ಪ್ರತಿಭಟನೆ ನಿಲ್ಲಿಸಿದ ಬಾಂಗ್ಲಾದೇಶಕ್ಕೆ ಮತ್ತೊಂದು ಶಾಕ್!

ವಿವಿದ ಬೇಡಿಕೆಗಳನ್ನು ಮುಂದಿಟ್ಟು, ಭಾರತ ಪ್ರವಾಸಕ್ಕೂ ಮೊದಲು ಪ್ರತಿಭಟನೆ ನಡೆಸಿದ್ದ ಬಾಂಗ್ಲಾದೇಶಕ್ಕೆ ಮತ್ತೊಂದು ಹೊಡೆತ ಬಿದ್ದಿದೆ. ಪ್ರತಿಭಟನೆ ಕೈಬಿಟ್ಟ ಬೆನ್ನಲ್ಲೇ ಬಾಂಗ್ಲಾ ತಂಡಕ್ಕೆ ಹಿನ್ನಡೆಯಾಗಿದೆ. 

Bangladesh cricketer mohammad saifuddin ruled out from India series

ಢಾಕ(ಅ.24): ವೇತನ ವಿಚಾರದಲ್ಲಿ ಕ್ರಿಕೆಟ್ ಮಂಡಳಿ ವಿರುದ್ಧ ಪ್ರತಿಭಟನೆ ಕೈಗೊಂಡಿದ್ದ ಬಾಂಗ್ಲಾದೇಶ ಕ್ರಿಕೆಟಿಗರು ಪ್ರತಿಭಟನೆ ನಿಲ್ಲಿಸಿದ್ದಾರೆ. ಮಂಡಳಿ ಭರವಸೆ ನೀಡಿದ ಹಿನ್ನಲೆಯಲ್ಲಿ ಪ್ರತಿಭಟನೆ ಹಿಂತೆಗೆದುಕೊಂಡಿದ್ದಾರೆ. ಇದರಿಂದ ಭಾರತದ ವಿರುದ್ದದ ಸರಣಿ ಯಾವುದೇ ಆತಂಕವಿಲ್ಲದೆ ನಡೆಯಲಿದೆ. ಆದರೆ ಸರಣಿ ಸಜ್ಜಾದ ಬಾಂಗ್ಲಾಗೆ ಮತ್ತೊಂದು ಹೊಡೆತ ಬಿದ್ದಿದೆ.

ಇದನ್ನೂ ಓದಿ: ಬಾಂಗ್ಲಾ ಸರಣಿಗೆ ಟೀಂ ಇಂಡಿಯಾ ಪ್ರಕಟ: ಮೂವರು ಕನ್ನಡಿಗರಿಗೆ ಸ್ಥಾನ

ಭಾರತ ವಿರುದ್ದ 3 ಟಿ20 ಸರಣಿಗೆ ಬಾಂಗ್ಲಾದೇಶದ ಮೊಹಮ್ಮದ್ ಸೈಫುದ್ದೀನ್ ತಂಡದಿಂದ ಹೊರಬಿದ್ದಿದ್ದಾರೆ. ಬೆನ್ನು ನೋವಿನಿಂದ ಬಳಲುತ್ತಿರುವ ಸೈಫುದ್ದೀನ್ ಭಾರತ ವಿರುದ್ದದ ಟಿ20 ಸರಣಿಗೆ ಅಲಭ್ಯರಾಗಿದ್ದಾರೆ. ಸೈಫುದ್ದೀನ್ ಅಲಭ್ಯತೆಯನ್ನು ಬಾಂಗ್ಲಾ ಕ್ರಿಕೆಟ್ ಮಂಡಳಿ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಆಸ್ಟ್ರೇಲಿಯಾ vs ಶ್ರೀಲಂಕಾ ಟಿ20 ; ವಾಟರ್ ಬಾಯ್ ಆಗಿ ಬದಲಾದ ಪ್ರಧಾನಿ!

2019ರ ವಿಶ್ವಕಪ್ ಟೂರ್ನಿಯಿಂದಲೇ ಬೆನ್ನು ನೋವಿಗೆ ತುತ್ತಾಗಿದ್ದ ಸೈಫುದ್ದೀನ್, ಆಸ್ಟ್ರೇಲಿಯಾ ವಿರುದ್ದದ ಪಂದ್ಯದಿಂದಲೂ ಹೊರಗುಳಿದಿದ್ದರು. 22 ವರ್ಷದ ಸೈಫುದ್ದೀನ್‌ಗೆ ಹೆಚ್ಚಿನ ಚಿಕಿತ್ಸೆ ಹಾಗೂ ವಿಶ್ರಾಂತಿಯ ಅಗತ್ಯವಿದೆ. ಹೀಗಾಗಿ ಭಾರತ ವಿರುದ್ದದ ಟೂರ್ನಿಯಿಂದ ಹೊರಗುಳಿಯಲಿದ್ದಾರೆ ಎಂದು ಬಾಂಗ್ಲಾ ಕ್ರಿಕೆಟ್ ಮಂಡಳಿ ಹೇಳಿದೆ. 

ನವೆಂಬರ್ 3 ರಿಂದ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಟಿ20 ಸರಣಿ ಆರಂಭವಾಗಲಿದೆ. ಆಕ್ಟೋಬರ್ 30 ರಂದು ಬಾಂಗ್ಲಾದೇಶ ತಂಡ ಭಾರತಕ್ಕೆ ಆಗಮಿಸಲಿದೆ. 
 

Latest Videos
Follow Us:
Download App:
  • android
  • ios