲಿ 3 ವಿಕೆಟ್ ಕಬಳಿಸಿ ಮಿಂಚಿದ್ದರು, ಆದರೆ ಗಾಯದ ಸಮಸ್ಯೆಯಿಂದಾಗಿ ಪಾಕ್ ಎದುರಿನ ಎರಡನೇ ಟೆಸ್ಟ್‌ನಿಂದ ಹೊರಗುಳಿದಿದ್ದರು. 

ಹಿರಿಯ ಆಟಗಾರರಾದ ಲಿಟನ್‌ ದಾಸ್‌, ಶಕೀಬ್‌ ಅಲ್‌ ಹಸನ್‌, ಮುಷ್ಫಿಕುರ್‌ ರಹೀಂ ತಂಡದಲ್ಲಿರುವ ಪ್ರಮುಖರು. ತಸ್ಕೀನ್‌ ಅಹ್ಮದ್‌, ಮೆಹಿದಿ ಹಸನ್‌ ಕೂಡಾ ತಂಡದಲ್ಲಿದ್ದಾರೆ. ಸೆ.19ರಿಂದ ಮೊದಲ ಟೆಸ್ಟ್‌ ಆರಂಭಗೊಳ್ಳಲಿದ್ದು, ಚೆನ್ನೈ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಬಳಿಕ 2ನೇ ಟೆಸ್ಟ್ ಸೆ.27ರಿಂದ ಕಾನ್ಪುರದಲ್ಲಿ ನಡೆಯಲಿದೆ.

ಬಾಂಗ್ಲಾದೇಶ ಎದುರಿನ ಮೊದಲ ಟೆಸ್ಟ್‌ಗೆ ಬಲಿಷ್ಠ ಟೀಂ ಇಂಡಿಯಾ ಪ್ರಕಟ: ಎರಡು ಯುವ ವೇಗಿಗಳಿಗೆ ಸ್ಥಾನ

ಭಾರತ-ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್‌ ಪಂದ್ಯವು ಸೆಪ್ಟೆಂಬರ್ 19ರಿಂದ ಚೆನ್ನೈನಲ್ಲಿ ಆರಂಭವಾದರೆ, ಎರಡನೇ ಟೆಸ್ಟ್ ಪಂದ್ಯವು ಸೆಪ್ಟೆಂಬರ್‌ 27ರಿಂದ ಕಾನ್ಪುರದಲ್ಲಿ ನಡೆಯಲಿದೆ. ಉಭಯ ತಂಡಗಳು ಇದುವರೆಗೂ 13 ಟೆಸ್ಟ್‌ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ಪೈಕಿ ಭಾರತ 11 ಪಂದ್ಯಗಳನ್ನು ಜಯಿಸಿದರೆ, ಎರಡು ಪಂದ್ಯಗಳು ಡ್ರಾನಲ್ಲಿ ಅಂತ್ಯವಾಗಿವೆ. 

ಭಾರತ ಎದುರಿನ ಟೆಸ್ಟ್ ಸರಣಿಗೆ ಬಾಂಗ್ಲಾದೇಶ ತಂಡ ಹೀಗಿದೆ ನೋಡಿ:

ನಜ್ಮುಲ್ ಹೊಸೈನ್ ಶಾಂಟೋ(ನಾಯಕ), ಮೊಹಮದುಲ್ಲಾ ಹಸನ್ ಜಾಯ್, ಝಾಕಿರ್ ಹಸನ್, ಶಾದಮನ್ ಇಸ್ಲಾಂ, ಮೊಮಿನುಲ್ ಹಕ್, ಮುಷ್ಫಿಕುರ್ ರಹೀಂ, ಶಕೀಬ್ ಅಲ್ ಹಸನ್, , ಲಿಟನ್ ದಾಸ್, ಮೆಹದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ನಯೀಂ ಹಸನ್, ನಾಹಿದ್ ಹಸನ್, ಹಸನ್ ಮೊಹಮದ್, ಟಸ್ಕಿನ್ ಅಹಮದ್, ಸಯೀದ್ ಖಾಲೀದ್ ಅಹಮದ್, ಝಕರ್ ಅಲಿ ಅನಿಕ್.

ಬಾಂಗ್ಲಾದೇಶ ಎದುರಿನ ಮೊದಲ ಟೆಸ್ಟ್‌ಗೆ ಭಾರತ ತಂಡ ಹೀಗಿದೆ:  

ರೋಹಿತ್ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್, ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್(ವಿಕೆಟ್ ಕೀಪರ್), ಧೃವ್ ಜುರೆಲ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಯಶ್‌ ದಯಾಲ್.

Latest Videos
Follow Us:
Download App:
  • android
  • ios